ಮಂಗಳೂರು: ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಉರ್ವ ಜಂಕ್ಷನ್ ಹತ್ತಿರದ ಮೈದಾನದಲ್ಲಿ ಮಟ್ಕಾ ಚೀಟಿ ದಂಧೆ ನಡೆಸುತ್ತಿದ್ದ ಆರೋಪದಡಿಯಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ದೀಪಕ್ ಶೆಟ್ಟಿ ಕೋಡಿಕಲ್, ಅನಿಲ್ ಶೆಟ್ಟಿ ಕೋಡಿಕಲ್ ಹಾಗೂ ಗಿರೀಶ್ ರೈ ವಾಮಂಜೂರು ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳ ವಿರುದ್ಧ ಕರ್ನಾಟಕ ...
ಕೊಟ್ಟಿಗೆಹಾರ: ಒಣಗಿದ್ದ ಮರಕ್ಕೆ ವಿದ್ಯುತ್ ತಂತಿ ತಗುಲಿ ಮರಕ್ಕೆ ಬೆಂಕಿ ಹೊತ್ತಿಕೊಂಡ ಘಟನೆ ಮೂಡಿಗೆರೆ ತಾಲೂಕಿನ ಗಬ್ಗಲ್ ಸಮೀಪದ ಹಾದಿಓಣಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ವಿದ್ಯುತ್ ತಂತಿಯಲ್ಲಿ ಬೆಂಕಿ ಹೊತ್ತಿಕೊಂಡಿರುವುದನ್ನು ಕಂಡ ಗ್ರಾಮ ಪಂಚಾಯತ್ ಸದಸ್ಯ ನವೀನ್ ಹಾವಳಿ ಅವರು ತಕ್ಷಣವೇ ಮೆಸ್ಕಾಂಗೆ ಕರೆ ಮಾಡಿ ಲೈನ್ ಆಫ್ ಮಾಡಿ...
ಕಾಪು: ಕಾರ್ಮಿಕರಿಬ್ಬರ ಮಧ್ಯೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಕೊನೆಗೊಂಡಿರುವ ಘಟನೆ ಕಟಪಾಡಿ ಪೇಟೆಯಲ್ಲಿ ಜು.17ರಂದು ಸಂಜೆ ನಡೆದಿದೆ. ಮೃತರನ್ನು ಒರಿಸ್ಸಾ ಮೂಲದ ಕಾರ್ಮಿಕ ಗಣೇಶ್(50) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಪರಾರಿಯಾಗಿದ್ದು, ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಕಟಪಾಡಿ -ಶಿರ್ವ ರಸ್ತೆಯಲ್ಲಿರುವ ಕಟ್ಟಡ ಕಾಮಗಾರಿ...
ಉಡುಪಿ, ಜು.15: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವ ಸಮಿತಿ ಹಾಗೂ ಹಿರಿಯಡ್ಕ ಸಂಸ್ಕೃತಿ ಸಿರಿ ಟ್ರಸ್ಟ್ ಸಹ ಯೋಗದಲ್ಲಿ ಸಾಮಾಜಿಕ ಕಾರ್ಯಕರ್ತರೊಂದಿಗೆ ಮಾತುಕತೆ ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಜು.18ರಂದು ಬೆಳಗ್ಗೆ 10.30ಕ್ಕೆ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಸಮಾಜ ಸೇವೆಯ ಜೊತೆ ಮಾಧ್ಯಮದ ಸುದ...
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿರುವ ಹಂತದಲ್ಲಿ ಬಿಜೆಪಿ ಮುಖಂಡರು ಸರ್ಕಾರವನ್ನು ಅಸ್ಥಿರ ಗೊಳಿಸಲು ಅಪಪ್ರಚಾರದ ತಂತ್ರದಲ್ಲಿ ತೊಡಗಿದ್ದಾರೆ. ಬಿಜೆಪಿ ಜನರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಪ್ರಯತ್ನದಲ್ಲಿ ತೊಡಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಆರೋಪಿಸಿದರು. ಅವರು ಮ...
