ವಾಷಿಂಗ್ಟನ್: ಹೊಸ ವೈರ್ ಲೆಸ್ 5ಜಿ ಸೇವೆಯು ವಾಯುಯಾನ ಬಿಕ್ಕಟ್ಟಿಗೆ ಕಾರಣವಾಗಬಹುದು ಎಂದು ಯುಎಸ್ ಕಾರ್ಗೋ ಮತ್ತು ಪ್ಯಾಸೆಂಜರ್ ಏರ್ ಕ್ರಾಫ್ಟ್ ಆಪರೇಟರ್ ಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಎಚ್ಚರಿಸಿದ್ದಾರೆ. `ಈ ಪ್ರಮುಖ ಅಮೆರಿಕ ಏರ್ ಲೈನ್ಸ್ ಕಂಪನಿಗಳ ಪ್ರಕಾರ, ಹೊಸ ಸೇವೆಯು ಹೆಚ್ಚಿನ ಸಂಖ್ಯೆಯ ವೈಡ್ ಬಾಡಿ ಪ್ಲೇನ್ಗಳನ್ನ...
ಪಣಜಿ: ವಾಸ್ಕೋ-ಡಿ-ಗಾಮಾ ಹೌರಾ ಅಮರಾವತಿ ಎಕ್ಸ್ಪ್ರೆಸ್ ರೈಲು ದೂಧ್ಸಾಗರ್ ಮತ್ತು ಕಾರಂಜೋಲ್ ನಡುವೆ (ಗೋವಾ) ಹಳಿತಪ್ಪಿರುವ ಘಟನೆ ಇಂದು ಬೆಳಗ್ಗೆ 8.56ಕ್ಕೆ ನಡೆದಿದೆ. ರೈಲಿನ ಇಂಜಿನ್ ನ ಮುಂಭಾಗದ ಜೋಡಿ ಚಕ್ರಗಳು ಹಳಿತಪ್ಪಿವೆ. ರೈಲಿನಲ್ಲಿದ್ದ ಎಲ್ಲ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಯಾವುದೇ ಪ್ರಾಣಹಾನಿ ಅಥವಾ ...
ನಹದೆಹಲಿ: ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್ಯು)ದಲ್ಲಿ ಪಿಎಚ್ಡಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ ನಡೆದಿರುವ ಘಟನೆ ವರದಿಯಾಗಿದೆ. ಬೈಕ್ ನಲ್ಲಿ ಹೋಗುತ್ತಿದ್ದ ಯುವಕನೊಬ್ಬ ವಿದ್ಯಾರ್ಥಿನಿಯನ್ನು ಬಲವಂತವಾಗಿ ಪೂರ್ವ ಗೇಟ್ ಬಳಿಯಿಂದ ನಿರ್ಜನ ಪ್ರದೇಶಕ್ಕೆ ಎಳೆದೊಯ್ದಿದ್ದಾನೆ. ಬಳಿಕ ಯುವತಿಯ ಬಟ್ಟೆ ಹರಿದು ಗಲಾಟೆ ಮಾ...
ಬಸ್ಸಾರ್: ಇಂದು ಬೆಳ್ಳಂಬೆಳಗ್ಗೆ ಭಾರತದ ಈಶಾನ್ಯ ಭಾಗ ಅರುಣಾಚಲ ಪ್ರದೇಶದ ಬಸಾರ್ ದ ಜನರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಈ ಘಟನೆಗಳಲ್ಲಿ ಯಾವುದೇ ಸಾವು - ನೋವು ಅಥವಾ ಆಸ್ತಿಗೆ ಹಾನಿ ವರದಿಯಾಗಿಲ್ಲ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ (ಎನ್ಸಿಎಸ್) ಮಾಹಿತಿ ನೀಡಿದೆ. ಅರುಣಾಚಲ ಪ್ರದೇಶದ ಬಸ್ಸಾರ್ ಬಳಿ ಇಂದು ಮುಂಜಾನೆ 4....
ವಿಶ್ವಸಂಸ್ಥೆ: ಲಿಬಿಯಾದಲ್ಲಿ ಮಾನವಹಕ್ಕುಗಳ ಉಲ್ಲಂಘನೆಯಾಗುತ್ತಿದ್ದು, ಅಲ್ಲಿನ 27 ಜೈಲುಗಳಲ್ಲಿ 12 ಸಾವಿರಕ್ಕೂ ಹೆಚ್ಚು ಬಂಧಿತರನ್ನು ಇರಿಸಲಾಗಿದೆ. ಸಾವಿರಾರು ಮಂದಿಗೆ ಚಿತ್ರಹಿಂಸೆ ನೀಡಿ ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಮಾಹಿತಿ ನೀಡಿದ್ದಾರೆ ಎಂದು ಸೋಮವಾರ ಅಸೋಸಿ...
ಅಥಣಿ: ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಧರಿಸುವುದು ಅಥವಾ ಬಿಡುವುದು ಅವರವರ ವೈಯಕ್ತಿಕ ವಿಚಾರ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಅದಕ್ಕಾಗಿ ನಾನು ಮಾಸ್ಕ್ ಧರಿಸಿಲ್ಲ ಎಂದು ಆಹಾರ ಇಲಾಖೆ ಮತ್ತು ಅರಣ್ಯ ಇಲಾಖೆ ಸಚಿವ ಉಮೇಶ ಕತ್ತಿ ಹೇಳಿದ್ದಾರೆ. ಅಥಣಿ ಪಟ್ಟಣದಲ್ಲಿ ಲಕ್ಷ್ಮಿ ಸಸ್ಯೋದ್ಯಾನ ...
ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಐಶ್ವರ್ಯ ಹಾಗೂ ತಮಿಳು ಖ್ಯಾತ ನಟ ಧನುಷ್ ತಮ್ಮ 18 ವರ್ಷಗಳ ದಾಂಪತ್ಯ ಜೀವನಕ್ಕೆ ವಿದಾಯ ಹೇಳಿದ್ದಾರೆ. ಈ ವಿಚಾರವನ್ನು ಸ್ವತಃ ಧನುಷ್ ಸೋಮವಾರ ರಾತ್ರಿ ಟ್ವೀಟ್ ಮಾಡಿದ್ದು, ಅಭಿಮಾನಿಗಳು ಅಚ್ಚರಿಗೊಂಡಿದ್ದಾರೆ. ಧನುಷ್ ಮಾಡಿರುವ ಟ್ವೀಟ್ ನಲ್ಲಿ, 18 ವರ್ಷಗಳ ಕಾಲ ಸ್ನೇಹಿತರಂತೆ, ದಂಪತಿಯಂತೆ, ...
ಇಂದೋರ್: ಸ್ನೇಹಿತರ ಜೊತೆಗೆ ಸೇರಿ ತನ್ನ ಪತಿಯೇ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾನೆ ಎಂದು ಮಹಿಳೆಯೊಬ್ಬರು ಪೊಲೀಸರ ಮೊರೆಹೋದ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿದೆ. 32 ವರ್ಷ ವಯಸ್ಸಿನ ಸಂತ್ರಸ್ತ ಮಹಿಳೆ ತನ್ನ ಪತಿ ಸೇರಿದಂತೆ ನಾಲ್ವರ ವಿರುದ್ಧ ದೂರು ದಾಖಲಿಸಿದ್ದು, ತನ್ನ ಪತಿ ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ...
ನವದೆಹಲಿ: ಪ್ರಧಾನಿ ಮೋದಿ ಭದ್ರತಾ ಲೋಪದ ಕುರಿತು ತನಿಖೆ ನಡೆಸುತ್ತಿರುವ ತನಿಖಾ ಸಮಿತಿ ಮುಖ್ಯಸ್ಥೆ ನಿವೃತ್ತ ನ್ಯಾಯಮೂರ್ತಿ ಇಂದು ಮಲ್ಹೋತ್ರಾ ಅವರಿಗೆ ಸಿಕ್ ಫಾರ್ ಜಸ್ಟೀಸ್ ಸಂಸ್ಥೆಯು ಬೆದರಿಕೆ ಹಾಕಿದ್ದು, ಆಡಿಯೋವನ್ನು ಬಿಡುಗಡೆ ಮಾಡಿದೆ. ಸುಪ್ರೀಂ ಕೋರ್ಟ್ ಪ್ರಧಾನಿ ಮೋದಿ ಭದ್ರತಾ ಲೋಪದ ಕುರಿತು ತನಿಖೆ ನಡೆಸುವಂತೆ ಐವರ ಸಮಿತಿಯನ್ನು ...
ನವದೆಹಲಿ: ಫೆ. 14ರಂದು ನಡೆಯಬೇಕಿದ್ದ ಪಂಜಾಬ್ ವಿಧಾನಸಭೆ ಚುನಾವಣೆ ಮತದಾನವನ್ನು ಕೇಂದ್ರ ಚುನಾವಣಾ ಆಯೋಗ 6 ದಿನ ಮುಂದೂಡಿದ್ದು, 117 ಕ್ಷೇತ್ರಗಳಿಗೂ ಫೆ.14ರ ಬದಲು ಒಂದೇ ಹಂತದಲ್ಲಿ ಫೆ.20ರಂದು ಮತದಾನ ನಡೆಯಲಿದೆ. ಫೆ.16ಕ್ಕೆ ಗುರು ರವಿದಾಸ್ ಜಯಂತಿ ಇದೆ. ಪಂಜಾಬ್ ಜನಸಂಖ್ಯೆಯ ಶೇ.32ರಷ್ಟಿರುವ ಪ.ಜಾತಿ ಸಮುದಾಯದವರು ಸೇರಿದಂತೆ ರಾಜಯ...