ಕಾರಿನ ಟೈರ್ ಸ್ಫೋಟ: ಜನರ ಮೇಲೆ ಕಾರು ಹರಿದು ಮೂವರು ಸಾವು
08/11/2025
ಆಂಧ್ರಪ್ರದೇಶ: ಕಾರೊಂದರ ಟೈರ್ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕಾರು ಜನರ ಮೇಲೆ ಹರಿದಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಜಗ್ಗಂಪೇಟ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೋರ್ತಾ ಆನಂದರಾವ್, ಮೋರ್ತಾ ಕೊಂಡಯ್ಯ ಮತ್ತು ಕಾಕಡ ರಾಜು ಎಂಬವರು ಅಪಘಾತದಲ್ಲಿ ಮೃತಪಟ್ಟವರಾಗಿದ್ದಾರೆ.
ಅಣ್ಣಾವರಂನಿಂದ ಜಗ್ಗಂಪೇಟೆಗೆ ಕಾರು ತೆರಳುತಿತ್ತು. ಕಾರಿನ ಟೈರ್ ಏಕಾಏಕಿ ಸ್ಫೋಟಗೊಂಡಿದ್ದು, ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಹಾಘೂ ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ ಹೊಡೆದಿದೆ. ನಂತರ ಬಸ್ ನಿಲ್ದಾಣಕ್ಕೆ ನುಗ್ಗಿ ಜನರಿಗೆ ಡಿಕ್ಕಿ ಹೊಡೆದಿದೆ., ಪರಿಣಾಮವಾಗಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD



























