ಅಯ್ಯಪ್ಪ ಸ್ವಾಮಿ ಜಾತ್ರೆ ವೇಳೆ ಭಕ್ತರ ಮೇಲೆ ಹರಿದ ಕಾರು: ಯುವತಿ ಸಾವು, 8 ಮಂದಿಗೆ ಗಾಯ - Mahanayaka

ಅಯ್ಯಪ್ಪ ಸ್ವಾಮಿ ಜಾತ್ರೆ ವೇಳೆ ಭಕ್ತರ ಮೇಲೆ ಹರಿದ ಕಾರು: ಯುವತಿ ಸಾವು, 8 ಮಂದಿಗೆ ಗಾಯ

karavara
15/01/2025


Provided by

ಕಾರವಾರ: ಅಯ್ಯಪ್ಪ ಸ್ವಾಮಿ ದೇವಸ್ಥಾನದ ಜಾತ್ರೆ ವೇಳೆ ಭಕ್ತರ ಮೇಲೆ ಕಾರು ಹರಿದ ಪರಿಣಾಮ ಒಬ್ಬಳು ಯುವತಿ ಸಾವನ್ನಪ್ಪಿ, 8 ಮಂದಿ ಗಾಯಗೊಂಡಿರುವ ಘಟನೆ  ಸಿದ್ಧಾಪುರದ ರವೀಂದ್ರ ನಗರದಲ್ಲಿ ನಡೆದಿದೆ.

ಸಿದ್ಧಾಪುರ ಕವಲಕೊಪ್ಪದ ದೀಪಾ ರಾಮಗೊಂಡ(21) ಮೃತಪಟ್ಟ ಯುವತಿಯಾಗಿದ್ದಾರೆ. ಸಿದ್ಧಾಪುರದ ಕಲ್ಪನಾ, ಜಾನಕಿ, ಚೈತ್ರಾ, ಜ್ಯೋತಿ, ಮಾದೇವಿ, ಗೌರಿ, ರಾಮಪ್ಪ ಹಾಗೂ ಗಜಾನನ ಭಟ್ ಎಂಬವರು ಗಂಭೀರವಾಗಿ ಗಾಯಗೊಂಡವರು ಎಂದು ತಿಳಿದು ಬಂದಿದೆ. ಗಾಯಾಳುಗಳಿಗೆ ಸಿದ್ಧಾಪುರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಪೈಕಿ ಕಲ್ಪನಾ ನಾಯ್ಕ್ ಹಾಗೂ ಇನ್ನೊಬ್ಬರು ಮಹಿಳೆಯನ್ನು ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ.

ಮಕರ ಸಂಕ್ರಾಂತಿ ಪ್ರಯುಕ್ತ ಸಿದ್ಧಾಪುರದ ರವೀಂದ್ರ ನಗರದಲ್ಲಿ ಅಯ್ಯಪ್ಪ ಸ್ವಾಮಿ ಜಾತ್ರಾ ಮಹೋತ್ಸವ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ.  ಸಿದ್ಧಾಪುರದ ರೋಶನ್ ಫೆರ್ನಾಂಡಿಸ್ ಎಂಬಾತ ಚಲಾಯಿಸುತ್ತಿದ್ದ ಇಕೋ ಕಾರು ಅಪಘಾತಕ್ಕೆ ಕಾರಣವಾಗಿದೆ. ಕುಡಿದು ವಾಹನ ಚಲಾಯಿಸಿದ ಆರೋಪ ಕೂಡ ಕೇಳಿ ಬಂದಿದೆ.

ಅಪಘಾತದ ನಂತರ ಚಾಲಕ ಪರಾರಿಯಾಗಲು ಯತ್ನಿಸಿದ ವೇಳೆ ಉದ್ರಿಕ್ತ ಜನರು ಕಲ್ಲು ತೂರಾಟ ನಡೆಸಿ ಕಾರನ್ನು ನಿಲ್ಲಿಸಿದ್ದಾರೆ. ಬಳಿಕ ಆತನನ್ನು ಪೊಲೀಸರ ವಶಕ್ಕೆ ನೀಡಿದ್ದಾರೆ. ಘಟನೆ ಸಂಬಂಧ ಸಿದ್ಧಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/Ci8F6ckDmAbCBQyqgLqOPx

ಇತ್ತೀಚಿನ ಸುದ್ದಿ