ತಂದೆ ಹಾಗೂ ಮಗನಿಗೆ ದೇವಸ್ಥಾನಕ್ಕೆ ಪ್ರವೇಶ ನಿರಾಕರಿಸಿ ಜಾತಿನಿಂದನೆಗೈದ ಘಟನೆ ಕಂಬದಕೋಣೆ ಗ್ರಾಮದ ಕೊಕ್ಕೇಶ್ವರ ದೇವಸ್ಥಾನದಲ್ಲಿ ನ.28ರಂದು ನಡೆದಿದೆ. ಈ ಸಂಬಂಧ ಕಂಬದಕೋಣೆ ಗ್ರಾಮದ ಹಳಗೇರಿಯ 51ವರ್ಷದ ಶಿವರಾಮ ಎಂಬವರು ಅರ್ಚಕರ ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಶಿವರಾಮ ಅವರು ನ.28ರಂದು ಬೆಳಗ್ಗೆ ...
ಹಿರಿಯಡ್ಕ: ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ಬಗ್ಗೆ ಮಾನಸಿಕ ವಾಗಿ ನೊಂದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.27ರಂದು ಸಂಜೆ ವೇಳೆ ಪೆರ್ಡೂರು ಎಂಬಲ್ಲಿ ನಡೆದಿದೆ. ಮೃತರನ್ನು ಹೆಬ್ರಿಯ ಎಸ್ಆರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ, ಪೆರ್ಡೂರು ನಿವಾಸಿ ತೃಪ್ತಿ(17) ಎಂದು ಗುರುತಿಸ ಲಾಗಿದೆ....
ಮಂಗಳೂರು: ಗೂಂಡಾ ಕಾಯ್ದೆ, ಭಯೋತ್ಪಾದನಾ ನಿಗ್ರಹ ಮೊದಲಾದ ಕಾನೂನು ಜಾರಿಯಲ್ಲಿದ್ದರೂ, ಗೋಡೆ ಬರಹದಂತಹ ಪ್ರಕರಣಗಳು ನಡೆದಾಗ ಸರಕಾರ, ಪೊಲೀಸ್ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದರೆ, ಜಿಲ್ಲೆಯಲ್ಲಿ ಕುಕ್ಕರ್ ಬಾಂಬ್ ಸ್ಫೋಟದಂತಹ ಪ್ರಕರಣಗಳು ನಡೆಯುತ್ತಿರಲಿಲ್ಲ. ಸರಕಾರದ ವೈಫಲ್ಯದಿಂದ ಇಂದು ಸಮಾಜದಲ್ಲಿ ಗೊಂದಲ ಸೃಷ್ಟಿಗೆ ಕಾರಣವಾಗಿದೆ ಎಂದು ಮಾಜ...
ಮೈಸೂರು: ಅಕ್ಕ IAS ಅಕಾಡೆಮಿ ವತಿಯಿಂದ ಕನ್ನಡ ರಾಜ್ಯೋತ್ಸವ ಮತ್ತು ಪ್ರೊ.ಹೇಮಂತ್ ಕುಮಾರ್ ಅವರಿಗೆ ಸನ್ಮಾನ ಕಾರ್ಯಕ್ರಮವು ನವೆಂಬರ್ 30ರಂದು ಅಕ್ಕ ಐಎಎಸ್ ಅಕಾಡೆಮಿ ಮೈಸೂರಿನಲ್ಲಿ ನಡೆಯಲಿದೆ. ಮಧ್ಯಾಹ್ನ 2:30ರಿಂದ ಕಾರ್ಯಕ್ರಮ ಆರಂಭವಾಗಲಿದೆ. ಕಾರ್ಯಕ್ರಮವನ್ನು ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಹೇಮಂತ್ ಕುಮಾರ್ ಅವ...
ಅಪ್ರಾಪ್ತೆಗೆ ವಾಹನ ಚಲಾಯಿಸಲು ನೀಡಿ ಅಪಘಾತ ಸಂಭವಿಸಿದ ಕಾರಣಕ್ಕಾಗಿ ವಾಹನ ಮಾಲಕರಿಗೆ ನ್ಯಾಯಾಲಯ ಸಾವಿರಾರು ರೂಪಾಯಿ ದಂಡ ವಿಧಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ. ಕಾನೂನು ಬಾಹಿರವಾಗಿ ಅಪ್ರಾಪ್ತ ಬಾಲಕಿಗೆ ವಾಹನ ಚಲಾಯಿಸಲು ನೀಡಿದ ಕಾರಣಕ್ಕಾಗಿ ಮಾಲಕಿಗೆ ಬಂಟ್ವಾಳ ನ್ಯಾಯಾಲಯ 26,000 ದಂಡ ವಿಧಿಸಿದೆ. ಸಿದ್ದಕಟ...
