12:54 PM Thursday 20 - November 2025

ಕಾರು– ಟಿಟಿ ವಾಹನ ಮುಖಾಮುಖಿ ಡಿಕ್ಕಿ: ಮಗು ಸಹಿತ ಇಬ್ಬರು ಸಾವು: 7 ಪ್ರವಾಸಿಗರಿಗೆ ಗಾಯ

chikamagalore
11/05/2023

ಚಿಕ್ಕಮಗಳೂರು: ಕಾರು ಹಾಗೂ ಟಿಟಿ ವಾಹನ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೆಂಗಳೂರು ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206 ರ ಮತಿಘಟ್ಟ ಕ್ರಾಸ್ ಬಳಿ ನಡೆದಿದೆ.

ಗಿರಿಧರ್ (46) ಮಯಂಕ್(3) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಹೊನ್ನಾವರದಿಂದ ಸಂಬಂಧಿಕರ ಮದುವೆಗೆಂದು ಗಿರಿಧರ್ ಕುಟುಂಬ ಪ್ರಯಾಣಿಸುತ್ತಿತ್ತು. ಈ ವೇಳೆ ಕೇರಳ ಕಡೆಯಿಂದ ಬಂದ ಪ್ರವಾಸಕ್ಕೆ ಬರುತ್ತಿದ್ದ ಟಿ.ಟಿ.ವಾಹನ ಕಾರಿಗೆ ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಟಿಟಿ ವಾಹನ ಪಲ್ಟಿಯಾಗಿದೆ. ಕಾರಿನಲ್ಲಿದ್ದ ಮಗು ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಟಿಟಿ ವಾಹನದಲ್ಲಿದ್ದ ಕೇರಳ ಮೂಲದ 7 ಪ್ರವಾಸಿಗರಿಗೆ ಗಾಯವಾಗಿದೆ. ಘಟನೆ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version