ಮಂಗಳೂರು: ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ.ಕ. ಜಿಲ್ಲಾ ಎನ್ ಎಸ್ ಯು ಐ ಉಪಾಧ್ಯಕ್ಷ ಸೇರಿದಂತೆ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ದ.ಕ. ಜಿಲ್ಲಾ ಎನ್ ಎಸ್ ಯು ಐ ಉಪಾಧ್ಯಕ್ಷ ಓಂಶ್ರೀ(24) ಮತ್ತು ಮಲ್ಲಿಕಟ್ಟೆಯ ಅಮನ್ ರಾವ್(23) ಮೃತಪಟ್ಟವರು ಎಂದು ಗುರುತಿಸಲಾಗಿದೆ. ತಲಪಾಡಿ ಕಡೆಯ...
ಹಾಸನ: ಮರಿ ಆನೆ ಮೃತಪಟ್ಟು ಮೂರು ದಿನಗಳಾದರೂ ತಾಯಿ ಆನೆ ಮರಿಯ ಕಳೆಬರಹವನ್ನು ತಾನು ಹೋದ ಕಡೆಯಲ್ಲೆಲ್ಲ, ಹೊತ್ತುಕೊಂಡು ತಿರುಗಾಡುತ್ತಿರುವ ಹೃದಯ ವಿದ್ರಾವಕ ದೃಶ್ಯ ಹಾಸನದ ಬೇಲೂರು ತಾಲೂಕು ಅರೇಹಳ್ಳಿ ಹೋಬಳಿಯ ಶಿರಗುರ ಗ್ರಾಮದ ಜಾಕನನಳ್ಳಿ ಎಸ್ಟೇಟ್ ಬಳಿ ಕಂಡು ಬಂತು. ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ...
ಕೊಟ್ಟಿಗೆಹಾರ: ಸಮೀಪದ ಬಿನ್ನಡಿ ಗ್ರಾಮಕ್ಕೆ ಭೇಟಿ ನೀಡಿದ ಕಾಫಿ ಮಂಡಳಿಯ ಹಿರಿಯ ಅಧಿಕಾರಿಗಳು ತೋಟಗಳ ವೀಕ್ಷಣೆ ನಡೆಸಿದರು. ಈ ಸಂದರ್ಭ ಕಾಫಿ ಬೋರ್ಡ್ನ ಹಿರಿಯ ಸಂಪರ್ಕ ಅಧಿಕಾರಿ ಶ್ರೀ ವಿಶ್ವನಾಥ್ ರೈತರಿಗೆ ವಿವಿಧ ವೈಜ್ಞಾನಿಕ ಸಲಹೆಗಳನ್ನು ನೀಡಿದರು. ಅವರು ಮಾತನಾಡುತ್ತಾ, “ಈ ಭಾಗದಲ್ಲಿ ಕಾಫಿ ಬೆಳೆಗಳಿಗೆ ಕೊಳೆರೋಗ ಹರಡುವ ಸಾಧ್ಯತೆ ಹೆಚ...
ಚಿಕ್ಕಮಗಳೂರು: ಮಲೆನಾಡಲ್ಲಿ ಮುಂದುವರಿದ ಗಾಳಿ—ಮಳೆ ಅಬ್ಬರ ಮುಂದುವರಿದಿದೆ. ಮಳೆಗೆ ಬೃಹತ್ ಮರವೊಂದು ಬಿದ್ದ ಪರಿಣಾಮ ಓಮ್ನಿ ಕಾರೊಂದು ಅಪ್ಪಚ್ಚಿಯಾಗಿದೆ. ತರೀಕೆರೆ ತಾಲೂಕಿನ ಕಲ್ಲತ್ತಿಗರಿ ಬಳಿ ಘಟನೆ ನಡೆದಿದೆ. ಕಲ್ಲತ್ತಿಗರಿ ಫಾಲ್ಸ್ ಗೆ ಪ್ರವಾಸಕ್ಕೆಂದು ಪ್ರವಾಸಿಗರು ಈ ಕಾರಿನಲ್ಲಿ ಬಂದಿದ್ದರು. ಈ ಕಾರಿನ ಮೇಲೆಯೇ ಬೃಹತ್ ಮರ ಉರುಳಿ ಬ...
