ಕಾರು–ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿ: ಎರಡೂ ವಾಹನಗಳು ಜಖಂ, ಕಾರು ಚಾಲಕನಿಗೆ ಗಾಯ

ಚಿಕ್ಕಮಗಳೂರು: ಕಾರು–ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರು ಚಾಲಕ ಗಾಯಗೊಂಡು, ಎರಡೂ ವಾಹನಗಳೂ ನಜ್ಜುಗುಜ್ಜಾಗಿರುವ ಘಟನೆ ಕಡೂರು ತಾಲೂಕಿನ ಮಚ್ಚೇರಿ ಗ್ರಾಮದ ಬಳಿ ನಡೆದಿದೆ.
ಡಿಕ್ಕಿಯ ರಭಸಕ್ಕೆ ಟ್ರ್ಯಾಕ್ಟರ್ ನ ದೊಡ್ಡ ಚಕ್ರಗಳು ಮುರಿದ್ದು, ಕಾರಿನ ಡ್ರೈವರ್ ಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಕಾರಿನ ಚಾಲಕ ವಿನಯ್ ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ.
ಅಪಘಾತಕ್ಕೆ ರಸ್ತೆ ಬದಿ ಬೆಳೆದಿರುವ ಗಿಡಘಂಟೆಗಳೇ ಕಾರಣ ಎಂದು ಆರೋಪ ಕೇಳಿ ಬಂದಿದೆ. ಗಿಡಘಂಟೆಗಳಿದ್ದ ಕಾರಣ ತಿರುವಿನಲ್ಲಿ ರಸ್ತೆ ಕಾಣದೇ ಅಫಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ಕಡೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನಲ್ಲಿ ಈ ಘಟನೆ ನಡೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD