ರಸ್ತೆ ಅಪಘಾತದಲ್ಲಿ ಯುವತಿಯೊಬ್ಬಳು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವ್ಯಾಪ್ತಿಯ ತುಂಬೆ ಎಂಬಲ್ಲಿ ನಡೆದಿದೆ. ಮೃತಪಟ್ಟ ಯುವತಿಯನ್ನು ಹನ(19)ಎಂದು ಗುರುತಿಸಲಾಗಿದೆ. ಪುತ್ತೂರಿನಿಂದ ಮಂಗಳೂರು ಕಡೆ ಪ್ರಯಾಣಿಸುತ್ತಿದ್ದ ಕಾರು ತುಂಬೆ ಸಮೀಪ ಹೆದ್ದಾರಿಯಲ್ಲಿ ಅಪಘಾತಗೊಂಡಿತ್ತು. ಕಾರಿನಲ್ಲಿದ್ದ ಚಾಲಕ ಹಾಗೂ ಮೃತ ಯುವತಿಯ ತ...
ಉಡುಪಿ: ನಿರಂತರವಾಗಿ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಉಡುಪಿ ನಗರದ ಬಹುತೇಕ ಪ್ರದೇಶಗಳು ಜಲಾವೃತಗೊಂಡಿದ್ದು ಹಲವು ಮನೆಗಳಿಗೆ ನೀರು ನುಗ್ಗಿವೆ. ಇಲ್ಲಿನ ನೂರಾರು ಕುಟುಂಬಗಳನ್ನು ಸ್ಥಳಾಂತರಗೊಳಿಸುವ ಕಾರ್ಯ ಮುಂದುವರಿದಿದೆ. ನಗರದ ಬೈಲಕೆರೆ ಮೂಡನಿಡಂಬೂರು ಕೊಡವೂರು ನಿಟ್ಟೂರು, ಕಲ್ಸಂಕ ತೆಂಕಪೇಟೆ ಸೇರಿ ಹಲವು ಪ್ರದೇಶಗಳಲ್ಲಿ ನೆರೆ ...
ಬೆಂಗಳೂರು: ಬೆಂಗಳೂರು ನಗರದ ವಿ.ವಿ.ಪುರಂ ಪೊಲೀಸ್ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಒಬ್ಬ ಆರೋಪಿಯನ್ನು ಬಂಧಿಸಿ ಆತನಿಂದ ಸುಮಾರು 60 ಲಕ್ಷ ಮೌಲ್ಯದ ಮಾದಕ ವಸ್ತು ವಶಕ್ಕೆ ಪಡೆದಿದ್ದಾರೆ. ವಿ.ವಿ.ಪುರಂ ಪೊಲೀಸ್ ಠಾಣೆಯ ಪೊಲೀಸರು ರಾಜಸ್ಥ...
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದ್ದು, ಮೂಡಿಗೆರೆ, ಕಳಸ, ಶೃಂಗೇರಿ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದೆ. ಜಿಲ್ಲೆಯ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕುದುರೆಮುಖ ಸಾಲಿನಲ್ಲಿ ನಿರಂತರ ಮಳೆಯಿಂದಾಗಿ ಭದ್ರಾ ನದಿ ಒಳ ಹರಿವಿನಲ್ಲಿ ಏರಿಕೆಯಾಗಿದೆ. ತುಂಗಾ, ಭದ್ರಾ, ಹೇಮಾವತಿ ನದಿಗಳಲ್...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕು ಸುರತ್ಕಲ್ ಹೋಬಳಿ ಕುಳಾಯಿ ಗ್ರಾಮದ ಸಂತೋಷ್ (34 ವರ್ಷ) ಜು.5ರ ಬುಧವಾರ ಬೆಳಿಗ್ಗೆ ಬೈಕಂಪಾಡಿಯಲ್ಲಿರುವ ಸೋಲಾರ್ ಕಂಪೆನಿಗೆ ಮನೆಯಿಂದ ಕೆಲಸಕ್ಕೆ ತೆರಳುವಾಗ ಮರ ಬಿದ್ದು ದಾರಿ ಬಂದ್ ಆದ ಕಾರಣ ಕಂಪೌಂಡ್ ಹಾರಲು ಯತ್ನಿಸಿದಾಗ ಮರದೊಂದಿಗೆ ಬಿದ್ದ ವಿದ್ಯುತ್ ದೀಪದ ತಂತಿ ತಗುಲಿ ಮರಣ ಹೊಂದಿರುತ್ತಾರೆ....