ಹೆಬ್ರಿ: ಹಿರಿಯಡಕ ಪೊಲೀಸ್ ಠಾಣಾ ಕುಕ್ಕೆಹಳ್ಳಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಫಟನೆ ನ.28ರ ಬೆಳಿಗ್ಗೆ ನಡೆದಿದೆ. ಮೃತರನ್ನು ಬೆಳ್ಳಂಪಳ್ಳಿ ನಿವಾಸಿ ರಾಜೇಶ್ ಆಚಾಯ೯ ಎಂದು ಗುರುತಿಸಲಾಗಿದೆ ಕುಕ್ಕೆಹಳ್ಳಿ ಕಡೆಯಿಂದ ಕುಕ್ಕಿಕಟ್ಟೆ ಕಡೆಗೆ ಹೋಗುತ್ತಿದ್ದ ಟೆಂಪೋ ಎದುರಿನಲ್ಲಿ ಬರುತ್ತಿದ್ದ ಬೈಕಿಗೆ ಡಿಕ...
ಉಡುಪಿ: ಬೀಡಿನಗುಡ್ಡೆಯಿಂದ ಶಾರದ ಕಲ್ಯಾಣ ಮಂಟಪ ಸಂಪರ್ಕಿಸುವ ರಸ್ತೆಯಲ್ಲಿ ಬರುವ ನಿರಾಶ್ರಿತರ ಪುರ್ನವಸತಿ ಕೇಂದ್ರದ ಬಳಿಯ ತಿರುವು ರಸ್ತೆಯಲ್ಲಿ ಹೊಂಡ ಗುಂಡಿಗಳಿಗೆ ತೇಪೆ ಹಾಕಿದ್ದು, ಕಳಪೆ ಕಾಮಗಾರಿ ಎಂದು ಸಾರ್ವಜನಿಕರು ದೂರಿದ್ದಾರೆ. ಈಗಲೇ ಡಾಂಬರು ಮಿಶ್ರಣ ಸರಿ ಪ್ರಮಾಣದಲ್ಲಿಲ್ಲದೆ ತೇಪೆಗಳು ಎದ್ದೇಳುತ್ತಿರುವುದಕ್ಕೆ ಸಾರ್ವಜನಿಕರು ಆ...
ಮಂಗಳೂರು: ಈ ನೆಲದ ಮೂಲನಿವಾಸಿಗಳಾಗಿ ಒಂದೊಮ್ಮೆ ಸಮಸ್ತ ಭೂಮಿಯ ಒಡೆಯರಾಗಿದ್ದ ಕೊರಗ ಕುಟುಂಬ ನೆಲೆ ಇಲ್ಲದೆ ಪರಿತಪಿಸಬೇಕಾಗಿದೆ. ಸ್ವಾತಂತ್ರ್ಯ ದೊರೆತು 70 ವರ್ಷ ಕಳೆದರೂ ಭೂಮಿಯ ಹಕ್ಕಿಗಾಗಿ ಹೋರಾಟ ನಡೆಸಬೇಕಾಗಿ ಬಂದುದು ನಮ್ಮ ವ್ಯವಸ್ಥೆಯ ಸೋಲು ಎಂದು ಖ್ಯಾತ ಜಾನಪದ ವಿದ್ವಾಂಸಕರೂ, ಪಗತಿಪರ ಚಿಂತಕರೂ ಆದ ಡಾ. ಗಣನಾಥ ಶೆಟ್ಟಿ ಎಕ್ಕಾರು ಇವರು ...
ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ಮೇರ್ಲ ಎಂಬಲ್ಲಿ ಮಹಿಳೆ ಆ್ಯಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಮೃತ ಮಹಿಳೆ ಸ್ಥಳೀಯ ನಿವಾಸಿ ರವಿ ಎಂಬವರ ಪತ್ನಿ ಬಿಂದು(48)ಎಂಬಾಕೆಯಾಗಿದ್ದಾರೆ. ಈಕೆ ನ.27ರಂದು ಮನೆಯಲ್ಲಿ ರಬ್ಬರಿಗೆ ಉಪಯೋಗಿಸುವ ಆ್ಯಸಿಡ್ ಸೇವಿಸಿದ್ದಾರೆ. ಮನೆಯವರು ಈಕೆಯನ್ನು ಕೂಡಲೇ ಮಂಗಳೂರಿನ ಆಸ್ಪತ್ರೆಗೆ...
ಮಂಗಳೂರು: ವಿಶ್ವ ಹಿಂದೂ ಪರಿಷತ್ ಬಜರಂಗದಳ- ದುರ್ಗಾವಾಹಿನಿ ಮಂಗಳೂರು ಇದ್ರ ನೇತೃತ್ವದಲ್ಲಿ ಕರಾವಳಿಯ ಭದ್ರತೆಗೆ ಸವಾಲೊಡ್ದುವ ಭಯೋತ್ಪಾದನೆಯ ವಿರುದ್ಧ ಜನಜಾಗೃತಿ ಸಭೆ ನಡೆಯಿತು. ಮಂಗಳೂರಿನ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಉರ್ವಸ್ಟೋರ್, ತೊಕ್ಕೊಟ್ಟು ಜಂಕ್ಷನ್, ಕಾವೂರು, ಗುರುಪುರ ಕೈಕಂಬ, ಸುರತ್ಕಲ್ ಮತ್ತು ಮೂಡಬಿದ್ರೆ ಜಂಕ್ಷನ್ ನಲ್ಲ...