ಭೀಕರ ಘಟನೆ: ಓಮ್ನಿಗೆ ಡಿಕ್ಕಿ ಹೊಡೆದ ಕಾರು: ಓಮ್ನಿಯಲ್ಲೇ ಬಾಲಕಿ ಸಜೀವ ದಹನ!

ನೆಲಮಂಗಲ: ಓಮ್ನಿ ಕಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಓಮ್ನಿ ಕಾರು ಹೊತ್ತಿ ಉರಿದಿದ್ದು, ಪರಿಣಾಮವಾಗಿ ಬಾಲಕಿಯೊಬ್ಬಳು ಸಜೀವ ದಹನವಾಗಿರುವ ದಾರುಣ ಘಟನೆ ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿ ಮಾದಾವರದ ಬಳಿ ನಡೆದಿದೆ.
ಮೃತ ಬಾಲಕಿಯನ್ನು ದಿವ್ಯ ಎಂದು ಗುರುತಿಸಲಾಗಿದೆ . ಓಮಿನಿಯಲ್ಲಿದ್ದ 7 ಜನರಿಗೆ ಸುಟ್ಟ ಗಾಯಗಳಾಗಿದೆ. ಮಾಯಾಂಕ್, ಮಂಜುಳಾ, ಸುನಿತಾ, ತರುಣ್, ಮಹೇಶ್, ನಮನ್ ಹಾಗೂ ಶಾಂತಿಲಾಲ್ ಘಟನೆಯಲ್ಲಿ ಗಾಯಗೊಂಡಿದ್ದು, ಈ ಪೈಕಿ ನಮನ್, ಸುನಿತಾ, ಮಾಯಾಂಕ್ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ವಿವರ: ಮಹೇಶ್ ಎಂಬುವರು ತಮ್ಮ ಕುಟುಂಬ ಸಮೇತ ಅಬ್ಬಿಗೆರೆಯಲ್ಲಿರುವ ಸಹೋದರನ ಮನೆಗೆ ತೆರಳಿ ರಾತ್ರಿ ಊಟ ಮುಗಿಸಿಕೊಂಡು ಓಮ್ನಿ ಕಾರಿನಲ್ಲಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ಓಮ್ನಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಓಮ್ನಿ ಪಲ್ಟಿಯಾಗಿ ಪೆಟ್ರೋಲ್ ಟ್ಯಾಂಕ್ ಓಪನ್ ಆಗಿದ್ದು, ಬೆಂಕಿ ಹತ್ತಿಕೊಂಡಿದೆ. ಈ ವೇಳೆ ಕಾರಿನಲ್ಲಿದ್ದ 7 ಮಂದಿ ಹರಸಾಹಸ ಪಟ್ಟು ಹೊರಗೆ ಬಂದಿದ್ದಾರೆ. ಆದರೆ ದಿವ್ಯಳ ಕಾಲು ಕಾರಿನಲ್ಲಿ ಸಿಲುಕಿಕೊಂಡಿದ್ದು, ಹೊರಬರಲಾಗದೆ ಬೆಂಕಿ ಜ್ವಾಲೆಗೆ ಸಿಲುಕಿ ಮೃತಪಟ್ಟಿದ್ದಾರೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ನೆಲಮಂಗಲ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth