ಕಾರು ಪಲ್ಟಿ: ತಂದೆ ಸಾವು, ಮಗಳ ಸ್ಥಿತಿ ಗಂಭೀರ
25/11/2024
ಹಾಸನ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಚಾಲಕ ಸಾವನ್ನಪ್ಪಿ, ಮಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೇಲೂರು ತಾಲೂಕಿನ ಕೊರಟಗೆರೆಯಲ್ಲಿ ನಡೆದಿದೆ.
ಚಿಕ್ಕಮಗಳೂರು ಮೂಲದ ದಯಾನಂದ್(46) ಮೃತಪಟ್ಟವರಾಗಿದ್ದಾರೆ. ಮಗಳು ನಿಶ್ಮಿತಾ(16) ಗಂಭೀರವಾಗಿ ಗಾಯಗೊಂಡಿರುವ ಬಾಲಕಿಯಾಗಿದ್ದಾಳೆ. ಆಕೆಯನ್ನು ಸದ್ಯ ಬೇಲೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೇಲೂರಿನಲ್ಲಿ ಬಟ್ಟೆ ಅಂಗಡಿ ಇಟ್ಟುಕೊಂಡಿರುವ ದಯಾನಂದ್ ಅಲ್ಲೇ ವಾಸವಿದ್ದರು. ಭಾನುವಾರ ಚಿಕ್ಕಮಗಳೂರಿಗೆ ಮಗಳೊಂದಿಗೆ ತೆರಳಿದ್ದರು. ಸೋಮವಾರ ಚಿಕ್ಕಮಗಳೂರಿನಿಂದ ಬೇಲೂರಿಗೆ ಬರುತ್ತಿದ್ದ ವೇಳೆ ಕಾರು ಪಲ್ಟಿಯಾಗಿ ಅಡಿಕೆ ತೋಟಕ್ಕೆ ಬಿದ್ದಿದೆ. ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: