ಸಿಡಿಲು ಬಡಿದು ಮನೆಗೆ ಹಾನಿಯಾದ ಘಟನೆ ಮಂಗಳೂರು ನಗರ ಹೊರವಲಯದ ವಾಮಂಜೂರು ಅಮೃತ ನಗರದಲ್ಲಿ ನಡೆದಿದೆ. ಗೋಪಾಲ ಪೂಜಾರಿ ಎಂಬುವವರ ಮನೆಗೆ ಸಿಡಿಲು ಬಡಿದಿದೆ. ಸಿಡಿಲು ಬಡಿದ ಪರಿಣಾಮ ಮನೆಯ ವಿದ್ಯುತ್ ಉಪಕರಣಗಳಿಗೆ ಹಾನಿಯಾಗಿದೆ. ಶಾರ್ಟ್ ಸರ್ಕ್ಯೂಟ್ನಿಂದ ಸ್ವಿಚ್ ಬೋರ್ಡ್ ಹಾಗೂ ಮೀಟರ್ ಬಾಕ್ಸ್ ಗೆ ಹಾನಿಯಾಗಿದೆ. ಮನೆಯಲ್ಲಿದ್ದ ಮಹಿಳೆ ...
ಕೋಟ: ಒಂದು ಕಾರು ಹಾಗೂ ಮೂರು ಬೈಕ್ಗಳ ಮಧ್ಯೆ ಕೋಡಿ ಕನ್ಯಾನದ ಅಂಗನವಾಡಿ ಶಾಲೆಯ ಬಳಿ ಅ.15ರಂದು ರಾತ್ರಿ ವೇಳೆ ಸಂಭವಿಸಿದ ಸರಣಿ ಅಪಘಾತದಲ್ಲಿ ಸವಾರೊಬ್ಬರು ಮೃತಪಟ್ಟು ಇಬ್ಬರು ಗಾಯಗೊಂಡ ಬಗ್ಗೆ ವರದಿಯಾಗಿದೆ. ಮೃತರನ್ನು ಬೈಕ್ ಸವಾರ ರವಿ ಪೂಜಾರಿ ಎಂದು ಗುರುತಿಸಲಾಗಿದೆ. ಇನ್ನೆರೆಡು ಬೈಕ್ಗಳ ಸವಾರರಾದ ಪ್ರಶಾಂತ್ ಹಾಗೂ ಚರಣ್ ಮಣಿಪಾಲ ಆಸ್ಪ...
ಕಾರ್ಕಳ: ಪರಶುರಾಮನ ಕಂಚಿನ ಪ್ರತಿಮೆ ಸ್ಥಾಪಿಸುವುದಾಗಿ ನಂಬಿಸಿ ಫೈಬರ್ ಪ್ರತಿಮೆ ಸ್ಥಾಪಿಸುವ ಮೂಲಕ ಜನತೆಗೆ ‘ನಂಬಿಕೆ ದ್ರೋಹ’ ಎಸಗಿದ ಕಾರ್ಕಳ ಶಾಸಕ ಸುನಿಲ್ ಕುಮಾರ್ ವಿರುದ್ಧ ಕಾರ್ಕಳ ಬ್ಲಾಕ್ ಕಾಂಗ್ರೆಸ್, ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಸೋಮವಾರ ಕಾರ್ಕಳ ತಾಲೂಕು ಬೈಲೂರಿನ ಉಮಿಕಲ್ ಬೆಟ್ಟದ ಬುಡದಲ್ಲಿ ಪ್ರತಿಭಟನೆ ನಡೆಸಲಾಯಿತು. ...
ಗ್ಯಾರಂಟಿಗಳ ಭರವಸೆಯನ್ನು ನೀಡಿ ಅಧಿಕಾರಕ್ಕೆ ಬಂದ ರಾಜ್ಯ ಕಾಂಗ್ರೆಸ್ ಸರಕಾರ ಕೇವಲ ಮೂರು-ನಾಲ್ಕು ತಿಂಗಳಲ್ಲೇ ತನ್ನ ಮುಖವಾಡವನ್ನು ಕಳಚಿ, ಲೂಟಿ ಮತ್ತು ಕಮಿಷನ್ ದಂಧೆ ಮೂಲಕ ತನ್ನ ಭ್ರಷ್ಟಾಚಾರದ ಪರಂಪರೆಯನ್ನು ಮೇಳೈಸಿಕೊಂಡು ಕರ್ನಾಟಕವನ್ನು ಕಾಂಗ್ರೆಸ್ಸಿನ ಏಟಿಎಂ ಆಗಿಸಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹ...
