ಕಾರು—ಜೀಪ್ ನಡುವೆ ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ

02/04/2024
ಚಿಕ್ಕಮಗಳೂರು: ಎರಡು ವಾಹನಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿರುವ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಹೆಬ್ಬರಿಗೆ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಧರ್ಮಸ್ಥಳ ದಿಂದ ದರ್ಶನ ಮುಗಿಸಿ ಬೆಂಗಳೂರಿಗೆ ಹೋಗುತ್ತಿದ್ದ ಬೊಲೆರೋ ವಾಹನ ಹಾಗೂ ಚಿಕ್ಕಮಗಳೂರಿನಿಂದಾ ಬಿಳಗಲಿಗೆ ಹೋಗುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
ಬೊಲೆರೋ ಜೀಪ್ ನಲಿದ್ದ ಮೂವರಿಗೆ ಸಣ್ಣ ಪುಟ್ಟ ಗಾಯಾಗಳಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ.
ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth