ಚಿಕ್ಕಬಳ್ಳಾಪುರ: ನಿಂತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ರೆಡ್ಡಿಗೊಲ್ಲವಾರಹಳ್ಳಿ ಬಳಿಯಲ್ಲಿ ನಡೆದಿದೆ. 22 ವರ್ಷ ವಯಸ್ಸಿನ ಧರಣೀಶ್ ಹಾಗೂ 52 ವರ್ಷ ವಯಸ್ಸಿನ ನಿರಂಜನ್ ಸಿಂಗ್ ಮೃತ ವ್ಯಕ್ತಿಗಳು ಎಂದು ಗುರುತಿಸಲಾಗಿದ್ದು, ಮೃತರು ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರ್ಕಾರದ ವೀಕೆಂಡ್ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಸರ್ಕಾರ ಹಾಗೂ ಕೊವಿಡ್ ತಾಂತ್ರಿಕ ಸಲಹಾ ಸಮಿತಿಯ ತಜ್ಞರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಕೊವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರ ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದೆ...
ಬೆಂಗಳೂರು: ರಾಜ್ಯದಾದ್ಯಂತ ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿರುವ ನಿರ್ಧಾರಕ್ಕೆ ಹಲವು ಸಚಿವರು ಸಂಪುಟ ಸಭೆಯಲ್ಲೇ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಜನವರಿ 4ರಂದು ಹೊರಡಿಸಿರುವ ಮಾರ್ಗಸೂಚಿ ಪ್ರಕಾರ, ಜ.19 ರವರೆಗೂ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರಲಿದೆ. ಆದರೆ, ಸಚಿವರ ತ...
ಚೆನ್ನೈ: ಝೊಮೆಟೋ ಫುಡ್ ಡೆಲಿವರಿ ಮಾಡುವ ವ್ಯಕ್ತಿಯನ್ನು ಪೊಲೀಸ್ ಸಿಬ್ಬಂದಿಯೊಬ್ಬರು ಹಿಗ್ಗಾಮುಗ್ಗಾ ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಮಿಳುನಾಡಿನ ವಿರುಧುನಗರ ಜಿಲ್ಲೆಯ ಶ್ರೀವಿಲ್ಲಿಪುತ್ತೂರಿನಲ್ಲಿ ನಡೆದಿದೆ. ಝೊಮಾಟೊ ಡೆಲಿವರಿ ಮಾಡುವ ವ್ಯಕ್ತಿ ವೆಂಕಟೇಶ್ ಎಂಬಾತನನ್ನು ಟ್ರಾಫಿಕ್ ಸಬ್ ಇನ್ಸ್ಪೆಕ್ಟ...
ತುಮಕೂರು: “ಈ ನನ್ನ ಮಗ ನಮ್ಮ ಮಂತ್ರಿ ಹೆಂಗೆ ಗೊತ್ತಾ ದಕ್ಷಿಣ ಕೋರಿಯಾದ ಕಿಂಗ್ ಪಿನ್ ಇದಾನಲ್ಲ ಆ ರೀತಿ. ಹಾಳು ಮಾಡಿಬಿಟ್ಟಿದ್ದಾನೆ ನಮ್ಮ ಜಿಲ್ಲೆಯನ್ನ, ಮಾತು ಎತ್ತಿದ್ರೆ ಹೊಡಿ ಬಡಿ ಕಡಿ ಅಂತಾನೆ” ಎಂದು ಸಚಿವ ಮಾಧುಸ್ವಾಮಿ ವಿರುದ್ಧ ಸ್ವಪಕ್ಷದವರೇ ಮಾತನಾಡಿರುವ ಘಟನೆ ನಡೆದಿದೆ. ತುಮಕೂರಿನಲ್ಲಿ ಕರೆದಿದ್ದ ಸುದ್ದಿಗೋಷ್ಠಿ ಆರಂಭದಲ್ಲಿ...
ಸುಳ್ಯ: ಕಾಡಾನೆ ತುಳಿತಕ್ಕೊಳಗಾಗಿ ವ್ಯಕ್ತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಸುಳ್ಯ ತಾಲೂಕಿನ ಮದೆನಾಡಿನಲ್ಲಿ ನಡೆದಿದೆ. ಇಲ್ಲಿನ ಪೆರಾಯ ಶಿವಪ್ರಸಾದ್ ಎಂಬವರು ಆನೆ ತುಳಿತಕ್ಕೊಳಗಾಗಿ ಮೃತಪಟ್ಟವರು ಎಂದು ತಿಳಿದು ಬಂದಿದ್ದು, ಮೆದೆ ಗ್ರಾಮದ ಬೆಟ್ಟತ್ತೂರು ಭಾಗದಲ್ಲಿ ತೋಟದ ಕೆಲಸಕ್ಕೆ ತೆರಳುತ್ತಿದ್ದಾಗ ಆನೆ ದಾಳಿ ನಡೆಸಿ, ತು...
ಶಿವಮೊಗ್ಗ: ಕೊವಿಡ್ ಹೆಚ್ಚಳದ ಹಿನ್ನೆಲೆಯಲ್ಲಿ ಸರ್ಕಾರ ಜಾರಿಗೊಳಿಸಿರುವ ವೀಕೆಂಡ್ ಕರ್ಫ್ಯೂ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಅಸಮಾಧಾನ ವ್ಯಕ್ತಪಡಿಸಿದ್ದು, ಬೆಂಗಳೂರಿನಲ್ಲಿ ವೀಕೆಂಡ್ ಕರ್ಫ್ಯೂ ಅಗತ್ಯವಿದೆ. ಪ್ರಕರಣ ಕಡಿಮೆ ಇರುವ ಜಿಲ್ಲೆಗಳಲ್ಲಿಯೂ ಯಾಕೆ ವೀಕೆಂಡ್ ಕರ್ಫ್ಯೂ ಮಾಡಬೇಕು ಎಂದು ಪ್ರಶ್ನಿಸಿದ್ದಾರ...
ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಕರಗುಂದದಲ್ಲಿ ಬಜರಂಗದಳದ ಕಾರ್ಯಕರ್ತರು ಶಿಲುಬೆ ತೆರವಿಗೆ ಯತ್ನಿಸಿದ ಘಟನೆ ನಡೆದಿದ್ದು, ಈ ವೇಳೆ ಈ ಕೃತ್ಯವನ್ನು ಪೊಲೀಸರು ವಿಫಲಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ. ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಶಿಲುಬೆ ಹಾಕಲಾಗಿದೆ ಎಂದು ಆರೋಪಿಸಿದ ಬಜರಂಗದಳದ ಕಾರ್ಯಕರ್ತರು ಶಿಲುಬೆ ತೆರವಿಗೆ...
ಕೊಪ್ಪ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತರಗತಿಗಳಿಗೆ ಮುಸ್ಲಿಮ್ ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸಿ ಬರುವುದನ್ನು ವಿರೋಧಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಕಾಲೇಜು ಆವರಣದಲ್ಲಿ ಕೇಸರಿ ಶಾಲು ಧರಿಸಿ ಪ್ರತಿಭಟನೆ ಮಾಡಿದರು. ಕೆಲವು ವಿದ್ಯಾರ್ಥಿನಿಯರು ಸೋಮವಾರ ಕೇಸರಿ ಶಾಲು ಧರಿಸಿ ಬಂದು ಮುಸ್ಲಿಮ್ ವಿದ...
ಮಂಗಳೂರು: ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲೊಂದಾದ ಮಂಗಳೂರು ವಿಶ್ವವಿದ್ಯಾಲಯವು ದಿನ ಕಳೆದಂತೆ ತನ್ನ ವರ್ಚಸ್ಸನ್ನು ಕಳೆದುಕೊಳ್ಳುತ್ತಿದ್ದು, ಹಲವಾರು ಸಮಸ್ಯೆಗಳ ಆಗರವಾಗಿ ಪರಿಣಮಿಸುತ್ತಿದೆ ಎಂದು ಕ್ಯಾಂಪಸ್ ಫ್ರಂಟ್ ಆರೋಪಿಸಿದೆ. ಮಂಗಳೂರು ಪತ್ರಕರ್ತರ ಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಮುಖಂಡರು, ...