ಚಿಕ್ಕಮಗಳೂರು: ಬೈಕ್ ಹಾಗೂ ಸ್ಕೂಟರ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಒಟ್ಟು ಮೂವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಬಣಕಲ್ ಮತ್ತು ಕೊಟ್ಟಿಗೆಹಾರ ಮಧ್ಯೆ ನಡೆದಿದೆ. ಸ್ಕೂಟಿಯಲ್ಲಿದ್ದ ಇಬ್ಬರು ಹಾಗೂ ಬೈಕ್ ಸವಾರ ಗಾಯಗೊಂಡವರಾಗಿದ್ದು, ಸವಾರರಿಗೆ ಕೈಕಾಲು ಮುರಿತಕ್ಕೊಳಗಾಗಿದ್ದು, ತೀವ್ರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದ...
ಬ್ರಹ್ಮಾವರ: ಬಾರ್ಕೂರಿನ ಹೊಸಾಳ ಗ್ರಾಮದಲ್ಲಿ ಚಿರತೆಯ ದಾಳಿಗೆ ಸಾಕು ನಾಯಿಯೊಂದು ಬಲಿಯಾಗಿರುವ ಬಗ್ಗೆ ವರದಿಯಾಗಿದೆ. ಸೀತಾ ಪೂಜಾರ್ತಿ ಎಂಬವರ ಸಾಕು ನಾಯಿಯನ್ನು ಮನೆಯಂಗಳದಲ್ಲಿ ಚಿರತೆ ಬೇಟೆಯಾಡಿ ತಿಂದಿದೆ. ನಾಯಿಯ ಕೆಲವು ಅಂಗಾಂಗಳಾದ ಕಾಲು, ದೇಹದ ಇತರ ಭಾಗ ಅಲ್ಲಿಯೇ ಬಿಟ್ಟು ಹೋಗಿದೆ. ಬಾರ್ಕೂರಿನ ಜನ ನಿಬಿಡ ಪ್ರದೇಶದಲ್ಲಿ ಚಿರತೆ ಸಂಚಾರ...
ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕನಿಗೆ ಒಂದೂವರೆ ವರ್ಷದ ಹಿಂದೆ ಥಳಿಸಿದ ಘಟನೆಗೆ ಸಂಬಂಧಿಸಿದ ಹಳೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿಸಿ ಸಮಾಜದ ಸ್ವಾಸ್ಥ್ಯ ಕೆಡಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಎಸ್ಪಿ ಡಾ. ಅಮಟೆ ವಿಕ್ರಂ ಎಚ್ಚರಿಸಿದ್ದಾರೆ....
ಕಾರ್ಕಳ: ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ದುರ್ಗಾ ಅನುದಾನಿತ ಶಾಲೆಯ ಮೈದಾನದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ 34 ವರ್ಷದ ಸಂತೋಷ ಮೃತ ದುರ್ದೈವಿ. ಇವರು ಕಳೆದ 4 ವರ್ಷಗಳ ಹಿಂದೆ ಹೃದಯಾಘಾತವಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ನಿನ್ನೆ ಸಂಜೆ ಫೆ.25 ಕ...
ಬಂಟ ಸಮುದಾಯಕ್ಕೆ ನಿಗಮ ಘೋಷಣೆ ಹಾಗೂ ಸಮುದಾಯವನ್ನು 3ಬಿಯಿಂದ 2ಎಗೆ ವರ್ಗಾಯಿಸದಿದ್ದಲ್ಲಿ ಕರಾವಳಿಯಲ್ಲಿ ಬಂಟ ಸಮುದಾಯದ ಮುಖಂಡರನ್ನು ಚುನಾವಣಾ ಕಣಕ್ಕಿಳಿಸಿ 3--4 ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸುವ ಎಚ್ಚರಿಕೆಯನ್ನು ಬಂಟ ಸಮುದಾಯದ ಮುಖಂಡರು ಒಕ್ಕೊರಲಿನಿಂದ ಘೋಷಿಸಿದರು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರ...
