ಇಬ್ಬರು ಪ್ರಯಾಣಿಕರಿದ್ದ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಟ್ಯಾಂಕರ್!
ಕುಂಭಾಸಿ ಸಮೀಪದ ಕೊರವಡಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಬೆಳಿಗ್ಗೆ ಕಾರಿಗೆ ಟ್ಯಾಂಕರ್ ವೊಂದು ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ಕಾರು ನಜ್ಜುಗುಜ್ಜಾಗಿದೆ. ಚಾಲಕ ಸಹಿತ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಕುಂದಾಪುರ ಕಡೆಯಿಂದ ಉಡುಪಿಯತ್ತ ಸಾಗುತ್ತಿದ್ದ ಕಾರಿಗೆ ಹಿಂಭಾಗದಿಂದ ಬಂದ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಚಾಲಕ ಸಹಿತ ಇಬ್ಬರು ಮಹಿಳಾ ಪ್ರಯಾಣಿಕರಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ.
ಟ್ಯಾಂಕರ್ ಹಾಗೂ ಕಾರು ಎರಡೂ ವಾಹನಗಳು ಕುಂದಾಪುರ ಕಡೆಯಿಂದ ಉಡುಪಿಯತ್ತ ಸಾಗುತ್ತಿದ್ದು, ಕೊರವಡಿ ಕ್ರಾಸ್ ಬಳಿ ಆಟೋ ರಿಕ್ಷಾವೊಂದು ಎದುರುಗಡೆಯಿಂದ (ಒನ್ ವೇ) ಬಂದಾಗ ಕಾರು ಚಾಲಕ ಬಲಭಾಗಕ್ಕೆ ಕಾರು ಚಲಾಯಿಸಿದ್ದು ಹಿಂಬದಿಯಿದ್ದ ಟ್ಯಾಂಕರ್ ಕಾರಿಗೆ ಡಿಕ್ಕಿಯಾಗಿದೆ ಎಂದು ತಿಳಿದುಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka