ಕೊಟ್ಟಿಗೆಹಾರ: ಮಲೆಮನೆ ಗ್ರಾಮದ ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ಪೊಲೀಸರು ದಾಳಿ ನಡೆಸಿದ್ದು, 4 ಲೀಟರ್ ಕಳ್ಳಭಟ್ಟಿ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ಮಲೆಮಲೆ ಗ್ರಾಮದ ರೂಪ ಎಂಬುವವರಿಗೆ ಸೇರಿದ ಮನೆ ಹಾಗೂ ಕಾಫಿ ತೋಟದ ಮೇಲೆ ದಾಳಿ ನಡೆಸಿದ್ದ ಪೊಲೀಸರು 300 ಲೀಟರ್ ಬೆಲ್ಲದ ಕೊಳೆ, 4 ಲೀಟರ್ ಕಳ್ಳಭಟ್ಟಿ ಸರಾಯಿ ವಶಪಡಿಸಿಕೊಂಡು ...
ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರು ನಾಮಪತ್ರ ಸಲ್ಲಿಸಲು ಪೊಳಲಿ ಕ್ಷೇತ್ರದಿಂದ ಪಾದಯಾತ್ರೆಯ ಮೂಲಕ ಆಗಮಿಸಿದರು. ಇದೇ ವೇಳೆ ಈ ಸುದ್ದಿ ತಿಳಿದ ದಂಪತಿ ತಮ್ಮ ಮನೆಯಿಂದ ಸುಮಾರು 35 ಕಿಲೋ ಮೀಟರ್ ದೂರದವರೆಗೆ ಕಾಲ್ನಡಿಗೆಯಲ್ಲಿ ಆಗಮಿಸಿ ಪಕ್ಷದ ಅಭ್ಯರ್ಥಿಗೆ ಶುಭಾಶಯ ಕೋರಿದ ಘಟನೆ ಬಂಟ್ವಾಳದಲ್ಲಿ ನಡೆಯಿತು....
ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಸ್ಕೂಟರ್ ಅಪಘಾತದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಡೊಂಬಯ್ಯ ಮೂಲ್ಯ, ಮೃತಪಟ್ಟ ದುರ್ದೈವಿ. ಇವರು ಬಂಟ್ವಾಳ ಬೈಪಾಸ್ ರಸ್ತೆಯಲ್ಲಿ ಜಕ್ರಿಬೆಟ್ಟು ಕಡೆಯಿಂದ ಬಿಸಿರೋಡು ಕಡೆಗೆ ಬರುತ್ತಿದ್ದ ವೇಳೆ ಧರ್ಮಸ್ಥಳ ಕಡೆಯಿಂದ...
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕ್ಷೇತ್ರದ ಬಿಜೆಪಿ ಪಕ್ಷದ ಟಿಕೆಟ್ ವಂಚಿತರಾಗಿರುವ ಸಂಜೀವ ಮಠಂದೂರು ಅವರ ಮನೆಗಾಗಮಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಹಾಗೂ ಗಣೇಶ್ ಕಾರ್ಣಿಕ್ ಅವರನ್ನು ಕಾರ್ಯಕರ್ತರು ತರಾಟೆಗೆತ್ತಿಕೊಂಡ ಘಟನೆ ನಡೆಯಿತು. ಮನೆಗೆ ಆಗಮಿಸುತ್ತಿದ್ದಂತೆ ದಾರಿಮಧ್ಯವೇ ತಡೆದ ಕಾರ್ಯಕರ್ತರು,...
ಬಂಟ್ವಾಳ: ಕ್ಷೇತ್ರದ ಎಸ್ ಡಿ ಪಿ ಐ ಅಭ್ಯರ್ಥಿ ಇಲ್ಯಾಸ್ ಮುಹಮ್ಮದ್ ತುಂಬೆ ಅವರು ಎಪ್ರಿಲ್ 17ರಂದು ನಾಮ ಪತ್ರ ಸಲ್ಲಿಸಲಿದ್ದಾರೆ ಎಂದು ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಶಾಹುಲ್ ಎಸ್ ಎಚ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಬೆಳಿಗ್ಗೆ 10ಕ್ಕೆ ಕಾರ್ಯಕರ್ತರು,ಹಿತೈಷಿಗಳೊಂದಿಗೆ ಬಿ.ಸಿ ರೋಡಿನ ಕೈ...
