4:41 AM Thursday 29 - January 2026

ರಾಹುಲ್ ಗಾಂಧಿಯನ್ನು ಅಪಹಾಸ್ಯ ಮಾಡಿ ಟ್ವೀಟ್ ಮಾಡಿದ್ದ ಬಿಜೆಪಿ ಐಟಿ ಸೆಲ್ ಮುಖ್ಯಸ್ಥನಿಗೆ ಸಂಕಷ್ಟ: ಕೇಸ್ ಫೈಲ್

28/06/2023

ಟ್ವಿಟರ್ ನಲ್ಲಿ ಟ್ವೀಟ್ ಮಾಡಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಅಪಹಾಸ್ಯ ಮಾಡಿದ ಆರೋಪದ ಮೇಲೆ ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ಕಾಂಗ್ರೆಸ್ ದೂರು ದಾಖಲಿಸಿದೆ. ಕಾಂಗ್ರೆಸ್ ಮುಖಂಡ ರಮೇಶ್ ಬಾಬು ಅವರು ಬೆಂಗಳೂರಿನಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದುರುದ್ದೇಶಪೂರಿತ ಪೋಸ್ಟ್ ಗಳಿಗಾಗಿ ಈ ಪ್ರಕರಣ ದಾಖಲಿಸಲಾಗಿದೆ.

ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರು ಜೂನ್ 17 ಕ್ಕೆ ಒಂದು ಟ್ವೀಟ್ ಮಾಡಿದ್ದರು. ಅದರಲ್ಲಿ ಹೀಗೆ ಬರೆದಿದ್ದರು. ‘ರಾಹುಲ್ ಗಾಂಧಿ ಅಪಾಯಕಾರಿ ಮತ್ತು ಕಪಟ ಆಟವನ್ನು ಆಡುತ್ತಿದ್ದಾರೆ’ ಎಂದು ಮಾಳವೀಯ ಟ್ವೀಟ್ ಮಾಡಿದ್ದರು.

ಮತ್ತೊಂದು ಟ್ವೀಟ್ ನಲ್ಲಿ, ಬಿಜೆಪಿ ನಾಯಕ ಅನಿಮೇಟೆಡ್ ವೀಡಿಯೊವನ್ನು ಹಂಚಿಕೊಂಡಿದ್ದರು. ಇದು ಕೂಡಾ ನಕಲಿಯಾಗಿತ್ತು.

ಇನ್ನು ಈ ಪ್ರಕರಣದ ಕುರಿತು ಮಾತನಾಡಿರುವ ಸಚಿವ ಪ್ರಿಯಾಂಕ್ ಖರ್ಗೆ , ಬಿಜೆಪಿ ನಾಯಕರು ಗುಂಪುಗಳ ನಡುವೆ ದ್ವೇಷವನ್ನು ಸೃಷ್ಟಿಸಿ ಸಮಾಜದಲ್ಲಿ ದ್ವೇಷವನ್ನು ಹರಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಅತ್ತ ಬಿಜೆಪಿ ಈ ದೂರು ರಾಜಕೀಯ ಪ್ರೇರಿತವಾಗಿದೆ ಎಂಬ ದೂರಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version