ರಸ್ತೆ ಬದಿ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಕಾರು: 7 ಕಾರ್ಮಿಕರಿಗೆ ಗಂಭೀರ ಗಾಯ - Mahanayaka

ರಸ್ತೆ ಬದಿ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಕಾರು: 7 ಕಾರ್ಮಿಕರಿಗೆ ಗಂಭೀರ ಗಾಯ

acident1
09/04/2024


Provided by

ಉತ್ತರ ಕನ್ನಡ: ರಸ್ತೆ ಬದಿ ಮಲಗಿದ್ದವರ ಮೇಲೆಯೇ ಕಾರೊಂದು ಹರಿದ ಪರಿಣಾಮ 7 ಮಂದಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಶಿರಸಿ ಕುಮಟಾ ರಸ್ತೆಯ ಹೀಪ್ನಳ್ಳಿ ಕ್ರಾಸ್ ನಲ್ಲಿ ನಡೆದಿದೆ.


Provided by

ಕುಮಟಾ ರಸ್ತೆಯಲ್ಲಿರುವ ಹೀಪ್ನಳ್ಳಿ ಕ್ರಾಸ್ ನಲ್ಲಿ ರಸ್ತೆ ಕೆಲಸವನ್ನು ಮಾಡಿದ ಬಳಿಕ ಕಾರ್ಮಿಕರೆಲ್ಲರೂ ವಿಶ್ರಾಂತಿಗೆಂದು ರಸ್ತೆ ಬದಿಯಲ್ಲೇ ಮಲಗಿದ್ದರು. ಈ ವೇಳೆ ವೇಗವಾಗಿ ಬಂದ ಕಾರು ಮಲಗಿದ್ದವರ ಮೇಲೆ ಹರಿದಿದೆ ಎಂದು ತಿಳಿದು ಬಂದಿದೆ.

ಒಟ್ಟು 7 ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಇದರಲ್ಲಿ ಮಗು ಸೇರಿ ಇನ್ನೊಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.


Provided by

ಗಾಯಾಳುಗಳು ಹೈದರಾಬಾದ್ ನ ಮೆಹಬೂಬ ನಗರದ ನಿವಾಸಿಗಳಾಗಿದ್ದಾರೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

 

ಇತ್ತೀಚಿನ ಸುದ್ದಿ