ತಿರುಮಲ ಅಲಿಪಿರಿ ಮಾರ್ಗದಲ್ಲಿ ಚಿರತೆ ದಾಳಿಗೆ ಬಾಲಕಿ ಸಾವನ್ನಪ್ಪಿದ್ದಾಳೆ. ಈ ಪ್ರಕರಣದ ಬೆನ್ನಲ್ಲೇ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಮಕ್ಕಳೊಂದಿಗೆ ಬೆಟ್ಟ ಹತ್ತುವ ಭಕ್ತರಿಗೆ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಹೊಸ ನಿಯಮವನ್ನು ಪ್ರಕಟಿಸಿದೆ. ಚಿರತೆ ದಾಳಿಗೆ ಆರು ವರ್ಷದ ಮಗು ಲಕ್ಷಿತ ಬಲಿಯಾದ ಪ್ರಕರಣದ ನಂತರ ಪೊಲೀಸರು ಬೆಟ್ಟ ಹತ...
ಶಿಕ್ಷಕಿಯೊಬ್ಬರು ರಿಕ್ಷಾದಲ್ಲಿ ಹೋಗುತ್ತಿದ್ದಾಗ ಮುಸುಕುಧಾರಿಗಳು ಅವರಿಂದ ಐಫೋನ್ ಕಸಿದುಕೊಂಡು ಆಟೋದಿಂದ ಶಿಕ್ಷಕಿಯನ್ನು ಹೊರದಬ್ಬಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಶಿಕ್ಷಕಿಗೆ ಗಂಭೀರ ಗಾಯಗಳಾಗಿವೆ. ಮುಸುಕುಧಾರಿಗಳು ಶಿಕ್ಷಕಿಯ ಮೊಬೈಲ್ ಕಸಿಯಲು ಪ್ರಯತ್ನಿಸಿದ್ದಾರೆ. ಆದರೆ ಅದು ಸಾಧ್ಯವಾಗದಿದ್ದಾಗ ಆಟೋದಿಂದ ಅವರನ್ನು ಎಳೆದು ರಸ್ತೆಗೆ ಹಾ...
ದೇಶದ ರಾಜಧಾನಿಯಲ್ಲಿ ಆಗಸ್ಟ್ 15 ರಂದು 77 ನೇ ಸ್ವಾತಂತ್ರ್ಯ ದಿನಾಚರಣೆಗೆ ಸರ್ವ ಸಿದ್ಧತೆಗಳನ್ನು ನಡೆಸಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿರುವ ಕೆಂಪು ಕೋಟೆಗೆ ಬಿಗಿ ಭದ್ರತೆ ಒದಗಿಸಲಾಗಿದೆ. ಒಂದು ಸಾವಿರ ಮುಖ ಗುರುತಿಸುವ ಕೆಮರಾಗಳು, ಆಂಟಿ-ಡ್ರೋನ್ ವ್ಯವಸ್ಥೆಗಳನ್ನು ಆಳವಡಿಸಲಾಗಿದೆ. ಇದರೊ...
ಹಿಮಾಚಲ ಪ್ರದೇಶದಲ್ಲಿ ಕಳೆದೊಂದು ವಾರದಿಂದ ಭಾರಿ ಮಳೆ ಸುರಿಯುತ್ತಿದೆ. ಹೀಗಾಗಿ ಮತ್ತೆ ಮೇಘಸ್ಪೋಟ ಸಂಭವಿಸಿ 7 ಮಂದಿ ಮೃತಪಟ್ಟಿದ್ದಾರೆ. ಮೂವರು ನಾಪತ್ತೆಯಾಗಿದ್ದಾರೆ. ಮೇಘಸ್ಫೋಟ ಸಂಭವಿಸಿ, ಸೋಲನ್ ಜಿಲ್ಲೆಯ ಕಂದಘಾಟ್ ಉಪ ವಿಭಾಗದ ಜಾಡೋನ್ ಗ್ರಾಮಕ್ಕೆ ನೀರು ನುಗ್ಗಿದೆ. ಹೀಗಾಗಿ ಕೆಲವೆಡೆ ಭೂಕುಸಿತ ಸಂಭವಿಸಿದೆ. ಇನ್ನು ಪ್ರವಾಹದ ಅಬ್ಬರಕ್ಕೆ...
70 ವರ್ಷಗಳಲ್ಲಿ ಕಾಂಗ್ರೆಸ್ ದೇಶದಲ್ಲಿ ಏನು ಮಾಡಿದೆ ಎಂದು ಬಿಜೆಪಿ ಪ್ರಶ್ನೆ ಮಾಡಿತ್ತು. ಇದಕ್ಕೆ ತೀಕ್ಷ್ಣ ಉತ್ತರ ನೀಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ನರೇಂದ್ರ ಮೋದಿ ಹಾಗೂ ಅಮಿತ್ ಶಾ ಮಂತ್ರಿ, ಪ್ರಧಾನಿಯಾಗಲು ಕಾಂಗ್ರೆಸ್ ಪಕ್ಷವೇ ಕಾರಣ. ಕಾಂಗ್ರೆಸ್ ನಿರ್ಮಿಸಿದ ಶಾಲೆಯಲ್ಲಿಯೇ ಕಲಿತು ಅವರು ಈವರೆಗೆ ಬೆಳೆದಿದ್ದಾ...
ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಸೋಮವಾರ ಭಾರೀ ಮಳೆಯಿಂದಾಗಿ ಶಿವ ದೇವಾಲಯ ಕುಸಿದು ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸಿಖು ತಿಳಿಸಿದ್ದಾರೆ. ಸಮ್ಮರ್ ಹಿಲ್ ಪ್ರದೇಶದ ದೇವಾಲಯದಲ್ಲಿ ಭೂಕುಸಿತದಲ್ಲಿ ಡಜನ್ಗಟ್ಟಲೆ ಜನರು ಸಿಲುಕಿರುವ ಶಂಕೆ ಇದ್ದು, ಪೊಲೀಸರು ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡ...
ಮಣಿಪುರದಲ್ಲಿನ ಹಿಂಸಾಚಾರವು ವಿಭಜನೆ, ದ್ವೇಷ ಮತ್ತು ಕೋಪದ ನಿರ್ದಿಷ್ಟ ರೀತಿಯ ರಾಜಕೀಯದ ನೇರ ಪರಿಣಾಮವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆತಂಕ ವ್ಯಕ್ತಪಡಿಸಿದ್ದಾರೆ. ಅವರು ಕೇರಳದ ಕೊಡೆಂಚೇರಿಯಲ್ಲಿರುವ ಸೇಂಟ್ ಜೋಸೆಫ್ ಹೈಸ್ಕೂಲ್ ಸಭಾಂಗಣದಲ್ಲಿ ಸಮುದಾಯ ವಿಕಲಚೇತನ ನಿರ್ವಹಣಾ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರ...
ಜುಲೈ 21ರಂದು ಮಧ್ಯಪ್ರದೇಶದ ಶಿಯೋಪುರ್ ಜಿಲ್ಲೆಯ ಕುನೋ ರಾಷ್ಟ್ರೀಯ ಉದ್ಯಾನವದಲ್ಲಿ ನಾಪತ್ತೆಯಾಗಿದ್ದ ಹೆಣ್ಣು ಚೀತಾ ಕೊನೆಗೂ 22 ದಿನಗಳ ನಂತರ ಪತ್ತೆಯಾಗಿದೆ. ದಕ್ಷಿಣ ಆಫ್ರಿಕಾದಿಂದ ತರಲಾಗಿದ್ದ ಚೀತಾಗಳ ಪೈಕಿ ಈ ಹೆಣ್ಣು ಚೀತಾಗೆ ಆಳವಡಿಸಿದ್ದ ರೆಡಿಯೋ ಕಾಲರ್ ಕೆಲಸ ಮಾಡುವುದನ್ನು ನಿಲ್ಲಿಸಿದ್ದ ಬಳಿಕ ಈ ಚೀತಾ ನಾಪತ್ತೆಯಾಗಿತ್ತು. ತಕ್ಷಣ...
ಲೋಕಸಭೆ ಸದಸ್ಯತ್ವ ಮರಳಿ ಸಿಕ್ಕಿದ ನಂತರ ಕೇರಳ ರಾಜ್ಯದ ವಯನಾಡಿನಲ್ಲಿ ನಡೆದ ಮೊದಲ ಸಾರ್ವಜನಿಕ ಸಭೆಯಲ್ಲಿ ರಾಹುಲ್ ಗಾಂಧಿ ಭಾಗವಹಿಸಿದರು. ಇದೇ ವೇಳೆ ಅವರು ಮತ್ತೊಮ್ಮೆ ಮೋದಿ ವಿರುದ್ಧ ಕಿಡಿಕಾರಿದ್ರು. ಇದೇ ವೇಳೆ ಮಣಿಪುರದ ಅನುಭವವನ್ನು ವಿವರಿಸಿದ ರಾಹುಲ್ ಗಾಂಧಿ, 'ಬಿಜೆಪಿ ಮಣಿಪುರವನ್ನು ಕೊಂದಿತು. ಸಾವಿರಾರು ಮಹಿಳೆಯರ ಮೇಲೆ ಅತ್ಯಾಚಾರ...
ಗಲಭೆ ಪೀಡಿತ ಜಿಲ್ಲೆಯಲ್ಲಿ ಕಾರ್ಯಕ್ರಮ ನಡೆಸಲು ಪೊಲೀಸರು ಅನುಮತಿ ನಿರಾಕರಿಸಿದ ನಂತರ ನೂಹ್ ನಲ್ಲಿ ನಡೆಯಬೇಕಿದ್ದ ಹಿಂದೂ ಮಹಾಪಂಚಾಯತ್ ಈಗ ಪಲ್ವಾಲ್ ನಲ್ಲಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ನೂಹ್ ನಲ್ಲಿ ಹಿಂದೂ ಗುಂಪುಗಳು ಮಹಾಪಂಚಾಯತ್ ಗೆ ಅನುಮತಿ ಕೋರಿದ್ದವು. ಆದರೆ ಭದ್ರತಾ ಕಾರಣಗಳಿಂದಾಗಿ ಅದನ್ನು ನಿರಾಕರಿಸಲಾಗಿದೆ ಎಂದು ನೂಹ್ ...