ಕಾಮಿಡಿ ನಟ ಹುಲಿ ಕಾರ್ತಿಕ್ ವಿರುದ್ಧ ಜಾತಿನಿಂದನೆ ಕೇಸ್
ಬೆಂಗಳೂರು: ಇತ್ತೀಚೆಗೆ ಖಾಸಗಿ ವಾಹಿನಿಯ ಅವಾರ್ಡ್ ಕಾರ್ಯಕ್ರಮದಲ್ಲಿ ಕಾಮಿಡಿ ನಟ ಹುಲಿ ಕಾರ್ತಿಕ್ ನೀಡಿರುವ ಹೇಳಿಕೆ ವಿವಾದಕ್ಕೀಡಾಗಿದ್ದು, ಇದೀಗ ಕಾರ್ತಿಕ್ ವಿರುದ್ಧ ಜಾತಿ ನಿಂದನೆ ಆರೋಪದ ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ ಎಂದು ವರದಿಗಳಿಂದ ತಿಳಿದು ಬಂದಿದೆ.
ಕಿರುತೆರೆ ರಿಯಾಲಿಟಿ ಶೋಗಳಲ್ಲಿ ಹೆಸರು ಮಾಡುತ್ತಿರುವ ನಟ ಕಾರ್ತಿಕ್ ಇದೀಗ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಇದೀಗ ಗಂಭೀರ ಪ್ರಕರಣವಾಗಿರುವ ಅಟ್ರಾಸಿಟಿ ಕೇಸ್ ಈತನ ಮೇಲೆ ದಾಖಲಾಗಿದೆ.
ಖಾಸಗಿ ಚಾನಲ್ ನ ಅನುಬಂಧ ಅವಾರ್ಡ್ ಕಾರ್ಯಕ್ರಮದಲ್ಲಿ ಕಾರ್ತಿಕ್ ಆಡಿರುವ ಮಾತು ಇದೀಗ ಬೋವಿ ಜನಾಂಗಕ್ಕೆ ಅವಮಾನವನ್ನುಂಟು ಮಾಡಿತ್ತು. ಜಾತಿಯನ್ನು ನಿಂದಿಸಿ ಮಾತನಾಡಿರುವ ಹುಲಿ ಕಾರ್ತಿಕ್ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಕಾರ್ತಿಕ್ ಮಾತ್ರವಲ್ಲದೇ ಸಂಭಾಷಣೆಕಾರ,ಕಾರ್ಯಕ್ರಮದ ನಿರ್ಮಾಪಕ ,ನಿರ್ದೇಶಕನ ಮೇಲೂ ಕೇಸ್ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಹುಲಿ ಕಾರ್ತಿಕ್ ಎ—1 ಆರೋಪಿಯಾಗಿ ಉಲ್ಲೇಖಿಸಲಾಗಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ದೂರು ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: