ಕಾರಿಗೆ ಲಾರಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು - Mahanayaka
7:38 PM Friday 11 - September 2026

ಕಾರಿಗೆ ಲಾರಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

apagatha
27/01/2022

ಶಿವಮೊಗ್ಗ: ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಮಾಚೇನಹಳ್ಳಿ ಡೈರಿ ಬಳಿ ನಡೆದಿದೆ.

ಭದ್ರಾವತಿ ನಗರದ ಪೇಪರ್ ಟೌನ್ ನಿವಾಸಿಗಳಾಗಿರುವ ಷಣ್ಮುಖ ಮತ್ತು ರಾಮಚಂದ್ರ ಮೃತ ದುರ್ದೈವಿಗಳಾಗಿದ್ದಾರೆ. ಷಣ್ಮುಖ ಹಾಗೂ ರಾಮಚಂದ್ರ ಕೆಲಸದ ನಿಮಿತ್ತ ತೀರ್ಥಹಳ್ಳಿಗೆ ತೆರಳುತ್ತಿದ್ದರು. ಈ ವೇಳೆ ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಲಾರಿಯ ಸ್ಟೇರಿಂಗ್ ತುಂಡಾಗಿ ಆಗಿ ಅಪಘಾತ ನಡೆದಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಭದ್ರಾವತಿಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಸಿ.ಎಂ.ಇಬ್ರಾಹಿಂ ಕಾಂಗ್ರೆಸ್‍ ಗೆ ಗುಡ್‍ ಬೈ

ಡಿವೈಡರ್​ ಗೆ ಕಾರು ಡಿಕ್ಕಿ: ಚಾಲಕ ಸೇರಿ ಇಬ್ಬರು ಗಂಭೀರ

ಸಿದ್ದರಾಮಯ್ಯ ಮುಳುಗುತ್ತಿರುವ ಹಡಗು: ಸಚಿವ ಅಂಗಾರ

ಅಂಬೇಡ್ಕರ್ ಪ್ರತಿಮೆಗೆ ಅವಮಾನ: ವಿಧಾನಸೌಧದ ಎದುರು ಸಂವಿಧಾನ ಪರ ಸಂಘಟನೆಗಳಿಂದ ಪ್ರತಿಭಟನೆ

ಭೀಮ್ ಸೇನೆ ದಕ್ಷಿಣ ಕನ್ನಡ ವತಿಯಿಂದ ಸಂವಿಧಾನ ದಿನಾಚರಣೆ

 

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler