ಬೆಂಗಳೂರು : ಮುಸ್ಲಿಂ ಸಮುದಾಯದ ಜತೆ ನಾನು ನಿಂತಿದ್ದೆ ಆದರೆ ಆ ಸಮುದಾಯ ಜೆಡಿಎಸ್ ಜತೆ ನಿಲ್ಲಲಿಲ್ಲ ಎಂದು ಹೇಳುವ ಎಚ್. ಡಿ. ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದರು ಎಂಬುದು ಹೇಳಲಿ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಆಗ್ರಹಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಚನ್ನಪಟ್ಟ...
ಬೆಂಗಳೂರು: ಸೆ.26ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಶಾಂತಿಯುತವಾಗಿ ಬಂದ್ ನಡೆಸುತ್ತೇವೆ. ನಗರದ ಟೌನ್ ಹಾಲ್ ನಿಂದ ಮೈಸೂರು ಬ್ಯಾಂಕ್ ವರೆಗೆ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಲಿದ್ದೇವೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ವಿವರಿಸಿದರು. ಕಾವೇರಿ ನೀರು ನಿರ್ವಹಣಾ ಮಂಡಳಿ ಆದೇಶವನ್ನು ಖ...
ಅಮಾಸೆಬೈಲು: ದಾರಿ ತಪ್ಪಿ ಕಾಡಿನೊಳಗೆ ಸೇರಿದ್ದ ಯುವಕನೋರ್ವ ಎಂಟು ದಿನಗಳ ಬಳಿಕ ಪತ್ತೆಯಾಗಿರುವ ಘಟನೆ ಮಚ್ಚಟ್ಟು ಗ್ರಾಮದ ತೊಂಬಟ್ಟು ಇರ್ಕಿಗದ್ದೆ ಎಂಬಲ್ಲಿ ನಡೆದಿದೆ. ಪತ್ತೆಯಾದ ಯುವಕನನ್ನು ಸ್ಥಳೀಯ ನಿವಾಸಿ ಶೀನ ನಾಯ್ಕ ಎಂಬವರ ಮಗ ವಿವೇಕಾನಂದ(28) ಎಂದು ಗುರುತಿಸಲಾಗಿದೆ. ಸೆ.16ರಂದು ಮನೆಯಿಂದ ಹೊರಗೆ ಹೋದ ಇವರು, ವಾಪಾಸ್ಸು ಬಾರದೆ ನಾ...
ಚಾಮರಾಜನಗರ: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಚಾಮರಾಜನಗರದಲ್ಲಿ ನಿರಂತರ ಪ್ರತಿಭಟನೆ ನಡೆಸಲಾಗುತ್ತಿದ್ದು ಅದೇ ರೀತಿ ಇಂದು ಕನ್ನಡಪರ ಸಂಘಟನೆಗಳು ಬಾರುಕೋಲು ಚಳವಳಿ ನಡೆಸಿದರು. ಚಾಮರಾಜೇಶ್ವರ ದೇವಾಲಯದಿಂದ ಬಾರುಕೋಲು ಬೀಸುತ್ತಾ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಭುವನೇಶ್ವರಿ ವೃತ್ತದಲ್ಲಿ ರಸ್ತೆ ತಡೆ...
ದೇವನಹಳ್ಳಿ: ಅಕ್ರಮವಾಗಿ 15 ಟನ್ ಗೋಮಾಂಸ ಸಾಗಿಸಲಾಗುತ್ತಿತ್ತೆನ್ನಲಾದ ನಾಲ್ಕು ಗೂಡ್ಸ್ ವಾಹನಗಳನ್ನು ಶ್ರೀರಾಮಸೇನೆ ಕಾರ್ಯಕರ್ತರು ತಡೆದ ಘಟನೆ ನಡೆದಿದ್ದು, ಈ ವೇಳೆ ಗೋಮಾಂಸ ಸಾಗಾಟಗಾರರು ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ ಎಂದು ಆರೋಪಿಸಿ ಗೋಮಾಂಸ ಸಾಗಾಟ ಮಾಡುತ್ತಿದ್ದವರ ಕಾರಿಗೆ ಬೆಂಕಿ ಹಚ್ಚಿದ ಘಟನೆ ಬೆಂಗಳೂರ...
