ಉಡುಪಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಕ್ತವಾದ ತನಿಖೆಗೆ ಅವಕಾಶ ಮಾಡಿಕೊಟ್ಟಿದ್ದೇನೆ. ನಾನು ತನಿಖೆಯಲ್ಲಿ ಹಸ್ತಕ್ಷೇಪ ಮಾಡಲು ಹೋಗಿಲ್ಲ ಎಂದು ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ನಿನ್ನೆ ಸಂಜೆ ವೇಳೆಗೆ ಮಹತ್ತರವಾದ ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿ ಹಾಗೂ ಮಂಗಳೂರು ನಗರದ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿಧಿಸಲಾಗಿರುವ ರಾತ್ರಿ ನಿಷೇಧಾಜ್ಞೆ ನಿಯಮಗಳನ್ನು ಉಲ್ಲಂಘಿಸಿದ ಆರೋಪದಡಿಯಲ್ಲಿ 200ಕ್ಕೂ ಅಧಿಕ ಮಂದಿ ಹಾಗೂ 90ಕ್ಕೂ ಅಧಿಕ ವಾಹನಗಳನ್ನು ಮಂಗಳೂರಲ್ಲಿ ವಶಪಡಿಸಿಕೊಳ್ಳಲಾಗಿದೆ. ವಾಹನ ಪರಿಶೀಲನೆ ಬಳಿಕ ರಿಲೀಸ್ ಮಾಡಲಾಗುವುದು ಎಂದು ನಗರ ಪೊಲ...
ಪದ್ಮುಂಜ: ಪಿ.ಡೀಕಯ್ಯರವರಿಗೆ ಹುಟ್ಟೂರ ಶ್ರದ್ಧಾಂಜಲಿ ಬೆಳ್ತಂಗಡಿ: ಬಹುಜನ ಸಮಾಜಕ್ಕೆ ಸೈಸಮಾಜದಲ್ಲಿ ಮೌಲ್ಯಾಧಾರಿತ ಬದಲಾವಣೆಗಾಗಿ ಚಳುವಳಿಯಲ್ಲಿ ತೊಡಗಿದ್ದ ಪಿ.ಡೀಕಯ್ಯರವರು ಅಪ್ಪಟ ಅಂಬೇಡ್ಕರ್ ವಾದಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಲಿತರ ಮೇಲಾಗುತ್ತಿದ್ದ ಶೋಷಣೆ, ದೌರ್ಜನ್ಯ, ಅನ್ಯಾಯ,ಅಸಮಾನತೆಗಳ ವಿರುದ್ಧ ಗಟ್ಟಿ ಧ್ವನಿ ಎತ್ತಿ ...
ಕಲಬುರ್ಗಿ: ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಮಳಸಾಪುರ ಗ್ರಾಮದಲ್ಲಿ ಭಾನುವಾರ ಸಿಡಿಲು ಬಡಿದು ಬಾಲಕಿ ಮೃತಪಟ್ಟ ಘಟನೆ ನಡೆದಿದೆ. ಶೈಲಜಾ ಶರಣಪ್ಪ ಜಮಾದಾರ (17) ಮೃತಪಟ್ಟ ಬಾಲಕಿಯಾಗಿದ್ದಾಳೆ. ಕಮಲಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ವರ್ಷದ ಪಿಯು ವಿದ್ಯಾರ್ಥಿಯಾಗಿದ್ದ ಶೈಲಜಾ ರಜೆ ಇದ್ದುದರಿಂದ ಬೆಳಿಗ್ಗೆ ಕಳೆ ಕೀಳಲು ತಂದೆ ...