ಚಾಮರಾಜನಗರ: ಚಿಕನ್ ಊಟ ಸೇವಿಸಿದ್ದ ಮಕ್ಕಳಿಗೆ ವಾಂತಿ-ಬೇಧಿಯಾಗಿ ಅಸ್ವಸ್ಥಗೊಂಡ ಘಟನೆ ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಗ್ರಾಮದ ಮೊರಾರ್ಜಿ ವಸತಿ ಶಾಲೆಯಲ್ಲಿ ನಡೆದಿದೆ. ಒಟ್ಟು 30 ವಿದ್ಯಾರ್ಥಿಗಳಿಗೆ ವಾಂತಿ-ಬೇಧಿಯಾಗಿದ್ದು ತೀವ್ರ ಅಸ್ವಸ್ಥಗೊಂಡಿದ್ದ 15 ಮಂದಿಗೆ ಬೇಗೂರು ಆಸ್ಪತ್ರೆಯಲ್ಲಿ ಡ್ರಿಪ್ ಹಾಕಿ ಚಿಕಿತ್ಸೆ ಕೊಡಲಾಗುತ್ತಿದೆ. ...
ಚಾಮರಾಜನಗರ: ಕಾಡಂಚಿನ ಜಮೀನಿನಲ್ಲಿ ವಿದ್ಯುತ್ ಸ್ಪರ್ಶದಿಂದ ಆನೆಯೊಂದು ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಕುರುಬರಹುಂಡಿ ಗ್ರಾಮದಲ್ಲಿ ನಡೆದಿದೆ. ಬಂಡೀಪುರ ಹುಲಿ ಯೋಜನೆಯ ಓಂಕಾರ್ ವಲಯದ ಕಾಡಂಚಿನ ಗ್ರಾಮವಾಗಿರುವ ಕುರುಬರಹುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಶಿವರಾಜು ಎಂಬವರ ಜಮೀನಿನಲ್ಲಿ ಆನೆ ಸಾವನ್ನಪ್ಪಿದೆ. ...
ಕಾರ್ಕಳ: ನಗರ ಠಾಣೆಯ ಪೊಲೀಸ್ ಸಿಬ್ಬಂದಿಯೊಬ್ಬರು ಸಾವಿಗೆ ಶರಣಾದ ಘಟನೆ ಶನಿವಾರ ರಾತ್ರಿ ಮಿಯ್ಯಾರು ಎಂಬಲ್ಲಿ ನಡೆದಿದೆ ಮೃತರನ್ನು ಪೊಲೀಸ್ ಸಿಬ್ಬಂದಿ ಎಚ್.ಸಿ. ಪ್ರಶಾಂತ್ ಎಂದು ಗುರುತಿಸಲಾಗಿದೆ. ಇವರು ಮಿಯ್ಯಾರಿನ ತನ್ನ ಮನೆಯ ಹಿಂಭಾಗದಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಯಾವ ಕಾರಣಕ್ಕಾಗಿ ಇವರು ಸಾವಿಗೆ ಶರಣಾಗಿದ್ದಾರ...
ಚಿಕ್ಕಮಗಳೂರು: ಹೆಂಡತಿಗೆ ಮೊಬೈಲ್ ನಂಬರ್ ನೀಡಿದ್ದಕ್ಕೆ ಡಿಶ್ ರಿಪೇರಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವನಿಗೆ ಮಹಿಳೆಯ ಪತಿ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಕೊಪ್ಪ ತಾಲೂಕಿನ ಜಯಪುರ ಸಮೀಪದ ಕಟ್ಟೆಮನೆ ಗ್ರಾಮದಲ್ಲಿ ನಡೆದಿದೆ. ಜಯಪುರದಲ್ಲಿ ಡಿಶ್ ರಿಪೇರಿ ಕೆಲಸ ಮಾಡುತ್ತಿದ್ದ ಬಶೀರ್ ಎಂಬಾತ ಹಲ್ಲೆಗೊಳಗಾಗಿರುವ ವ್ಯಕ್ತಿ ಎನ್ನಲಾಗಿದೆ. ...
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳಿಗೆ ರಾಷ್ಟ್ರೀಯ ತನಿಖಾ ಏಜೆನ್ಸಿ (ಎನ್ ಐಎ) ಆಗಸ್ಟ್ 18ರೊಳಗೆ ಶರಣಾಗುವಂತೆ ಇದೀಗ ಎರಡನೇ ಬಾರಿ ನೋಟಿಸ್ ನೀಡಿದೆ. ಎನ್ ಐಎ ಕೋರ್ಟ್ ಆದೇಶದಂತೆ ಎನ್ ಐಎ ಅಧಿಕಾರಿಗಳು ದ.ಕ.ಜಿಲ್ಲೆಯ ಪುತ್ತೂರು ಹಾಗೂ ಸುಳ್ಯ ವ್ಯಾಪ್ತಿಯಲ...