ಮಂಗಳೂರು: ಇಂಟರ್ನ್ಶಿಪ್ ಗೆ ಬಂದ ಕಾನೂನು ಪದವಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಲ್ಲಿ ಬಂಧನದಲ್ಲಿರುವ ವಕೀಲ ಕೆ.ಎಸ್.ಎನ್. ರಾಜೇಶ್ ಭಟ್ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ತನ್ನ ಕಚೇರಿಯಲ್ಲಿ ಇಂಟರ್ನ್ಶಿಪ್ ಗೆ ಬಂದ ಕಾನೂನು ಪದವಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಆ...
ಮಂಗಳೂರು: ಎಟಿಎಂಗೆ ಹಾನಿ ಮಾಡಿ ಅದರಲ್ಲಿದ್ದ ಹಣವನ್ನು ಕಳವು ಮಾಡಲು ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಗರದ ಹೊರವಲಯದ ತೊಕ್ಕೊಟ್ಟು ಬಳಿ ನಡೆದಿದೆ. ಕೊಪ್ಪಳ ಜಿಲ್ಲೆಯ ಬೀರಪ್ಪ ಬಂಧಿತ ಆರೋಪಿಯಾಗಿದ್ದಾನೆ. ಈತ ನಸುಕಿನ ಜಾವ 2 ಗಂಟೆ ಸುಮಾರಿಗೆ ತೊಕ್ಕೊಟ್ಟು ಬಳಿ ಇರುವ ಬ್ಯಾಂಕ್ ಆಫ್ ಬರೋಡದ ಎಟಿಎಂಗೆ ನುಗ್ಗಿ ಯಂತ್ರವನ...
ಬಂಟ್ವಾಳ: ರಸ್ತೆದಾಟಲು ನಿಂತಿದ್ದ ಮಹಿಳೆಗೆ ಬೈಕೊಂದು ಡಿಕ್ಕಿಯಾಗಿ ಪರಾರಿಯಾದ ಘಟನೆ ನಡೆದಿದ್ದು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿ.ಸಿ.ರೋಡ್ ನಲ್ಲಿ ಮಂಗಳವಾರ ಸಂಜೆ ಈ ಘಟನೆ ನಡೆದಿದೆ. ಇಲ್ಲಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಮಹಿಳೆ ರಸ್ತೆ ದಾಟಲೆಂದು ನಿಂತಿದ್ದರು ಎನ್ನಲ...
ಮಂಡ್ಯ: ನಗರದ ಪಿಇಎಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಸಮವಸ್ತ್ರ ವಿವಾದಕ್ಕೆ ಸಂಬಂಧಿಸಿದಂತೆ ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿನಿಯನ್ನು ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಗಳ ಗುಂಪೊಂದು ಬೆದರಿಸಲು ಯತ್ನಿಸಿದ್ದು, ಜೈಶ್ರೀರಾಮ್ ಎಂದು ಘೋಷಣೆ ಕೂಗಿದ್ದಾರೆ. ಈ ವೇಳೆ ವಿದ್ಯಾರ್ಥಿ ಬೆದರದೇ, ‘ಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಿ...
ಪುತ್ತೂರು: ಮದ್ರಸದಲ್ಲಿ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಲ್ಲಿ ಮದ್ರಸ ಅಧ್ಯಾಪಕನನ್ನು ಪುತ್ತೂರು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಕುಂಡಡ್ಕ ಸಂಶುಲ್ ಹುದಾ ಮದ್ರದ ಶಾಲೆಯ ಅಧ್ಯಾಪಕ ಎನ್ನಲಾಗಿರುವ ಉಸ್ತಾದ್ ಸಿರಾಜುದ್ದೀನ್ ಮದನಿ ಎಂಬಾತ ಬಂಧಿತ ಆರೋಪಿ ಎಂದು ವರದಿಯಾಗಿದೆ. ...