ಬ್ರೈಟ್ ಭಾರತ್ ಟೀಮ್ ಜನ ಸಮಾನ್ಯರ ಕನಸುಗಳಿಗೆ ಬಣ್ಣ ತುಂಬಲಿದ್ದು, ಸಮಾಜದ ಕಟ್ಟ ಕಡೆಯ ಜನರಿಗೂ ಇದು ಆಶಾಕಿರಣವಾಗಲಿದೆ. ಖಂಡಿತಾ ತಮಗೂ ನಮ್ಮ ಜೊತೆಯಾಗುವ ಮೂಲಕ ನಿಮ್ಮ ಕನಸುಗಳಿಗೆ ಬ್ರೈಟ್ ತುಂಬಬಹುದು. ಪುತ್ತೂರಿನ ಇತಿಹಾಸದಲ್ಲಿ ಎಂದಿಗೂ ಕಂಡು ಕೇಳರಿಯದಂತ ಅಮೋಘ ಹೊಸ ಚಿಂತನೆಗಳೊಂದಿಗೆ ಬ್ರೈಟ್ ಭಾರತ್--3 ತಮ್ಮ ಮುಂದೆ ಬಂದಿದೆ. ಇದರ ನೂ...
ಮಂಗಳೂರು: ತಂದೆಯ ನಿರ್ಲಕ್ಷ್ಯಕ್ಕೆ ಮಗುವೊಂದು ಬಲಿಯಾಗಿರುವ ಘಟನೆ ಮಂಗಳೂರು ನಗರದ ಹೊರವಲಯದ ಅಡ್ಯಾರ್ ನಲ್ಲಿ ನಡೆದಿದ್ದು, ಬಿಹಾರ ಮೂಲದ ದಂಪತಿಯ 10 ತಿಂಗಳ ಮಗು ಮೃತಪಟ್ಟ ಮಗುವಾಗಿದೆ. ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಮನೆಯೊಳಗೆ ಅರ್ಧ ಸೇದಿ ಎಸೆದಿದ್ದ ಬೀಡಿಯ ತುಂಡನ್ನು ಮಗು ಬಾಯಿಗೆ ಹಾಕಿ, ನುಂಗಿದೆ. ಬಳಿಕ ಅಸ್ವಸ್ಥಗೊಂಡಿದ...
ವೇಣೂರು: ಕುಂಭಶ್ರೀ ಪದವಿಪೂರ್ವ ಕಾಲೇಜು, ನಿಟ್ಟಡೆ--ವೇಣೂರಿನಲ್ಲಿ ಜೂ.14ರಂದು “SPECTRUM 2K25 –- ಫ್ರೆಶರ್ಸ್ ಡೇ” ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಯೋಜಿಸಲಾಗಿತ್ತು. ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆತ್ಮೀಯ ಸ್ವಾಗತವನ್ನು ನೀಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು. ಕಾರ್ಯಕ್ರಮದ ನಿರೂಪಣೆಯನ್ನು ದ್ವಿತೀಯ ಪಿಯುಸಿ ...
ಚಿಕ್ಕಮಗಳೂರು : ಕಾಫಿನಾಡ ಮಲೆನಾಡು ಭಾಗದಲ್ಲಿ ಗಾಳಿ--ಮಳೆ ಅಬ್ಬರ ಮುಂದುವರೆದಿದೆ. ಬೃಹತ್ ಮರ ರಸ್ತೆಗೆ ಬಿದ್ದು ಸಂಚಾರ ಅಸ್ತವ್ಯಸ್ತವಾಗಿದೆ. ಚಿಕ್ಕಮಗಳೂರು ತಾಲೂಕಿನ ಕೈಮರದ ಬಳಿ ಘಟನೆ ನಡೆದಿದೆ. ಪರಿಣಾಮವಾಗಿ ಮುಳ್ಳಯ್ಯನಗಿರಿ , ದತ್ತಪೀಠಕ್ಕೆ ತೆರಳುವ ರಸ್ತೆ ಬಂದ್ ಆಗಿದೆ. ಕೈಮರ ಸಮೀಪ ರಸ್ತೆಗುರುಳಿರುವ ಬೃಹತ್ ಗಾತ್ರದ ಮರವನ್ನು ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ...
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ , ಪ್ರಾಥಮಿಕ , ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡಿನ 6 ತಾಲೂಕಿನಲ್ಲಿ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಕಳಸ ,ಮೂಡಿಗೆರೆ, ಶೃಂಗೇರಿ ,ಕೊಪ್ಪ,NR ಪುರ ತಾಲೂಕಿನಲ...