ಕಾಂಗ್ರೆಸ್ ತೊರೆದು ಜೆಡಿಎಸ್ ಗೆ ಸೇರ್ಪಡೆಯಾಗಿದ್ದ ಗ್ರಾಮದ ಮುಖಂಡನ ಕಾರಿಗೆ ಬೆಂಕಿ!

car fire
23/04/2023

ಹನೂರು: ಕಾಂಗ್ರೆಸ್ ತೊರೆದು ಜೆಡಿಎಸ್ ಗೆ ಸೇರ್ಪಡೆಯಾಗಿದ್ದ ಹನೂರು ವಿಧಾನ ಸಭಾ ಕ್ಷೇತ್ರ ತೆಳ್ಳನೂರು ಗ್ರಾಮದ ಮುಖಂಡನ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ.

ಚಾಮರಾಜನಗರ ಜಿಲ್ಲೆಯ ಹನೂರು ಕ್ಷೇತ್ರದಲ್ಲಿ ದ್ವೇಷ ರಾಜಕಾರಣ ಆರಂಭವಾಗಿದ್ದು, ರಾತ್ರಿ ಮನೆಯ ಮುಂದೆ ನಿಲ್ಲಿಸಿದ್ದ ಕಾರು ಬೆಳಗಾಗುವುದರೊಳಗೆ ಸುಟ್ಟು ಭಸ್ಮವಾಗಿದೆ. ಇದು ರಾಜಕೀಯ ದ್ವೇಷದಿಂದ ನಡೆಸಿರುವ ಕೃತ್ಯ ಎಂಬ ಆರೋಪ ಕೇಳಿ ಬಂದಿದೆ.

ಘಟನಾ ಸ್ಥಳಕ್ಕೆ ಜೆಡಿಎಸ್ ಅಭ್ಯರ್ಥಿ ಎಂ.ಆರ್.ಮಂಜುನಾಥ್ ಭೇಟಿ ನೀಡಿದ್ದು, ಕಾರಿಗೆ ಬೆಂಕಿ ಹಚ್ಚಿರುವ ಕೃತ್ಯವನ್ನು ಕಂಡು ನೊಂದ ಅವರು ಕಣ್ಣೀರು ಹಾಕಿದ ಘಟನೆಯೂ ನಡೆಯಿತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version