ಉಡುಪಿ: ಬೆಂಕಿ ಆಕಸ್ಮಿಕದಿಂದ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಜು.31 ರಂದು ಬೆಳಗ್ಗೆ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಅಂಬಲಪಾಡಿ ಸಮೀಪದ ಪಂದುಬೆಟ್ಟು ನಿವಾಸಿ ರುಕ್ಮಿಣಿ(80) ಎಂದು ಗುರುತಿಸಲಾಗಿದೆ. ಇವರು ಜು.28ರಂದು ಮಧ್ಯಾಹ್ನ ಮನೆಯ ದೇವರ ಕೋಣೆಯಲ್ಲಿ ದೀಪ ಹ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜಾರಿಯಾಗಿರುವ ನೈಟ್ ಕರ್ಫ್ಯೂ ಇನ್ನೆರಡು ದಿನಗಳವರೆಗೆ ಮುಂದುವರಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಆಗಸ್ಟ್ 1ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾತ್ರಿ 6ರಿಂದ ಮುಂಜಾನೆ 6ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ತುರ್ತು ಸೇವೆಗಳ ಹೊರತ...
ಮಂಗಳೂರು: ಸುರತ್ಕಲ್ ನಲ್ಲಿ ಫಾಝಿಲ್ ಹತ್ಯೆಗೆ ಬಳಸಿದ್ದ ಕಾರು ಎನ್ನಲಾಗಿರುವ ಕಾರೊಂದು ಪಡುಬಿದ್ರಿ ಸಮೀಪದ ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ಬಳಿಯ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ. ಸುರತ್ಕಲ್ ನಲ್ಲಿ ಫಾಝಿಲ್ ನಲ್ಲಿ ಹತ್ಯೆ ಮಾಡಿದ ಬಳಿಕ ಕಾರ್ಕಳದಲ್ಲಿ ಕಾರನ್ನು ಬಿಟ್ಟು ಹೋಗಿದ್ದಾರೆ ಎನ್ನಲಾಗಿದೆ. ಇಯಾನ್ ಕಾರೊಂದು ನಿರ್ಜನ ಪ್...
ಉಡುಪಿ: ರಥಬೀದಿ ಗೆಳೆಯರು ಉಡುಪಿ, ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ), ಸಹಬಾಳ್ವೆ ಉಡುಪಿ ಇವುಗಳ ಸಹಯೋಗದಲ್ಲಿ ಅಗಲಿದ ವಿಮರ್ಶಕ, ಚಿಂತಕ ಜಿ.ರಾಜಶೇಖರ್ ಅವರಿಗೆ ನುಡಿನಮನ ಕಾರ್ಯಕ್ರಮವನ್ನು ರವಿವಾರ ಉಡುಪಿ ಎಂಜಿಎಂ ಕಾಲೇಜಿನ ಗೀತಾಂಜಲಿ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಹಬಾಳ್ವೆ ಅಧ್ಯಕ್ಷ ಅಮೃತ್ ಶೆಣೈ ಮಾತನಾಡಿ, ಯಾವುದೇ ಬೆ...
ಮಂಗಳೂರು: ಸುರತ್ಕಲ್ ಫಾಜಿಲ್ ಹತ್ಯೆಗೆ ಬಳಸಿದ್ದ ಕಾರಿನ ಮಾಲಿಕ ಅಜೀತ್ ಡಿಸೋಜ ಎಂಬವರನ್ನು ಬಂಧಿಸಲಾಗಿದ್ದು, ಅಜಿತ್ ಗೆ ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪಿಯೋರ್ವನೊಂದಿಗೆ ಸಂಪರ್ಕ ಇದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಫಾಜಿಲ್ ಹತ್ಯೆ ಸಂಬಂಧ 51 ಜ...
ಬೆಳ್ತಂಗಡಿ: ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಳೆದ ರಾತ್ರಿ ಕಳ್ಳರು ನುಗ್ಗಿ ದೇವರ ಚಿನ್ನಾಭರಣ ಕಳವುಗೈದಿದ್ದಾರೆ. ಇಂದು ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ದೇವರ ಚಿನ್ನಾಭರಣ, ಬೆಳ್ಳಿಯ ವಸ್ತುಗಳು ಕಳವು ಆಗಿದ್ದು ಸುಮಾರು 4.5 ಲಕ್ಷ ರೂಪಾಯಿ ಅಂದಾಜಿಸಲಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿಯವರು ಮಾಹಿತಿ ನೀಡಿ...