ಮೆಟ್ರೋದಲ್ಲಿ ಮಹಿಳೆಯರ ಫೋಟೋ, ವಿಡಿಯೋ ಕ್ಲಿಕ್ಕಿಸಿ ಇನ್ ಸ್ಟಾದಲ್ಲಿ ಅಪ್ ಲೋಡ್: ಕೇಸ್ ದಾಖಲು

ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ ಸಂಚರಿಸುವ ಮಹಿಳಾ ಪ್ರಯಾಣಿಕರ ರಹಸ್ಯ ಫೋಟೋ, ವಿಡಿಯೋಗಳನ್ನು ಕ್ಲಿಕ್ಕಿಸಿ ಇನ್ ಸ್ಟಾದಲ್ಲಿ ಅಪ್ ಲೋಡ್ ಮಾಡುತ್ತಿದ್ದ ಕಿಡಿಗೇಡಿಯ ವಿರುದ್ಧ ಬನಶಂಕರಿ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಪ್ರಯಾಣಿಕರ ಸೋಗಿನಲ್ಲಿ ಬಂದಿರುವ ಕಿಡಿಗೇಡಿಗಳು ಮೆಟ್ರೋ ನಿಲ್ದಾಣಗಳು, ಹಾಗೂ ರೈಲಿನೊಳಗೆ ರಹಸ್ಯವಾಗಿ ಹೆಣ್ಣುಮಕ್ಕಳ ಅಸಂಬದ್ಧ ಫೋಟೋ, ವಿಡಿಯೋಗಳನ್ನು ಕ್ಲಿಕ್ಕಿಸಿರುವುದಲ್ಲದೇ ಅಶ್ಲೀಲ ಕ್ಯಾಪ್ಷನ್ ನೀಡಿ ಇನ್ ಸ್ಟಾಗ್ರಾಂ ಖಾತೆಯಲ್ಲಿ ಅಪ್ ಲೋಡ್ ಮಾಡುತ್ತಿರುವುದು ಕಂಡು ಬಂದಿದೆ.
5 ಸಾವಿರಕ್ಕೂ ಅಧಿಕ ಹಿಂಬಾಲಕರನ್ನು ಹೊಂದಿರುವ metro_chicks ಎಂಬ ಖಾತೆಯಲ್ಲಿ ಏಪ್ರಿಲ್ 11ರಿಂದಲೂ ವಿಡಿಯೋ, ಫೋಟೋಗಳನ್ನು ಅಪ್ ಲೋಡ್ ಮಾಡಲಾಗಿದೆ.
ಬನಶಂಕರಿ ಠಾಣೆ ಪೊಲೀಸರು ಘಟನೆ ಸಂಬಂಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD