ಕಾಂಗ್ರೆಸ್ ಜೊತೆಗಿನ ತಮ್ಮ ಪಕ್ಷದ ಮೈತ್ರಿ ಲೋಕಸಭಾ ಚುನಾವಣೆಗೆ ಮಾತ್ರ ಆಗಿದೆ ಎಂದು ಆಮ್ ಆದ್ಮಿ ಪಕ್ಷದ ದಿಲ್ಲಿ ಸಂಚಾಲಕ ಗೋಪಾಲ್ ರಾಯ್ ಹೇಳಿದ್ದಾರೆ. ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಸೀಟು ಹಂಚಿಕೆ ಏರ್ಪಾಟಿನ ಸಾಧ್ಯತೆಯನ್ನೂ ಅವರು ಅಲ್ಲಗಳೆದಿದ್ದಾರೆ. ಮುಖ್ಯಮಂತ್ರಿ ಅರವಿಂದ್ ಕೇಜ್ರ...
ಬಿಜೆಪಿ ಸರ್ಕಾರ ಮಾಡಿದೆ ಎನ್ನಲಾದ ಶೇಕಡಾ 40 ಕಮಿಷನ್ ವಿರುದ್ಧ ಜಾಹೀರಾತು ನೀಡಿದ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಸ್ಥಳೀಯ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ. ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಹಿತ ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ಮಾನನಷ್ಟ ಮೊಕದ್ದಮೆ ದಾಖಲಿಸಿತ್ತು. ...
ಪಶ್ಚಿಮ ಉತ್ತರ ಪ್ರದೇಶದಿಂದ ಪೂರ್ವಾಂಚಲದವರೆಗೆ, ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದೆ. 2019 ರ ಚುನಾವಣೆಯಲ್ಲಿ ಪಡೆದ 62 ಸ್ಥಾನಗಳಿಗೆ ಹೋಲಿಸಿದರೆ ಕೇವಲ 33 ಸ್ಥಾನಗಳನ್ನು ಗಳಿಸಿದೆ. ಪಶ್ಚಿಮ ಉತ್ತರ ಪ್ರದೇಶದ ಕೈರಾನಾ ಲೋಕಸಭಾ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಚೊಚ್ಚಲ ಅಭ್ಯರ್ಥಿ ಇಕ್ರಾ ಹಸನ್ ಅವರು ಬಿಜೆಪಿಯ ಪ್ರದೀ...
ನಕಲಿ ಆಧಾರ್ ಕಾರ್ಡ್ ಗಳನ್ನು ಬಳಸಿಕೊಂಡು ಸಂಸತ್ ಸಂಕೀರ್ಣವನ್ನು ಪ್ರವೇಶಿಸಲು ಪ್ರಯತ್ನಿಸಿದ ಉತ್ತರ ಪ್ರದೇಶದ ಮೂವರು ಕಾರ್ಮಿಕರನ್ನು ಬಂಧಿಸಲಾಗಿದೆ. ಫೋರ್ಜರಿ ಮತ್ತು ವಂಚನೆ ಆರೋಪದ ಮೇಲೆ ಕಾಸಿಮ್, ಮೋನಿಸ್ ಮತ್ತು ಸೋಯೆಬ್ ಎಂಬ ಮೂವರು ಆರೋಪಿಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಭದ್ರತಾ ತಪಾಸಣೆಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ಈ ...
ಮುಖ್ಯವಾಹಿನಿಯ ಪತ್ರಿಕೆಗಳಲ್ಲಿ ಮಾನಹಾನಿಕರ ಜಾಹೀರಾತುಗಳನ್ನು ಪ್ರಕಟಿಸಿದ ಆರೋಪದ ಮೇಲೆ ಕರ್ನಾಟಕ ಬಿಜೆಪಿಯು ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶುಕ್ರವಾರ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. 2019-2023ರ ಅವಧಿಯಲ್ಲಿ ರಾಜ್ಯದ ಆಗಿನ ಬಿಜೆಪಿ ಸರ್ಕಾರ ದೊಡ್ಡ ಪ್ರಮಾ...
