6:06 PM Sunday 28 - September 2025

ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ, ಲೈಂಗಿಕ ದೌರ್ಜನ್ಯ: ಹಿಂದೂ ಜಾಗರಣ ವೇದಿಕೆಯ ಮುಖಂಡನ ವಿರುದ್ಧ ಪ್ರಕರಣ ದಾಖಲು

samith raj dharegudde
28/09/2025

ಬಜಪೆ:  ಯುವತಿಯ ನಗ್ನ ಫೋಟೋ ಪಡೆದು ನಿರಂತರ ಲೈಂಗಿಕ ದೌರ್ಜನ್ಯ ಎಸಗಿರುವ ಮತ್ತು ಕೊಲೆ ಬೆದರಿಕೆ ಹಾಕಿರುವ ಸಂಬಂಧ ಹಿಂದೂ ಜಾಗರಣಾ ವೇದಿಕೆಯ ಮುಖಂಡ ಸಮಿತ್ ರಾಜ್ ಅಲಿತಾಸ್ ಸಮಿತ್ ರಾಜ್ ಧರೆಗುಡ್ಡೆ ಎಂಬಾತನ ವಿರುದ್ಧ ಶನಿವಾರ ಬಜೆಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂತ್ರಸ್ತೆಯ ಸಹೋದರನಿಗೆ 2023ರಲ್ಲಿ ಅಪಘಾತವಾಗಿತ್ತು. ಮಂಗಳೂರಿನ ವಿನಯ್ ಆಸ್ಪತ್ರೆಯಲ್ಲಿ ಆತ ದಾಖಲಾಗಿದ್ದ ಸಂದರ್ಭದಲ್ಲಿ ಆರ್ಥಿಕ ಸಮಸ್ಯೆಯ ಹಿನ್ನೆಲೆ ವ್ಯಕ್ತಿಯೊಬ್ಬರು ಸಮಿತ್ ರಾಜ್ ಧರೆಗುಡ್ಡೆಯ ನಂಬರ್ ನೀಡಿ, ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಅವರ ಆಪ್ತ ಎಂದು ಪರಿಚಯಿಸಿದ್ದರು. ಹೀಗಾಗಿ ಸಮಿತ್ ರಾಜ್ ಗೆ ಸಂತ್ರಸ್ತೆ ಕರೆ ಮಾಡಿ, ಕಷ್ಟ ಹೇಳಿಕೊಂಡಿದ್ದರು.

ಇದಾದ ನಂತರವೂ ಸಮಿತ್ ರಾಜ್ ಪದೇ ಪದೇ ಸಂತ್ರಸ್ತೆಗೆ ಕರೆ ಮಾಡಿ ಒಳ್ಳೆಯ ರೀತಿಯಲ್ಲೇ ಮಾತನಾಡುತ್ತಿದ್ದ. ನಂತರ ತಾನು ಪ್ರೀತಿಸುತ್ತಿದ್ದು ಮದುವೆಯಾಗುತ್ತೇನೆ ಎಂದು ಯುವತಿಗೆ ಹೇಳಿದ್ದ. ಇದರಿಂದ ಆತಂಕಗೊಂಡ ಯುವತಿ ಬಳಿಕ ಆಕೆಯ ಮನೆಯಲ್ಲಿ ಮಾತನಾಡುವಂತೆ ಹೇಳಿದ್ದಳು, ಆಕೆಯ ತಾಯಿಯ ಜೊತೆಗೆ ಸಮಿತ್ ರಾಜ್ ಮಾತನಾಡಿದ ವೇಳೆ ತಾಯಿ, ಸಣ್ಣ ವಯಸ್ಸಿನಲ್ಲೇ ಮಗಳಿಗೆ ಮದುವೆ ಮಾಡಿಸುವುದಿಲ್ಲ ಎಂದಿದ್ದರು ಎನ್ನಲಾಗಿದೆ.

