‘ನಿಧಾನವಾಗಿ ಚಲಿಸಿ’ ಬೋರ್ಡ್ ಗೆ ಡಿಕ್ಕಿ ಹೊಡೆದ ಕಾರು! - Mahanayaka

‘ನಿಧಾನವಾಗಿ ಚಲಿಸಿ’ ಬೋರ್ಡ್ ಗೆ ಡಿಕ್ಕಿ ಹೊಡೆದ ಕಾರು!

chikkamagaluru
10/06/2025


Provided by

ಚಿಕ್ಕಮಗಳೂರು : ಅಪಘಾತ ವಲಯ ನಿಧಾನವಾಗಿ ಚಲಿಸಿ ಎಂಬ ಬೋರ್ಡ್ ಗೇ ಕಾರೊಂದು ಡಿಕ್ಕಿ ಹೊಡೆದ ಘಟನೆ ಮೂಡಿಗೆರೆ ತಾಲೂಕಿನ ಮುದ್ರೆಮನೆ ಕಾಫಿ ಕ್ಯೂರಿಂಗ್ ಬಳಿ ನಡೆದಿದೆ.

ಅಪಘಾತದ ವೇಳೆ ಕಾರಿನಲ್ಲಿ ಮೂವರು ಯುವಕರಿದ್ದು ಕಾರಿನ ಏರ್ ಬ್ಯಾಗ್ ಓಪನ್‌ ಆಗಿದ್ದರಿಂದ ಮೂವರು ಯುವಕರು ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ.

ಅಪಘಾತ ವಲಯ ನಿಧಾನವಾಗಿ ಚಲಿಸಿ ಎಂಬ ಬೋರ್ಡ್ ಇರುವ ಪ್ರದೇಶದಲ್ಲೇ ಮರವೊಂದಕ್ಕೆ ಡಿಕ್ಕಿ ಹೊಡೆದ ಕಾರು ಬಳಿಕ ಬೋರ್ಡ್ ಗೆ ಡಿಕ್ಕಿ ಹೊಡೆದು ನಿಂತಿದೆ.

ಬೆಂಗಳೂರು ಮೂಲದ ಶ್ರೀಮಂತರ ಮನೆಯ ಯುವಕರ ಕಾರಿದು ಅಂತ ಹೇಳಲಾಗಿದೆ. ಕಾರು ಅಪಘಾತವಾಗುತ್ತಿದ್ದಂತೆ ಯುವಕರು ಕಾರಿನ ನಂಬರ್ ಪ್ಲೇಟ್ ಕಿತ್ತು ಹಾಕಿದರಲ್ಲದೇ,  ದೂರು ನೀಡುವುದಿಲ್ಲ ಎಂದು ಹೇಳಿ  ವಾಪಸ್ ತೆರಳಿದ್ದಾರೆ ಎಂದು ಹೇಳಲಾಗಿದೆ.

ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಪಘಾತದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