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ವಯನಾಡ್ ನಿಂದ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ರಾಯ್ ಬರೇಲಿ ಮತ್ತು ವಯನಾಡ್ ಎರಡು ಸ್ಥಾನಗಳಿಂದ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಎರಡೂ ಕ್ಷೇತ್ರಗಳಲ್ಲಿ ಭಾರಿ ಅಂತರದಿಂದ ಗೆದ್ದಿದ್ದಾರೆ. ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿ ಅವರು ಬಿಜೆಪಿಯ ದಿನೇಶ್ ಪ್ರತಾಪ್ ಸಿಂ...
ಭಾರತವು ಸದ್ಯ ತೀವ್ರ ನೀರಿನ ಬಿಕ್ಕಟ್ಟನ್ನು ಎದುರಿಸುತ್ತಿದೆ. ಬೇಸಿಗೆಯಲ್ಲಿ ಜಲಾಶಯ ಸಂಗ್ರಹಣೆಯಲ್ಲಿ ಗಮನಾರ್ಹ ಕೊರತೆ ಕಂಡು ಬಂದಿತ್ತು. ಅಧಿಕೃತ ಅಂಕಿಅಂಶಗಳ ಪ್ರಕಾರ 150 ಪ್ರಮುಖ ಜಲಾಶಯಗಳ ಮೇಲ್ವಿಚಾರಣಾ ದತ್ತಾಂಶವು ಒಟ್ಟು 39.765 ಬಿಲಿಯನ್ ಘನ ಮೀಟರ್ (ಬಿಸಿಎಂ) ಲೈವ್ ಸ್ಟೋರೇಜ್ ಅನ್ನು ಬಹಿರಂಗಪಡಿಸಿದೆ. ಇದು ಈ ಜಲಾಶಯಗಳ ಒಟ್ಟು ಲೈ...
ಬಾಲಿವುಡ್ ನಟಿ ಹಾಗೂ ಬಿಜೆಪಿ ಪಕ್ಷದ ನೂತನ ಸಂಸದೆ ಕಂಗನಾ ರನೌತ್ ರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಸಿಬ್ಬಂದಿಯೊಬ್ಬರು ಕಪಾಳ ಮೋಕ್ಷ ಮಾಡಿದ್ದಾರೆ. ಈ ಘಟನೆ ಬಗ್ಗೆ ಕಂಗನಾ ರನೌತ್ ಅವರೇ ಆರೋಪ ಮಾಡಿದ್ದಾರೆ. ಹಲ್ಲೆಯಾಗಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಚಂಡೀಗಢದಿಂದ ದೆಹಲಿಗೆ ಯುಕೆ707 ವಿಮಾನದಲ್...
ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನ ಮಂತ್ರಿಯಾಗಿ ಭಾನುವಾರ(ಜೂ.9) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಮೊದಲು ಜೂನ್ 8 ರಂದು ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂದು ವರದಿಯಾಗಿತ್ತು. ಖಾತೆ ಹಂಚಿಕೆಗಳ ವಿವಾದ ಈ ಬದಲಾವಣೆಗೆ ಕಾರಣ ಎಂದು ಹೇಳಲಾಗಿದೆ. ತೆಲುಗು ದೇಶಂ ಪಕ್ಷದ ನಾಯಕ ಚಂದ್ರಬಾಬು ನಾಯ್ಡು ಜೂನ್ 12...
ಪ್ರಧಾನಿ ನರೇಂದ್ರ ಮೋದಿ ಮಹಾರಾಷ್ಟ್ರದಲ್ಲಿ ಎಲ್ಲಿ ಹೆಚ್ಚು ಪ್ರಚಾರ ನಡೆಸಿದ್ದರೊ, ಆ ಕ್ಷೇತ್ರಗಳಲ್ಲೇ ಬಿಜೆಪಿಗೆ ಹೆಚ್ಚು ನಷ್ಟ ಉಂಟಾಗಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿಯು ದಯನೀಯ ಪ್ರದರ್ಶನ ತೋರಿರುವುದರಿಂದ ಮುಂಬರುವ ವಿಧಾನಸಭಾ ಚುನಾವಣೆ ಕುರಿತು ಎನ್ಡಿಎ ಮೈತ್ರಿಪಕ್ಷಗಳಲ್ಲಿ ಆತಂಕ ಮನೆ ಮಾಡಿದೆ. ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ದ...