ಚಾರ್ಮಾಡಿ ಘಾಟಿಯಲ್ಲಿ ಪಲ್ಟಿಯಾದ ಕಾರು: ಮೂವರು ಪ್ರಾಣಾಪಾಯದಿಂದ ಪಾರು
ಮೂಡಿಗೆರೆ (ಚಿಕ್ಕಮಗಳೂರು): ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ನಡೆದಿದೆ. ಮಳೆ ಹಾಗೂ ತೀವ್ರ ತಿರುವಿನ ನಡುವೆಯೇ ನಡೆದ ಈ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮೂಡಬಿದಿರೆಯಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಕಾರು, ಚಾರ್ಮಾಡಿ ಘಾಟಿಯ ಅಣ್ಣಪ್ಪಸ್ವಾಮಿ ದೇಗುಲದ ಡೌನ್ ಹತ್ತಿರ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರು ರಸ್ತೆಯ ಮತ್ತೊಂದು ಬದಿಗೆ ಬಿದ್ದಿದ್ದು, ಅಲ್ಪ ಅಂತರದಷ್ಟರಲ್ಲಿ ದೊಡ್ಡ ಅನಾಹುತ ತಪ್ಪಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಚಾರ್ಮಾಡಿ ಘಾಟಿ ಮಾರ್ಗವು ಬೆಟ್ಟ–ಗುಡ್ಡಗಳು, ಪ್ರಪಾತಗಳು ಹಾಗೂ ತೀವ್ರ ತಿರುವುಗಳಿಂದ ಕೂಡಿದ್ದು, ಮಳೆಯಾದಾಗ ಚಾಲನೆ ಅತ್ಯಂತ ಎಚ್ಚರಿಕೆಯಿಂದ ಮಾಡಬೇಕಾಗಿದೆ. ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD
























