ಧರ್ಮಸ್ಥಳ ಪ್ರಕರಣ ತನಿಖೆ ನಡೆಸುತ್ತಿದ್ದ ಎಸ್ ಐಟಿ ತಂಡದ ಎಸ್ ಪಿಯ ಕಾರು ಪಲ್ಟಿ!
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನಡೆದ ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (SIT) ಎಸ್ ಪಿ ಹಾಗೂ ಇತರ ಉನ್ನತ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಪೊಲೀಸ್ ಇಲಾಖೆಯ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಬೆಳ್ತಂಗಡಿಯ ಎಸ್ ಐಟಿ ಕಚೇರಿಯಿಂದ ಎಸ್ ಪಿ ಸಿ.ಎ. ಸೈಮನ್, ಇನ್ಸ್ಪೆಕ್ಟರ್ ಕುಸುಮಾಧರ್ ಹಾಗೂ ಸಿಬ್ಬಂದಿ ಮಂಜುನಾಥ್ ಅವರು ಚಿಕ್ಕಮಗಳೂರು ಜಿಲ್ಲಾ ಎಸ್ ಪಿ ಹಾಗೂ ಎಸ್ ಐಟಿ ತನಿಖಾಧಿಕಾರಿಯಾಗಿರುವ ಜಿತೇಂದ್ರ ಕುಮಾರ್ ದಯಾಮ ಅವರನ್ನು ಭೇಟಿ ಮಾಡಲು ತೆರಳುತ್ತಿದ್ದರು.
ಧರ್ಮಸ್ಥಳ ಪ್ರಕರಣದ ಪ್ರಮುಖ ಸಾಕ್ಷಿ ಚಿನ್ನಯ್ಯ ಅವರು ಹೈಕೋರ್ಟ್ನಲ್ಲಿ ರಿಟ್ ಅರ್ಜಿ (Petiton) ಸಲ್ಲಿಸಿರುವ ವಿಷಯದ ಕುರಿತು ಮಾತುಕತೆ ನಡೆಸಲು ಅಧಿಕಾರಿಗಳು ಚಲಿಸುತ್ತಿದ್ದ ವೇಳೆ ಇಂದು ಮಧ್ಯಾಹ್ನ ಈ ಅಪಘಾತ ಸಂಭವಿಸಿದೆ.
ಅಪಘಾತದ ಸಮಯದಲ್ಲಿ ಕಾರಿನಲ್ಲಿ ಚಾಲಕ ಸೇರಿದಂತೆ ಒಟ್ಟು ನಾಲ್ಕು ಜನರಿದ್ದರು. ಅದೃಷ್ಟವಶಾತ್ ಕಾರು ಪಲ್ಟಿಯಾದರೂ ಯಾರಿಗೂ ಯಾವುದೇ ರೀತಿಯ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಅಧಿಕಾರಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಸದ್ಯ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD
























