6:53 PM Wednesday 15 - October 2025

ಕಾರು-ಟ್ರಕ್ ನಡುವೆ ಭೀಕರ ಅಪಘಾತ: ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸಾವು

mysore
02/02/2022

ಮೈಸೂರು: ಕಾರು ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೌಳೇಶ್ವರ ರೆಡ್ಡಿ ಹಾಗೂ ತೇಜಸ್ ಮೃತ ಇಂಜಿನಿಯರಿಂಗ್ ವಿದ್ಯಾರ್ಥಿಗಳು. ಹಾಸನದ ಮಲ್ನಾಡ್ ಇಂಜಿನಿಯರಿಂಗ್ ಕಾಲೇಜಿನ 2ನೇ ವರ್ಷದ ವಿದ್ಯಾರ್ಥಿಗಳಾದ ಮೌಳೇಶ್ವರ ರೆಡ್ಡಿ, ಸುಹಾನ್, ತೇಜಸ್ ಹಾಗೂ ಶುಭಂಕರ ಕಾರಿನಲ್ಲಿ ಮೈಸೂರಿಗೆ ಹೊರಟಿದ್ದರು. ಈ ವೇಳೆ ಕಾರು ಟ್ರಕ್​ ಗೆ​ ಡಿಕ್ಕಿಯಾಗಿದ್ದು, ಅಪಘಾತದ ತೀವ್ರತೆಗೆ ಇಬ್ಬರು ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಇನ್ನಿಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದು, ಮೈಸೂರಿನ ಡಿ.ಆರ್.ಎಂ. ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಸಂಬಂಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ನರೇಂದ್ರ ಮೋದಿ ಕಾಲದಲ್ಲಿ ದೇಶ ಸಾಲದ ಸುಳಿಯಲ್ಲಿ ಸಿಲುಕಿದೆ: ಸಿದ್ದರಾಮಯ್ಯ

ಹಾಲಿಗೆ ರಾಸಾಯನಿಕ ಮಿಶ್ರಣ ಪ್ರಕರಣ: ನಾಲ್ವರು ಆರೋಪಿಗಳ ಸೆರೆ

ಪೊಲೀಸ್ ವಾಹನ ಕಳವು: ಆರೋಪಿಯ ಬಂಧನ

ಸಂವಿಧಾನ ಪುನಃ ಬರೆಯುವ ಅಗತ್ಯವಿದೆ: ತೆಲಂಗಾಣ ಸಿಎಂ ಕೆ.ಸಿ.ಆರ್. ವಿವಾದಾತ್ಮಕ ಹೇಳಿಕೆ

ಬೆಡ್ ​ರೂಂನಿಂದ ಠಾಣೆಯ ಮೆಟ್ಟಿಲೇರಿದ ಐಎಎಸ್​ ದಂಪತಿ ಜಗಳ

 

ಇತ್ತೀಚಿನ ಸುದ್ದಿ

Exit mobile version