ಕಾರಿನ ಟೈರ್ ಬ್ಲಾಸ್ಟ್: ಸ್ಥಳದಲ್ಲಿಯೇ ಇಬ್ಬರ ಸಾವು - Mahanayaka
6:25 PM Thursday 16 - October 2025

ಕಾರಿನ ಟೈರ್ ಬ್ಲಾಸ್ಟ್: ಸ್ಥಳದಲ್ಲಿಯೇ ಇಬ್ಬರ ಸಾವು

accident
18/01/2022

ಚಿಕ್ಕಮಗಳೂರು: ಕಾರಿನ ಟೈರ್ ಬ್ಲಾಸ್ಟ್ ಆಗಿ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಹರಿಹರಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಂಭವಿಸಿದೆ.


Provided by

ಕೊಪ್ಪದ ಗುಣವಂತೆ ಮೆಡಿಕಲ್​​ ಮಾಲೀಕ ರಾಜಶೇಖರ್ ಹಾಗೂ ಆಲ್ದೂರಿನ ಮಣಿಕಂಠ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಆಗುಂಬೆಯಿಂದ ಕೊಪ್ಪಕ್ಕೆ ತೆರಳುತ್ತಿರುವಾಗ ಕೊಪ್ಪ ಹರಿಹರಪುರ ರಸ್ತೆಯ ಬಳಿ ಬರುವ ನಾಗಲಾಪುರ ಸೇತುವೆ ಸಮೀಪ ಈ ಅಪಘಾತ ನಡೆದಿದೆ. ಕಾರಿನಲ್ಲಿ ಒಟ್ಟು ನಾಲ್ಕು ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಕಾರಿನಲ್ಲಿ‌ ಇನ್ನೂ ಳಿದ ಇಬ್ಬರಿಗೆ ಗಂಭೀರ ಗಾಯವಾಗಿದೆ. ಕಾರು ಸಂಪೂರ್ಣ ಜಖಂಗೊಂಡಿದ್ದು, ಹರಿಹರಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಭೂಕಂಪನ: 26 ಮಂದಿ ಸಾವು

ಭಾರತದ ಈಶಾನ್ಯ ಭಾಗದಲ್ಲಿ ಕಂಪಿಸಿದ ಭೂಮಿ: ರಿಕ್ಟರ್​ ಮಾಪಕದಲ್ಲಿ 4.9 ತೀವ್ರತೆ ದಾಖಲು

ಸಾಹಿತಿ ಚಂದ್ರಶೇಖರ್ ಕಂಬಾರ ಅವರಿಗೆ ಪತ್ನಿ ವಿಯೋಗ 

ಮಾನವಹಕ್ಕುಗಳ ಉಲ್ಲಂಘನೆ: 12 ಸಾವಿರಕ್ಕೂ ಹೆಚ್ಚು ಮಂದಿಯ ಅಕ್ರಮ ಬಂಧನ; ವಿಶ್ವಸಂಸ್ಥೆ ಕಳವಳ

ವರದಕ್ಷಿಣೆ ಕೊಡದಿದ್ದರೆ ಬೆತ್ತಲೆ ಚಿತ್ರ ವೈರಲ್ ಮಾಡುತ್ತೇನೆಂದ ಪತಿ: ಪತ್ನಿಯಿಂದ ದೂರು

 

ಇತ್ತೀಚಿನ ಸುದ್ದಿ