ರಸ್ತೆ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ಕಾರಿಗೆ ಬೆಂಕಿ! - Mahanayaka

ರಸ್ತೆ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ಕಾರಿಗೆ ಬೆಂಕಿ!

mangalore car
26/11/2022

ಮಂಗಳೂರು: ನಗರದ ಬಲ್ಮಠ ರಸ್ತೆ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ಕಾರೊಂದು ಬೆಂಕಿಗಾಹುತಿಯಾದ ಘಟನೆ ಇಂದು ಅಪರಾಹ್ನ ಸಂಭವಿಸಿದೆ.

ಬಲ್ಮಠ ಜ್ಯೂಸ್ ಜಂಕ್ಷನ್ ಬಳಿ ಪಾರ್ಕ್ ಮಾಡಲಾಗಿದ್ದ ಫೋರ್ಡ್‌ ಕಂಪೆನಿ ಕಾರು ಬೆಂಕಿಗಾಹುತಿಯಾಗಿದೆ. ಕಾರಿನ ಇಂಜಿನ್ ನಲ್ಲಿ ದಟ್ಟವಾದ ಹೊಗೆ ಬರಲಾರಂಭಿಸಿ ನೋಡ – ನೋಡುತ್ತಿದ್ದಂತೆ ಪರಿಸರವೆಲ್ಲ ಹೊಗೆಯಿಂದ ಆವೃತವಾಗಿತ್ತು. ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ.

ಬೆಂಕಿಗೆ ಕಾರಣ ಏನೆಂದು ತಿಳಿದು ಬಂದಿಲ್ಲವಾದರೂ ಶಾರ್ಟ್ ಸರ್ಕಿಟ್ ಬೆಂಕಿಗೆ ಕಾರಣವೆಂದು ಶಂಕಿಸಲಾಗಿದೆ.  ಸ್ಥಳಕ್ಕೆ  ಎಸಿಪಿ ಗೀತಾ ಕುಲಕರ್ಣಿ, ಕದ್ರಿ ಠಾಣಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