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ನೆರಿಯಾ ಗ್ರಾಮದ ದೇವಗಿರಿಯ ಪಾರಮಲೆ ಎಂಬಲ್ಲಿ ಮಧ್ಯರಾತ್ರಿ ಕಿಡಿಗೇಡಿಗಳು ರಸ್ತೆ ಬದಿಯ ಗುಡ್ಡಕ್ಕೆ ಬೆಂಕಿ ಇಟ್ಟು ಪರಾರಿಯಾದ ಘಟನೆ ನಡೆದಿದೆ. ಈ ಪ್ರದೇಶದ ಸುತ್ತಮುತ್ತಲು ರಬ್ಬರ್ ತೋಟಗಳು ಇದ್ದು, ಇದೇ ವೇಳೆ ಜೋಸೆಫ್ ಎಂಬುವರು ಬೆಂಕಿ ಬಿದ್ದಿರುವುದನ್ನು ಗಮನಿಸಿ, ರಿಸ್ಕ್ಯೂ ಟೀಮ್ ಮೆಂಬರ್ಸ್ ಆಗಿರುವ...
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕ್ಷೇತ್ರದಲ್ಲಿ ಸತತ ಆರು ಬಾರಿ ಬಿಜೆಪಿ ಪಕ್ಷದ ಶಾಸಕರಾಗಿ ಆಯ್ಕೆಯಾಗಿದ್ದ ಸುಳ್ಯದ ಶಾಸಕ, ಸಚಿವ ಎಸ್. ಅಂಗಾರ ಅವರು ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಅವರು ತಮ್ಮ ಮನೆಯಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ, ಪಕ್ಷ ಟಿಕೆಟ್ ನೀಡದ ಕುರ...
ಕೊಳ್ಳೇಗಾಲ: ಬಿಜೆಪಿ ಸಂಭಾವ್ಯ ಅಭ್ಯರ್ಥಿ ಹಾಗೂ ಶಾಸಕ ಎನ್.ಮಹೇಶ್ ಬಿಎಸ್ ಪಿ ಪಕ್ಷದ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಬಿಎಸ್ಪಿ ಅಭ್ಯರ್ಥಿ ನಾಗರಾಜು ಅವರು ಮಂಗಳವಾರ ಉಪ ವಿಭಾಗಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಶಾಸಕ ಎನ್.ಮಹೇಶ್ ಅವರು ಸೋಮವಾರ ತಾಲ್ಲೂಕಿನ ಹೊಸ ಹಂಪಾಪುರ ಗ್ರಾಮದ ಬಿಜೆಪಿ ಬೂತ್ ಮಟ್ಟದ ಸಭೆಯಲ್ಲಿ ಕಾರ್ಯಕರ್ತರನ...
ಕೊಟ್ಟಿಗೆಹಾರ: ವಿಧಾನ ಸಭೆ ಚುನಾವಣೆ ಪ್ರಯುಕ್ತ ಮೂಡಿಗೆರೆ ವಿಧಾನ ಸಭಾ ಕ್ಷೇತ್ರದ ಬಣಕಲ್ ಹಾಗೂ ಕೊಟ್ಟಿಗೆಹಾರದಲ್ಲಿ 50ಕ್ಕೂ ಹೆಚ್ಚು ಸಿಆರ್ ಪಿಎಫ್ ಯೋಧರು ಮತ್ತು ಪೊಲೀಸರು ಸೋಮವಾರ ಸಿಪಿಐ ಸೋಮೇಗೌಡ ನೇತೃತ್ವದಲ್ಲಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ಪಥ ಸಂಚಲನ ನಡೆಸಿದರು. 'ಕಾನೂನು ಪಾಲನೆ ಹಾಗೂ ಶಾಂತಿ ಸುವ್ಯವಸ್ಥೆಯ ಹಿನ್ನಲೆಯಲ್ಲಿ ಜನರು...
ಈಗ ಮುಸ್ಲಿಂ ಬಾಂಧವರಿಗೆ ಉಪವಾಸದ ಸಮಯ. ಒಂದು ತಿಂಗಳ ಕಾಲ ಮುಸ್ಲಿಮರು ಉಪವಾಸ ವ್ರತಾಚರಣೆಯಲ್ಲಿರುತ್ತಾರೆ. ಮುಂಜಾನೆ ಎದ್ದು ಸಹರಿ ಊಟ ತಿಂದು ಸಂಜೆ 6:30 ರ ನಂತರ ಸಮಯಕ್ಕನುಗುಣವಾಗಿ ಇಫ್ತಾರ್ ಮೂಲಕ ಉಪವಾಸ ತೊರೆಯುತ್ತಾರೆ. ಕೆಲವರು ಮನೆಯಲ್ಲಿ, ಮಸೀದಿಗಳಲ್ಲಿ ಉಪವಾಸ ತೊರೆಯುತ್ತಾರೆ. ಇನ್ನೂ ಕೆಲವರು ವಿವಿಧ ಕೆಲಸದ ನಿಮಿತ್ತ ಪ್ರಯಾಣ ಹೋಗ...