ಜಾತಿ ಸಮೀಕ್ಷೆ ಮುಂದೂಡುವುದಿಲ್ಲ: ಸಿಎಂ ಸಿದ್ದರಾಮಯ್ಯ

siddaramaiah
19/09/2025

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗ ಶಾಸನಬದ್ಧ ಸಂಸ್ಥೆಯಾಗಿದ್ದು, ಅವರಿಗೆ ಯಾವುದೇ ನಿರ್ದೇಶನಗಳನ್ನು ನೀಡಲು ಸಾಧ್ಯವಿಲ್ಲ. ಸಮೀಕ್ಷೆಯ ಬಗ್ಗೆ ಅಭಿಪ್ರಾಯಗಳನ್ನು ಆಯೋಗಕ್ಕೆ ವಿವರಿಸಲಾಗಿದ್ದು, ಅಂತಿಮ ನಿರ್ಧಾರವನ್ನು ಆಯೋಗವೇ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಾರ್ತಾಸೌಧದಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಆರ್ಥಿಕ, ಸಾಮಾಜಿಕ ಸಮೀಕ್ಷೆಗೆ ಸಚಿವ ಸಂಪುಟದಲ್ಲಿ ವಿರೋಧ ವ್ಯಕ್ತವಾಗಿರುವ ಬಗ್ಗೆ ಪರ್ತಕರ್ತರ ಪ್ರಶ್ನೆಗೆ ಉತ್ತರಿಸಿ, ಬಿಜೆಪಿಯವರು ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದು, ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿಯಾಗಿದೆ ಎಂದು ಆರೋಪಿಸುತ್ತಿದ್ದಾರೆ. ಇದನ್ನು ಎಲ್ಲ ಸಚಿವರೂ ಒಕ್ಕೊರಲಿನಿಂದ ಖಂಡಿಸಬೇಕು ಎಂದು ಎಲ್ಲ ಸಚಿವರಿಗೂ ಸೂಚಿಸಲಾಗಿದೆ. ಸಮೀಕ್ಷೆಯು ಸೆಪ್ಟೆಂಬರ್ 22ರಿಂದ ಪ್ರಾರಂಭವಾಗಲಿದ್ದು, ಸಮೀಕ್ಷೆಯನ್ನು ಮುಂದೂಡುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version