ಮಂಗಳೂರು ನಗರದ ನಂತೂರು ಜಂಕ್ಷನ್ ನಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟು ಮಾಡುತ್ತಿದ್ದ ರಸ್ತೆಯಲ್ಲಿದ್ದ ಹೊಂಡ ಗುಂಡಿಗಳನ್ನು ಮಂಗಳೂರು ನಗರದ ಪೊಲೀಸರೇ ಸ್ವತಃ ಮುಚ್ಚಿದ್ದಾರೆ. ಮಂಗಳೂರು ದಕ್ಷಿಣ ವಿಭಾಗದ ಸಂಚಾರಿ ಠಾಣೆಯ ಸಬ್ ಇನ್ಸ್ ಪೆಕ್ಟರ್ ಈಶ್ವರ ಸ್ವಾಮಿ, ಎಎಸ್ ಐ ವಿಶ್ವನಾಥ ರೈ ಅವರು ಹಾರೆ, ಗುದ್ದಲಿ ಹಿಡಿದು ಈ ದುರಸ್ತಿ ಕಾ...
ಮಂಗಳೂರು: ಟೆಂಪೋ ಟ್ರಾವೆಲರ್ ಕದ್ದ ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಆರೀಫ್ ಉಲ್ಲಾಖಾನ್ @ ಅರೀಫ್, ಅಮಿತ್ ಬಾಹುಬಲಿ ಪಂಚೋಡಿ @ ಬೇಬಿ, ಸುರೇಂದ್ರ ಕುಮಾರ್ ಎಂದು ಗುರುತಿಸಲಾಗಿದೆ. ಇವರಿಂದ ಕಳುವಾದ ಸುಮಾರು 15 ಲಕ್ಷ ಮೌಲ್ಯದ ಟೆಂಪೋ ಟ್ರಾವೆಲ್ಲರ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಉರ್ವ ಪೊಲೀಸ್ ಠಾಣಾ ವ್ಯಾ...
"ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಈ ದಿನ ಮುಂದುವರಿಸಿದ ಮತ್ತೊಂದು ಕಾರ್ಯಾಚರಣೆಯಲ್ಲಿ ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ MDMA ನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಜಾಕೀರ್(29), ಕಾರ್ತಿಕ್ ಸುವರ್ಣ(...
ಜೆಡಿಎಸ್ ಪಕ್ಷ ಯಾರೊಂದಿಗೆ ಮೈತ್ರಿ ಮಾಡಿಕೊಳ್ಳುತ್ತದೆಯೋ ಆ ಪಕ್ಷಕ್ಕೆ ದಾರಿದ್ರ್ಯ ಬಂದಂತೆ ಎಂದು ಬಿಜೆಪಿ ಜೊತೆಗೆ ಜೆಡಿಎಸ್ ಪಕ್ಷ ಮೈತ್ರಿ ಮಾಡಿಕೊಂಡಿರುವುದಕ್ಕೆ ಮಾಜಿ ಸಿಎಂ ವೀರಪ್ಪ ಮೊಯ್ಲಿ ವ್ಯಂಗ್ಯ ಮಾಡಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನಮ್ಮ ತುಳು ಭಾಷೆಯಲ್ಲಿ ಒಂದು ಗಾದೆ ಮಾತ...
ಬೆಂಗಳೂರು: "ರಾಜ್ಯದ ರೈತರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ. ಆದರೂ ವಿರೋಧ ಪಕ್ಷಗಳು ಕಾವೇರಿ ಸಮಸ್ಯೆಗೆ ರಾಜಕೀಯ ಆಯಾಮ ನೀಡುತ್ತಿವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಆರೋಪಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು "ಕಾವೇರಿ ನೀರು ಹರಿಸುವ ವಿಚಾರವಾಗಿ ಪ್ರಾಧಿಕಾರಕ್ಕೆ ರಾಜ್ಯ ...