ಚಿಕ್ಕಮಗಳೂರು: ಹಿಜಾಬ್ ಹಾಗೂ ಕೇಸರಿ ವಿವಾದದ ನಡುವೆಯೇ ನೀಲಿ ಶಾಲು ಧರಿಸಿ ಬಂದ ಸಂವಿಧಾನ ಪರ ವಿದ್ಯಾರ್ಥಿ ಸಂಘಟನೆಗಳ ವಿದ್ಯಾರ್ಥಿಗಳು ಜೈ ಭೀಮ್ ಘೋಷಣೆ ಕೂಗುವ ಮೂಲಕ ಕಾಲೇಜ್ ಕ್ಯಾಂಪಸ್ ನೊಳಗಿನ ರಾಜಕೀಯವನ್ನು ವಿರೋಧಿಸಿದರು. ಹಿಜಾಬ್ ವಿವಾದವು ಒಂದು ರಾಜಕೀಯವಾಗಿದ್ದು, ಸಮುದಾಯವೊಂದರ ವಿದ್ಯಾರ್ಥಿನಿಯರ ಶಿಕ್ಷಣದ ಹಕ್ಕನ್ನು ಕಸಿಯುವ ಹುನ...
ಕುಂದಾಪುರ: ಹಿಜಾಬ್ ವಿವಾದ ಸೋಮವಾರವೂ ಮುಂದುವರಿದಿದ್ದು, ಕುಂದಾಪುರ ಸರ್ಕಾರಿ ಪಿಯು ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಲಾಗಿರುವ ಘಟನೆ ನಡೆದಿದೆ. ರಾಜ್ಯ ಸರ್ಕಾರ ಕಾಲೇಜು ಆವರಣದೊಳಕ್ಕೆ ಸಮವಸ್ತ್ರ ಧರಿಸಿದ ವಿದ್ಯಾರ್ಥಿಗಳ ಹೊರತಾಗಿ ಇತರರಿಗೆ ಪ್ರವೇಶವಿಲ್ಲ ಎಂಬ ಆದೇಶ ಹೊರಡಿಸಿದೆ.ಈ ಬ...
ಕುಂದಾಪುರ: ಅನಗತ್ಯ ವಿವಾದ ಹಿಜಾಬ್ ಮತ್ತು ಕೇಸರಿ ಶಾಲು ಇದೀಗ ತೀವ್ರವಾಗಿ ವೈಭವೀಕರಣಗೊಳ್ಳುತ್ತಿರುವ ನಡುವೆಯೇ, ಹಿಜಾಬ್-ಕೇಸರಿ ಶಾಲು ವಿವಾದ ಮತ್ತೆ ಮುಂದುವರಿದಿದೆ. ಸೋಮವಾರ ಕುಂದಾಪುರದ ವೆಂಕಟರಮಣ ಪಿಯು ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಮೆರವಣಿಗೆ ನಡೆಸಿದ್ದಾರೆ. ಆದರೆ, ಕೇಸರಿ ಶಾಲು ಧರಿಸಿ ಕ್ಯಾಂಪಸ್ ಗೆ ಪ್ರವೇಶಿಸಲು...
ಮಂಡ್ಯ: ಒಂದೇ ಕುಟುಂಬದ ಐವರನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಗೈದಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್. ಗ್ರಾಮದಲ್ಲಿ ನಡೆದಿದೆ. 26 ವರ್ಷ ವಯಸ್ಸಿನ ಲಕ್ಷ್ಮೀ, 12 ವರ್ಷದ ರಾಜ್, 7 ವರ್ಷದ ಕೋಮಲ್, 4 ವರ್ಷದ ಕುನಾಲ್ ಹಾಗೂ 8 ವರ್ಷದ ಗೋವಿಂದ ಹತ್ಯೆಗೀಡಾದವರು ಎಂದು ಗುರುತಿಸಲಾಗಿದೆ. ಹತ್ಯೆಗೀಡಾದವರೆಲ್ಲ...
ಚಿತ್ರದುರ್ಗ: ಮಹಿಳೆಯರು ಸಬಲರಾಗಬೇಕು ಎಂದು ಚುನಾವಣೆಯಲ್ಲಿ ಕೂಡ ಮಹಿಳಾ ಮೀಸಲು ಕ್ಷೇತ್ರಗಳನ್ನು ಮಾಡಲಾಗುತ್ತಿದೆ. ಆದರೆ, ಮಹಿಳೆಯರು ಚುನಾವಣೆಯಲ್ಲಿ ಗೆದ್ದ ಬಳಿಕ ಅವರ ಪತಿಯೇ ದರ್ಬಾರ್ ನಡೆಸುತ್ತಿರುವ ಘಟನೆಗಳು ಬೆಳಕಿಗೆ ಬರುತ್ತಿವೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಬಿದರೆಕೆರೆ ಗ್ರಾಮ ಪಂಚಾಯುತ್ ಅಧ್ಯಕ್ಷೆ ಪುಷ್ಪ ಅವರಿ ...