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಆರೆಂಜ್ ಅಲಟ್೯ ಘೋಷಣೆಯಾಗಿರುವ ಕಾರಣ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿ...
ಭಾರೀ ಮಳೆಗಾಳಿಗೆ ಮನೆ ಮುಂಭಾಗ ನಿಲ್ಲಿಸಿದ್ದ ಓಮ್ನಿ ಕಾರಿನ ಮೇಲೆ ಮರ ಬಿದ್ದ ವಾಹನ ಸಂಪೂರ್ಣವಾಗಿ ಜಖಂಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಕೊಡಾಜೆ ಎಂಬಲ್ಲಿ ನಡೆದಿದೆ. ಕೊಡಾಜೆ ನಿವಾಸಿ ಇಸ್ಮಾಯಿಲ್ ಎಂಬವರಿಗೆ ಸೇರಿದ ಓಮ್ನಿ ಕಾರನ್ನು ತನ್ನ ಮನೆಯ ಸಮೀಪ ನಿಲ್ಲಿಸಿದ್ದರು. ಮಳೆ ಗಾಳಿಗೆ ಬೃಹತಾಕಾರದ ಮಾವಿನ ಮರ ಅದರ ಮೇಲೆ ಉರುಳಿ ...
ಕಟ್ಟಡದ ಮೇಲಿದ್ದ ಜಾಹೀರಾತು ಹೋರ್ಡಿಂಗ್ ಬಿದ್ದು 15 ವಾಹನಗಳಿಗೆ ಹಾನಿಯಾಗಿರುವ ಘಟನೆ ಮಂಗಳೂರು ನಗರದ ಬಿಕರ್ನಕಟ್ಟೆಯಲ್ಲಿ ನಡೆದಿದೆ. ಬಿಕರ್ನಕಟ್ಟೆಯಲ್ಲಿನ ಕಟ್ಟಡದಲ್ಲಿದ್ದ ಜಾಹೀರಾತು ಹೋರ್ಡಿಂಗ್ ಕಟ್ಟಡದ ಪಾರ್ಶ ಸಮೇತ ಬಿದ್ದಿದೆ. ಪರಿಣಾಮ ಕೆಳಗಡೆ ನಿಲ್ಲಿಸಿದ್ದ 15 ವಾಹನಗಳು ಜಖಂಗೊಂಡಿವೆ. ಹಾಗೂ ವಿದ್ಯುತ್ ಕಂಬ ಕೂಡ ಮುರಿದು ಬಿದ್ದಿ...
ವಿದ್ಯುತ್ ತಂತಿ ತುಳಿದು ಯುವಕ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಸಮೀಪದ ಕುಳಾಯಿಯಲ್ಲಿ ನಡೆದಿದೆ. ಮೃತಪಟ್ಟವನನ್ನು ಸಂತೋಷ್ ಎಂದು ಗುರುತಿಸಲಾಗಿದೆ. ತಡರಾತ್ರಿ ಸಮುದ್ರ ತೀರದಲ್ಲಿ ಇದ್ದ ಭಾರಿ ಸುಂಟರಗಾಳಿಗೆ ವಿದ್ಯುತ್ ತಂತಿ ಕಡಿದು ಬಿದ್ದಿದ್ದು ಮುಂಜಾನೆ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಸಂತೋಷ್ ಎಂಬವರು ...
ಹಾಸನ: ಬೇಲೂರು ತಾಲೂಕಿನ ಗೋಣಿ ಸೋಮನಹಳ್ಳಿಯಲ್ಲಿ ಕಳ್ಳರು ಸುಮಾರು ಒಂದೂವರೆ ಲಕ್ಷಕ್ಕೂ ಅಧಿಕ ಮೌಲ್ಯದ ಟೊಮೇಟೋ ಕಳವು ಮಾಡಿದ ಘಟನೆ ಬೆಳಕಿಗೆ ಬಂದಿದೆ. ಗ್ರಾಮದ ಧರಣಿ ಎಂಬವರ ಜಮೀನಿನಲ್ಲಿ ಬೆಳೆದಿದ್ದ ಟೊಮೇಟೋ ಬೆಳೆ ಉತ್ತಮ ಇಳುವರಿಯಾಗಿತ್ತು. ಆದ್ರೆ ಬೆಳೆದ ಬೆಳೆ ಕೈಗೆ ಸಿಗುವುದಕ್ಕೂ ಮೊದಲು ಕಳ್ಳರ ಪಾಲಾಗಿದೆ. ಕಳೆದ ರಾತ್ರಿ ಜಮೀನಿಗೆ...