ಚಿಕ್ಕಮಗಳೂರು: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಅವಿನಾಶ್ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮೂಡಿಗೆರೆಯಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಸಾವಿರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದು, ಮೂಡಿಗೆರೆ ಪ್ರಮುಖ ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ಸಕಲೇಶಪುರ ಡಿವೈಎಸ್ಪಿ ಮಿ...
ದಕ್ಷಿಣ ಕನ್ನಡ: ನಿನ್ನೆ ರಾತ್ರಿಯಿಂದಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯವಸ್ತಗೊಂಡಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಮಂಗಳೂರಿನ ಪಂಪ್ ವೆಲ್ ಫ್ಲೈಓವರ್ ನಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ. ಅಲ್ಲದೇ ಪಂಪ್ ವೆಲ್, ಕಂಕನಾಡಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್ ಸೃಷ್ಟಿಯಾಗಿದೆ. ...
ಮಿಸೆಸ್ ಇಂಡಿಯಾ ಮಂಗಳೂರು ನಾಲ್ಕನೇ ಆವೃತ್ತಿಯ ಸ್ಪರ್ಧೆ ಮುಗಿದಿದೆ. ಮಿಸೆಸ್ ಇಂಡಿಯಾ ವಿಭಾಗದಲ್ಲಿ ಸೌಮ್ಯಲತಾ, ಸವಿತಾ ಚೇತನ್ ಕುಮಾರ್, ಬಬಿತಾ ನರೇಶ್ ಕಿರೀಟ ಮುಡಿಗೇರಿಸಿಕೊಂಡು ಮುಂದಿನ ಹಂತಕ್ಕೆ ಅರ್ಹತೆ ಪಡೆದಿದ್ದಾರೆ ಎಂದು ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ಇದರ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ದೀಪಕ್ ಗಂಗೊಳ್ಳಿ ತಿಳಿಸಿದರು. ...
ವಿದ್ಯುತ್ ಕಂಬಕ್ಕೆ ಕಾರೊಂದು ಡಿಕ್ಕಿ ಹೊಡೆದು ಚಾಲಕ ಅದೃಷ್ಟವಶಾತ್ ಪಾರಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕೊಡಂಗಾಯಿ ಎಂಬಲ್ಲಿ ನಡೆದಿದೆ. ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ವಿದ್ಯುತ್ ಕಂಬ ಮೇಲಕ್ಕೆದ್ದು, ಕಾರಿನ ಮೇಲೆ ಮುರಿದು ಬಿದ್ದಿದೆ. ಈ ಅವಘಡದಲ್ಲಿ ಚಾಲಕನಿಗೆ ಸಣ್ಣ -ಪುಟ...
ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಮಾಣಿ ಸಮೀಪದ ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡಿರುವ ಗಡಿಯಾರ ಸರಕಾರಿ ಶಾಲೆಯ ಬಳಿ ಗುಡ್ಡ ಕುಸಿತ ಉಂಟಾಗಿದೆ. ಇದರಿಂದ ಅಪಾಯಕಾರಿ ಸನ್ನಿವೇಶ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಇಲ್ಲಿನ...
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ರನ್ನು ರಾಜಕೀಯವಾಗಿ ಮುಗಿಸುವ ಹುನ್ನಾರ ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿದೆ ಎಂದು ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ಆರೋಪಿಸಿದ್ದಾರೆ. ಅವರು ಬಂಟ್ವಾಳದ ಮೆಲ್ಕಾರ್ನ ಬಿರ್ವ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಜನಾರ್ದನ ಪೂಜಾರಿಯವರ...
ಚಿಕ್ಕಮಗಳೂರು: ಬಜರಂಗದಳ ಮುಖಂಡ, ರೌಡಿಶೀಟರ್ ರಘು ಸಕಲೇಶಪುರ ಪ್ರಚೋದನಾಕಾರಿ ಹೇಳಿಕೆ ನೀಡಿ ಇದೀಗ ಪರಾರಿಯಾಗಿದ್ದು, ಆತನ ಸಹಚಾರರಿಗೆ ಸಂಕಷ್ಟ ಎದುರಾಗಿದೆ. ಅತ್ತ ಪ್ರಕರಣ ದಾಖಲಾಗುತ್ತಿದ್ದಂತೆ ರಘು ಸಕಲೇಶಪುರ ನಾಪತ್ತೆಯಾಗಿದ್ದ ಇದೀಗ ಈತನ ಪತ್ತೆಗಾಗಿ ಸಖಲೇಶಪುರ ಪೊಲೀಸರು ಮೂಡಿಗೆರೆ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಅವಿನಾಶ್ ಎಂಬ ಯುವಕ...
ತುಮಕೂರು: ಕೆರೆಯಲ್ಲಿ ಮುಳುಗುತ್ತಿದ್ದ ತನ್ನ ಇಬ್ಬರು ಮಕ್ಕಳನ್ನು ರಕ್ಷಿಸಿ, ಈಜು ಬಾರದ ತಾಯಿಯೊಬ್ಬಳು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ರಥಸಂದ್ರ ಗ್ರಾಮದ ಕೆರೆಯಲ್ಲಿ ನಡೆದಿದೆ. ಮನು(30) ಮೃತ ದುರ್ದೈವಿಯಾಗಿದ್ದಾರೆ. ಇಬ್ಬರು ಮಕ್ಕಳೊಂದಿಗೆ ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಸಂದರ್ಭ...
ರಿಕ್ಷಾ ಮತ್ತು ಕಾರು ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಮಗುಚಿ ಬಿದ್ದ ಘಟನೆಯು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಬಸ್ ನಿಲ್ದಾಣದ ಬಳಿ ರಾತ್ರಿ ನಡೆದಿದೆ. ವಾಹನಗಳಲ್ಲಿ ಇದ್ದವರು ಅಪಾಯದಿಂದ ಪಾರಾಗಿದ್ದಾರೆ. ಉಪ್ಪಿನಂಗಡಿ -- ಗುರುವಾಯನಕೆರೆ ರಸ್ತೆಯಲ್ಲಿ ಗುರುವಾಯನಕೆರೆ ಕಡೆಗೆ ಹೋಗುತ್ತಿದ್ದ ರಿಕ್ಷಾವೊಂದು ಉಪ್ಪಿನಂಗಡಿ ಕಡೆ ಬರುತ್ತ...
ಅಲ್ಪಕಾಲದ ಅನಾರೋಗ್ಯದಿಂದ ನಿನ್ನೆ ಮಂಗಳೂರಲ್ಲಿ ನಿಧನರಾಗಿದ್ದ ವಿಶ್ರಾಂತ ಪ್ರಾಧ್ಯಾಪಕ, ಚಿಂತಕ, ಸಾಹಿತ್ಯ ವಿಮರ್ಶಕ, ಮಾನವತಾವಾದಿ ಪಟ್ಟಾಭಿರಾಮ ಸೋಮಯಾಜಿಯವರ ಅಂತ್ಯಕ್ರಿಯೆಯು ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಕೂರಾಡಿಯಲ್ಲಿ ನಡೆಯಿತು. ಪಟ್ಟಾಭಿರಾಮ ಸೋಮಯಾಜಿಯವರ ಅಕ್ಕ ಅನಸೂಯ ಕಲ್ಕೂರರವರ ಮನೆಯ ವಠಾರದಲ್ಲಿ ನಡೆದ ಅಂತ್ಯಕ್ರಿಯೆಯಲ್...