ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು(ಜು.4) ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಂಗಳೂರು, ಉಳ್ಳಾಲ, ಮುಲ್ಕಿ, ಮೂಡುಬಿದಿರೆ ಹಾಗೂ ಬಂಟ್ವಾಳ ತಾಲೂಕುಗಳ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರ...
ಮಂಗಳೂರು ನಗರದಲ್ಲಿ ಪ್ರಾಣಿ-ಪಕ್ಷಿಗಳನ್ನು ರಕ್ಷಿಸಿ ಆರೈಕೆ ಮಾಡುತ್ತಿರುವ ಬಲ್ಲಾಳ್ಭಾಗ್ ನಿವಾಸಿ ರಜನಿ ಶೆಟ್ಟಿ ಅವರ ಮೇಲೆ ನೆರೆಮನೆಯ ಮಹಿಳೆಯೊಬ್ಬರು ಹಲ್ಲೆ ನಡೆಸಿರುವುದಾಗಿ ಬರ್ಕೆ ಠಾಣೆಯಲ್ಲಿ ದೂರು ದಾಖಲಾಗಿದೆ. ಸೋಮವಾರ ಬೆಳಗ್ಗೆ ತಾನು ಬಟ್ಟೆ ಒಣಗಲು ಹಾಕುತ್ತಿದ್ದಾಗ ಮಹಿಳೆ ಕಲ್ಲು ಎಸೆದಿದ್ದಾರೆ. ಇದರಿಂದ ತನಗೆ ಗಾಯವಾಗಿದೆ ಎಂದು...
ನಾನು ಚುನಾವಣೆಯಲ್ಲಿ ಸೋತ ಕ್ಷಣ ಕಾಂಗ್ರೆಸ್ ಪಕ್ಷ ಸೇರುತ್ತೇನೆ ಎಂಬುದು ಸುಳ್ಳು, ಇಂತಹ ವದಂತಿಯನ್ನು ಕೆಲವರು ಹಬ್ಬಿಸುತ್ತಿದ್ದಾರೆ ಎಂದು ಮಾಜಿ ಸಚಿವ ಜೇ ಸಿ ಮಾಧುಸ್ವಾಮಿ ತಿಳಿಸಿದ್ದಾರೆ. ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷವನ್ನು ನಾನು ಬಿಡುವುದಿಲ್ಲ, ಕ...
ಚಿಕ್ಕಮಗಳೂರು: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಅವಿನಾಶ್ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮೂಡಿಗೆರೆಯಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಸಾವಿರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದು, ಮೂಡಿಗೆರೆ ಪ್ರಮುಖ ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ಸಕಲೇಶಪುರ ಡಿವೈಎಸ್ಪಿ ಮಿ...
ದಕ್ಷಿಣ ಕನ್ನಡ: ನಿನ್ನೆ ರಾತ್ರಿಯಿಂದಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯವಸ್ತಗೊಂಡಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಮಂಗಳೂರಿನ ಪಂಪ್ ವೆಲ್ ಫ್ಲೈಓವರ್ ನಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ. ಅಲ್ಲದೇ ಪಂಪ್ ವೆಲ್, ಕಂಕನಾಡಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್ ಸೃಷ್ಟಿಯಾಗಿದೆ. ...
ಮಿಸೆಸ್ ಇಂಡಿಯಾ ಮಂಗಳೂರು ನಾಲ್ಕನೇ ಆವೃತ್ತಿಯ ಸ್ಪರ್ಧೆ ಮುಗಿದಿದೆ. ಮಿಸೆಸ್ ಇಂಡಿಯಾ ವಿಭಾಗದಲ್ಲಿ ಸೌಮ್ಯಲತಾ, ಸವಿತಾ ಚೇತನ್ ಕುಮಾರ್, ಬಬಿತಾ ನರೇಶ್ ಕಿರೀಟ ಮುಡಿಗೇರಿಸಿಕೊಂಡು ಮುಂದಿನ ಹಂತಕ್ಕೆ ಅರ್ಹತೆ ಪಡೆದಿದ್ದಾರೆ ಎಂದು ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ಇದರ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ದೀಪಕ್ ಗಂಗೊಳ್ಳಿ ತಿಳಿಸಿದರು. ...
ವಿದ್ಯುತ್ ಕಂಬಕ್ಕೆ ಕಾರೊಂದು ಡಿಕ್ಕಿ ಹೊಡೆದು ಚಾಲಕ ಅದೃಷ್ಟವಶಾತ್ ಪಾರಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕೊಡಂಗಾಯಿ ಎಂಬಲ್ಲಿ ನಡೆದಿದೆ. ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ವಿದ್ಯುತ್ ಕಂಬ ಮೇಲಕ್ಕೆದ್ದು, ಕಾರಿನ ಮೇಲೆ ಮುರಿದು ಬಿದ್ದಿದೆ. ಈ ಅವಘಡದಲ್ಲಿ ಚಾಲಕನಿಗೆ ಸಣ್ಣ -ಪುಟ...
ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಮಾಣಿ ಸಮೀಪದ ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡಿರುವ ಗಡಿಯಾರ ಸರಕಾರಿ ಶಾಲೆಯ ಬಳಿ ಗುಡ್ಡ ಕುಸಿತ ಉಂಟಾಗಿದೆ. ಇದರಿಂದ ಅಪಾಯಕಾರಿ ಸನ್ನಿವೇಶ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಇಲ್ಲಿನ...
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ರನ್ನು ರಾಜಕೀಯವಾಗಿ ಮುಗಿಸುವ ಹುನ್ನಾರ ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿದೆ ಎಂದು ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ಆರೋಪಿಸಿದ್ದಾರೆ. ಅವರು ಬಂಟ್ವಾಳದ ಮೆಲ್ಕಾರ್ನ ಬಿರ್ವ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಜನಾರ್ದನ ಪೂಜಾರಿಯವರ...
ಚಿಕ್ಕಮಗಳೂರು: ಬಜರಂಗದಳ ಮುಖಂಡ, ರೌಡಿಶೀಟರ್ ರಘು ಸಕಲೇಶಪುರ ಪ್ರಚೋದನಾಕಾರಿ ಹೇಳಿಕೆ ನೀಡಿ ಇದೀಗ ಪರಾರಿಯಾಗಿದ್ದು, ಆತನ ಸಹಚಾರರಿಗೆ ಸಂಕಷ್ಟ ಎದುರಾಗಿದೆ. ಅತ್ತ ಪ್ರಕರಣ ದಾಖಲಾಗುತ್ತಿದ್ದಂತೆ ರಘು ಸಕಲೇಶಪುರ ನಾಪತ್ತೆಯಾಗಿದ್ದ ಇದೀಗ ಈತನ ಪತ್ತೆಗಾಗಿ ಸಖಲೇಶಪುರ ಪೊಲೀಸರು ಮೂಡಿಗೆರೆ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಅವಿನಾಶ್ ಎಂಬ ಯುವಕ...