ಚಾಮರಾಜನಗರ: ಧರ್ಮಸ್ಥಳ ಪ್ರಕರಣದ ಬಗ್ಗೆ ನಾಳೆ ಸದನದಲ್ಲಿ ಸಂಪೂರ್ಣ ಉತ್ತರ ನೀಡುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಗುಂಡ್ಲುಪೇಟೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಯಾರೂ ರಾಜಕಾರಣ ಮಾಡಬಾರದು, ಇದು ನ್ಯಾಯ ಹಾಗೂ ಕಾನೂನಿಗೆ ಸಂಬಂಧಪಟ್ಟ ವಿಚಾರವಾಗಿದೆ ಎಂದು ಅವರು ಹೇಳಿದರು. ...
ಬೆಂಗಳೂರು: ಮುಸುಕುಧಾರಿ ನ್ಯಾಯಾಲಯದಲ್ಲಿ ದೂರು ಕೊಟ್ಟಾಗ ಮಾತನಾಡದ ಬಿಜೆಪಿಗರು ಈಗ ರಾಜಕೀಯ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದು, ಬಿಜೆಪಿಯವರಿಗೆ ಧರ್ಮಸ್ಥಳದ ಮೇಲೆ ಪ್ರೀತಿ ಇಲ್ಲ, ಅವರಿಗೆ ಬರೀ ರಾಜಕೀಯಕ್ಕಾಗಿ ಧರ್ಮಸ್ಥಳ ಬೇಕಾಗಿದೆ ಎಂದಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿ...
ಬೆಂಗಳೂರು: ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಐವರು ಸಾವನ್ನಪ್ಪಿರುವಂತಹ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಗರ್ತಪೇಟೆಯಲ್ಲಿ ನಡೆದಿದೆ. ದುರಂತದಲ್ಲಿ ಮದನ್ (38), ಪತ್ನಿ ಸಂಗೀತಾ (33) ಮಿತೇಶ್ (8), ವಿಹಾನ್ (5) ಒಂದೇ ಕುಟುಂಬದವರು ಸಜೀವ ದಹನವಾಗಿದ್ದಾರೆ, ಮತ್ತೊಂದು ಮಹಡಿಯಲ್ಲಿ ಸುರೇಶ್ ಎಂಬ...
ನೆಲಮಂಗಲ: ಲಾರಿಗೆ KSRTC ಬಸ್ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲ ಸೇರಿದಂತೆ ಇಬ್ಬರು ಸಾವನ್ನಪ್ಪಿರುವ ಘಟನೆ ನೆಲಮಂಗಲ ಸಂಚಾರಿ ಠಾಣೆ ವ್ಯಾಪ್ತಿಯ ಗುಂಡೇನಹಳ್ಳಿ ಬಳಿ ನಡೆದಿದೆ. ಲಾರಿ ಚಾಲಕ ಸೀನಪ್ಪ (50), ನಜೀರ್ ಅಹ್ಮದ್ (36) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಲಾರಿಯಲ್ಲಿ ಮೇಕೆ ಕುರಿ ತುಂಬಿಕೊಂಡು ಮುಧೋಳದಿಂದ ತುಮಕೂರು ಮಾರ್ಗವಾ...
ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಮಳೆ ಮತ್ತಷ್ಟು ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪ್ರಭಾವ ಹೆಚ್ಚಾಗಿರುವುದರಿಂದ ದೇಶದ ಬಹುತೇಕ ಕಡೆಗಳಲ್ಲಿ ವರ್ಷಧಾರೆ ಮುಂದುವರೆದಿದೆ. ಕರ್ನಾಟಕದಲ್ಲೂ ಮಳೆ ಆರ್ಭಟ ಜೋರಾಗಿದೆ. ರಾಜ್ಯದ ಕರಾವಳಿ ಭಾಗದಲ್ಲಿ ಆಗಸ್ಟ್ 19ರ ನಂತರ ಮಳೆ ಮತ್...
ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನಲ್ಲಿ ಹೊರಗಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ಸಂಬಂಧಿಸಿದಂತೆ ದೇಶದ ವಿವಿಧಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಕೋಟ್ಯಂತರ ರೂಪಾಯಿ ನಗದು ಹಾಗೂ ಕೆ.ಜಿ.ಗಟ್ಟಲೆ ಚಿನ್ನ ವಶಕ್ಕೆ ಪಡೆದುಕೊಂಡಿದೆ. ಅಕ್ರಮ ಹಣ ವರ್ಗಾವಣೆ ಕಾಯ್ದೆಪ್...
ಬೆಂಗಳೂರು: ಮನೆಯೊಂದರಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಬಾಲಕನೊಬ್ಬ ಸಾವನ್ನಪ್ಪಿ 6 ಜನರು ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಚಿನ್ನಯ್ಯನಪಾಳ್ಯದ ಶ್ರೀರಾಮ ಕಾಲೋನಿಯಲ್ಲಿ ನಡೆದಿದೆ. ಮುಬಾರಕ್(8) ಮೃತ ಬಾಲಕ ಎಂದು ಗುರುತಿಸಲಾಗಿದ್ದು, ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ಕಸ್ತೂರಮ್ಮ(35), ಸರಸ...
ಬೆಂಗಳೂರು: ಇಂದು ಭಾರತವು ಬ್ರಿಟಿಷರ ವಸಾಹತುಶಾಹಿ ಆಡಳಿತದಿಂದ ಮುಕ್ತಗೊಂಡ ಶುಭದಿನ. ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಭಾಯಿ ಪಟೇಲ್, ಸುಭಾಷ್ ಚಂದ್ರ ಬೋಸ್, ಮೌಲಾನಾ ಅಬುಲ್ ಕಲಾಂ ಅಜಾದ್ ಮುಂತಾದ ಕೆಚ್ಚೆದೆಯ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರ ನೇತೃತ್ವದಲ್ಲಿ ದೇಶಾದ್ಯಂತ ಲಕ್ಷಾಂತರ ಹೋರಾಟಗಾರರು ತಮ್ಮ ತ್ಯಾ...
ಬೆಂಗಳೂರು: ಯುವಜನ ಆಯೋಗ ರಚನೆ, ಯುವಜನರ ಹಕ್ಕುಗಳ ರಕ್ಷಣೆ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು, ಸಂವಾದ ಸಹಯಾನದ ಆಯೋಜನೆಯಲ್ಲಿ ನಡೆಸಲಾದ ಯುವಾಧಿವೇಶನ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಕಾರ್ಯಕ್ರಮದಲ್ಲಿ ವಿವಿಧ ವಿಚಾರಗಳನ್ನು ಮಂಡಿಸಿದ ಯುವಜನರು, ಯುವಜನರ ದೈಹಿಕ ಮತ್ತು ಮಾನಸಿಕ ಆರೋಗ್ಯ, ಶಾಲಾ-ಕಾಲೇಜುಗಳಲ್ಲಿ ಆಪ್ತ ಸಮಾಲ...
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ದರ್ಶನ್ ಗೆಳತಿ ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ದರ್ಶನ್ ಅವರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಯ ಆದೇಶ ಇಂದು ...