ನಂತರವೂ ಸಮಿತ್ ರಾಜ್ ನೊಂದ ಯುವತಿಗೆ ನಿರಂತೆ ಫೋನ್ ಕರೆ ಮಾಡುವುದು, ಕರೆ ಸ್ವೀಕರಿಸದಿದ್ದರೆ ಮನೆಯ ಕಾಲೇಜಿನ ಬಳಿ, ಮನೆಯ ಬಳಿ ಬರುವುದಾಗಿ ಬೆದರಿಕೆ ಹಾಕುತ್ತಿದ್ದು, ಆತನ ಒತ್ತಡಕ್ಕೆ ಮಣಿದು ಇಷ್ಟವಿಲ್ಲದಿದ್ದರೂ ಯುವತಿ ಆತನೊಂದಿಗೆ ಮಾತನಾಡುವಂತಾಗಿತ್ತು. 2023ರ ಮಾರ್ಚ್ 23ರಂದು ಕಾಲೇಜು ಬಿಟ್ಟು ಮನೆಗೆ ಬರುತ್ತಿದ್ದ ವೇಳೆ ಆರೋಪಿ ಕಾರಿನಲ್ಲಿ ಬಂದು ಆಕೆಯನ್ನು ಕರೆದೊಯ್ದು ಬಜಪೆ ವಿಮಾನ ನಿಲ್ದಾಣದ ನಿರ್ಜನ ಪ್ರದೇಶದಲ್ಲಿ ಕಾರು ನಿಲ್ಲಿಸಿ ಬಲಾತ್ಕಾರವಾಗಿ ಬಟ್ಟೆ ಬಿಚ್ಚಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದು, ಈ ವೇಳೆ ಆಕೆ ಬೊಬ್ಬೆ ಹೊಡೆದಾಗ ಬಾಯಿಗೆ ಕೈ ಅಡ್ಡ ಇಟ್ಟು, ಕೊಲೆ ಬೆದರಿಕೆ ಹಾಕಿದ್ದ. ಯುವತಿ ಆತನೊಂದಿಗೆ ಹೋಗಲು ಒಪ್ಪದೇ ಇದ್ದಾಗ ಅಶ್ಲೀಲ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ ಮಾನ ಹರಾಜು ಮಾಡುವುದಾಗಿ ಬೆದರಿಸುತ್ತಿದ್ದ ಮತ್ತು ನಗ್ನ ಫೋಟೋ ಕಳುಹಿಸುವ ಬೆದರಿಕೆ ಹಾಕುತ್ತಿದ್ದರಿಂದ ನಗ್ನ ಫೋಟೋವನ್ನು ಆತನಿಗೆ ಕಳುಹಿಸಿದ್ದೆ ಎಂದು ಸಂತ್ರಸ್ತೆ ದೂರಿನಲ್ಲಿ ಮಾಹಿತಿ ನೀಡಿದ್ದಾಳೆ ಎಂದು ತಿಳಿದು ಬಂದಿದೆ.

ಇನ್ನೂ ಸಮಿತ್ ರಾಜ್ ನ ಕಿರುಕುಳದ ಬಗ್ಗೆ ಮೂಡುಬಿದಿರೆ ಶಾಸಕರಿಗೆ ಹೇಳುವುದಾಗಿ ತಿಳಿಸಿದ ವೇಳೆ  ನಾನು ಪ್ರಭಾವಿ ವ್ಯಕ್ತಿಯಾಗಿದ್ದು, ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾ ಮಟ್ಟದ ನಾಯಕನಾಗಿದ್ದೇನೆ. ಮೂಡುಬಿದಿರೆ ಶಾಸಕರ ಆಪ್ತನೂ ಹೌದು. ಮೂಡುಬಿದಿರೆ ಶಾಸಕರು ನಾನು ಹೇಳಿದಂತೆ ಕೇಳುತ್ತಾರೆ. ನಾನು ಹೇಳಿದರೆ ಅವರು ನನ್ನೊಂದಿಗೆ ಪೊಲೀಸ್ ಸ್ಟೇಷನ್ ಗೂ ಬರುತ್ತಾರೆ. ನನ್ನ ಹಿಂದೆ ಸಂಘಟನೆ ಇದೆ. ಯಾವ ಪೊಲೀಸರಿಗೂ ಏನೂ ಮಾಡಲು ಆಗುವುದಿಲ್ಲ. ದೂರು ನೀಡಿದರೆ, ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸದ್ಯ ಆರೋಪಿಯ ವಿರುದ್ಧ ವಿವಿಧ ಪ್ರಕರಣಗಳಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕಾನೂನು ಕ್ರಮ ಕೈಗೊಂಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version