11:39 PM Monday 1 - September 2025

ರೌಡಿಶೀಟರ್‌ ಮಣಿಕಂಠ ರಾಠೋಡ್ ವಿರುದ್ಧ ರಾಜಸ್ಥಾನದಲ್ಲಿ ಪ್ರಕರಣ ದಾಖಲು

manikandan
09/05/2023

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿರುವ ಆರೋಪದ ಮೇಲೆ ಚಿತ್ತಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ರೌಡಿಶೀಟರ್‌ ಮಣಿಕಂಠ ರಾಠೋಡ್ ವಿರುದ್ಧ ರಾಜಸ್ಥಾನದಲ್ಲಿ ಪ್ರಕರಣ ದಾಖಲಾಗಿದೆ.

ಖರ್ಗೆ ಅವರ ವಿರುದ್ಧ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್‌ ಮತ್ತು ರಾಜಸ್ಥಾನದ ಬಿಜೆಪಿ ಶಾಸಕ ಮದನ್ ದಿಲಾವರ್ ವಿರುದ್ಧ ರಾಜಸ್ಥಾನ ಪೊಲೀಸರು ಕೊಲೆ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ.

ರಾಜಸ್ಥಾನ ಕಾಂಗ್ರೆಸ್ ಕಾರ್ಯದರ್ಶಿ ರಾಮ್ ಸಿಂಗ್ ಕಸ್ವಾನ್ ನೀಡಿದ ದೂರಿನ ಮೇರೆಗೆ ಸಂಜಯ್ ವೃತ್ತ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

“ರಾಮಗಂಜ್ ಮಂಡಿ ಕ್ಷೇತ್ರದ ಬಿಜೆಪಿ ಶಾಸಕ ಮದನ್ ದಿಲಾವರ್ ಮತ್ತು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಚಿತ್ತಾಪುರದಿಂದ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್‌ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ” ಎಂದು ಕೊತ್ವಾಲಿ ಎಸಿಪಿ ನರೇಂದ್ರ ಕುಮಾರ್ ಮಾಹಿತಿ ನೀಡಿದ್ದಾರೆ.

ಮದನ್ ದಿಲಾವರ್ ಹಾಲಿ ಶಾಸಕರಾಗಿರುವುದರಿಂದ ಈ ಪ್ರಕರಣವನ್ನು ಸಿಬಿ-ಸಿಐಡಿ ತನಿಖೆ ನಡೆಸಲಿದೆ ಎಂದು ಪ್ರಕರಣದ ತನಿಖಾಧಿಕಾರಿಯೂ ಆಗಿರುವ ಕುಮಾರ್ ಹೇಳಿದ್ದಾರೆ.

ಇಬ್ಬರ ವಿರುದ್ಧ ಐಪಿಸಿ ಸೆಕ್ಷನ್ 302 (ಕೊಲೆ), 506 (ಕ್ರಿಮಿನಲ್ ಬೆದರಿಕೆ), ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದೇ ವಿಚಾರವಾಗಿ ಉತ್ತರಾಖಂಡ ಮತ್ತು ಬಿಹಾರ ಕಾಂಗ್ರೆಸ್ ಕೂಡ ರಾಠೋಡ್‌ ವಿರುದ್ಧ ಪೊಲೀಸರಿಗೆ ದೂರು ನೀಡಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ

Exit mobile version