ಉಡುಪಿ: ಭಾರತೀಯ ಹವಾಮಾನ ಇಲಾಖೆಯ ವರದಿಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ, ಸಮುದ್ರದಲ್ಲಿ ಚಂಡಮಾರುತ ಬೀಸುವ ಸಂಭವವಿರುವುದರಿಂದ ಸಮುದ್ರದ ಅಲೆಗಳ ಎತ್ತರ ಹೆಚ್ಚಾಗಲಿದ್ದು ಮತ್ತು ಗಾಳಿಯ ವೇಗವು ಗಂಟೆಗೆ 40--45 ದಿಂದ 55 ಕಿ.ಮೀ ಇರುವುದರಿಂದ ಸಮುದ್ರವು ಪಕ್ಷಬ್ಬದತೆಯಿಂದ ಕೂಡಿರುತ್ತದೆ. ಹಾಗಾಗಿ ಮುಂದಿನ 4 ದಿನಗಳ ಕಾಲ...
ಬೆಂಗಳೂರು: “ನಾನು ಹೇಡಿ ಅಲ್ಲ, ಹೆದರಿ ಎಲ್ಲಿಯೂ ಓಡಿ ಹೋಗಲ್ಲ. ಮಾಜಿ ಸಿಎಂ, ನಕಲಿ ಸ್ವಾಮಿ ಬ್ಲಾಕ್ ಮೇಲ್, ಲೂಟಿ ರವಿ ಎಲ್ಲರಿಗೂ ತಕ್ಕ ಉತ್ತರ ಕೊಡುತ್ತೇನೆ. ಅವರದೆಲ್ಲ ಬಿಚ್ಚಿಡುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸ ಹಾಗೂ ಕುಮಾರಕೃಪ ಅತಿಥಿ ಗೃಹದ ಬಳಿ ಮಾಧ್ಯಮಗಳಿಗೆ ಅವರು ಸೋಮವ...
ಸ್ನೇಹಿತರೊಂದಿಗೆ ಹೊಳೆಗೆ ಈಜಲು ಇಳಿದ ವೇಳೆ ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಇಂದು ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕೆಯ್ಯೂರು ಗ್ರಾಮದ ಎರಕ್ಕಲ ಬಳಿ ನಡೆದಿದೆ. ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಹಾಜಿ ಎಂಬವರ ಪುತ್ರ ತಸ್ಲೀಮ್ (17) ಮೃತ ಬಾಲಕ. ಇವರು ಸುಳ್ಯದ ಅರಂತೋಡಿನಲ್ಲಿರುವ ತನ್ನ ಅಜ್ಜಿ ...
ಮಂಗಳೂರು: 4 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಂಗಳೂರಿನ ಬಜಾಲ್ ಫೈಜಲ್ ನಗರದ ತೌಸೀಫ್ ಎಂದು ಗುರುತಿಸಲಾಗಿದೆ. ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2015 ರಲ್ಲಿ ನಡೆದ ಗಲಾಟೆ, ದೊಂಬಿ ಹಾಗೂ ಮಾರ...
ಚಾಮರಾಜನಗರ ಸಾರ್ವಜನಿಕರಿಗೆ ಉಪಟಳ ನೀಡುತ್ತಿದ್ದ ಚಿರತೆ ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದ್ದು, ಇದೀಗ ಚಿರತೆಯನ್ನು ಸುರಕ್ಷಿತವಾಗಿ ಸೆರೆ ಹಿಡಿಯಲಾಗಿದೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಗುಂಡೇಗಾಲ ಗ್ರಾಮದಲ್ಲಿ ಚಿರತೆ ಸೆರೆಯಾಗಿದೆ. ಕಳೆದ ಒಂದು ತಿಂಗಳಿಂದ ಓಡಾಡುತ್ತಿದ್ದ ಚಿರತೆ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿತ್ತು. ...
ಉಡುಪಿ: ದಿ ಬುದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾ,ಉಡುಪಿ ಜಿಲ್ಲಾ ಘಟಕದ ವತಿಯಿಂದ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ನಾಗಪುರದಲ್ಲಿ ಲಕ್ಷಾಂತರ ಅನುಯಾಯಿಗಳೊಂದಿಗೆ ಬೌದ್ಧ ಧಮ್ಮಕ್ಕೆ ಮರಳಿದ ವಾರ್ಷಿಕ ದಿನದ ಪ್ರಯುಕ್ತ "ಧಮ್ಮ ದೀಕ್ಷಾ ದಿನಾಚರಣೆಯನ್ನು (ಧಮ್ಮ ಚಕ್ಕ ಪವತ್ತನ ದಿನ) " ಕಾರ್ಯಕ್ರಮವನ್ನು ಅಂಬೇಡ್ಕರ್ ಭವನ ಆದಿ ಉಡುಪಿಯಲ್ಲಿ ...