ಭೂ ಮಾರಾಟ, ಖರೀದಿ ಇತ್ಯಾದಿ ದಾಖಲೆಗಳ ನೋಂದಣಿಯನ್ನು ಕಡ್ಡಾಯವಾಗಿ ಆನ್ ಲೈನ್ ಮೂಲಕ ನಡೆಸುವ ಸರಕಾರದ ಕಾವೇರಿ ವೆಬ್ ಪೋರ್ಟಲ್ ಸೇವೆಯನ್ನು ಮಂಗಳೂರು ತಾಲೂಕು ನೋಂದಾವಣಾ ಕಚೇರಿಯಲ್ಲಿ ಸಾರ್ವಜನಿಕರ ವಿರೋಧದ ಕಾರಣ ರದ್ಧು ಪಡಿಸಿರುವ ಬೆನ್ನಿಗೆ ಆ ಕಡ್ಡಾಯ ಆನ್ ಲೈನ್ ಪ್ರಾಜೆಕ್ಟನ್ನು ಉಡುಪಿಯಲ್ಲಿ ಜಾರಿಗೊಳಿಸಲು ದಿಢೀರ್ ಯತ್ನ ನಡೆದಿದೆ ಎಂದು ...
ಬೆಳ್ತಂಗಡಿ: ಉಜಿರೆಯ ಲಾಡ್ಜ್ ಗಳಲ್ಲಿ ಬೆಳ್ತಂಗಡಿ ಇನ್ಸ್ ಪೆಕ್ಟರ್ ಸತ್ಯನಾರಾಯಣ ಅವರ ನೇತೃತ್ವದಲ್ಲಿ ಪೊಲೀಸರು ಶನಿವಾರ ರಾತ್ರಿ ಪರಿಶೀಲನೆ ನಡೆಸಿ ವಸತಿಗೃಹದ ಮಾಲಕರುಗಳಿಗೆ ಎಚ್ಚರಿಕೆ ನೀಡಿದ್ದಾರೆ. ಕೆಲ ದಿನಗಳ ಹಿಂದೆ ಪೊಲೀಸರು ಪರಿಶೀಲನೆ ನಡೆಸಿದಾಗ ಉಜಿರೆಯ ಒಂದು ವಸತಿ ಗೃಹದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದು ಕಂಡು ಬಂದಿತ್ತು....
ಉಡುಪಿ: ಪ್ರಾಣ ಕಳೆದುಕೊಳ್ಳಲು ಬಂದ ಅಪರಿಚಿತ ಮಹಿಳೆಯನ್ನು ಇಂದ್ರಾಳಿಯ ರೈಲುನಿಲ್ದಾಣದಲ್ಲಿ ರೈಲ್ವೆ ಪೋಲಿಸರು ಹಾಗೂ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ನಿತ್ಯಾನಂದ ಒಳಕಾಡು ರಕ್ಷಿಸಿರುವ ಘಟನೆ ಶನಿವಾರ ನಡೆದಿದೆ. ಬಳಿಕ ಮಹಿಳೆಯನ್ನು ಬೈಲೂರಿನ ಹೊಸ ಬೆಳಕು ಆಶ್ರಮದಲ್ಲಿ ಪುರ್ನವಸತಿ ಕಲ್ಪಿಸಲಾಗಿದೆ. ರಕ್ಷಿಸಲ್ಪಟ್ಟ ಮಹಿಳೆಯನ್ನು ಸವಿತಾ (32...
ಬೆಳ್ತಂಗಡಿ: ಮಲೆಕುಡಿಯರ ಸಂಘದ ಜಿಲ್ಲಾ ಅಧ್ಯಕ್ಷರಿಗೆ ಮಲೆಕುಡಿಯರ ಹಿತ ಕಾಪಾಡುವುದಕ್ಕಿಂತ ಶಾಸಕರ ಹಿತವೇ ಮುಖ್ಯವಾಗುತ್ತಿದೆ. ಸಂಘದ ತಾಲೂಕು ಕಾರ್ಯದರ್ಶಿಯವರಿಗೆ ಅವಮಾನವಾದಾಗ ಮಾತನಾಡದ ಜಿಲ್ಲಾಧ್ಯಕ್ಷರು ಶಾಸಕರ ವಿರುದ್ದ ಪ್ರತಿಭಟನೆಯಾದ ಕೂಡಲೇ ಪತ್ರಿಕಾಗೋಷ್ಠಿ ಕರೆದು ಮಾತನಾಡುವುದೇ ಇದಕ್ಕೆ ಸಾಕ್ಷಿಯಾಗಿದೆ ಎಂದು ಮಲೆಕುಡಿಯರ ಸಂಘದ ರಾಜ...
ಬೆಳ್ತಂಗಡಿ: ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಂಬಾರು ಬಂತಡ್ಕದ ಜನತೆಗೆ ಕುಡಿಯಲು ನೀರಿಲ್ಲ ಎಂದು ಆಕ್ರೋಶಗೊಂಡು ಪಂಚಾಯತ್ ಬಳಿ ನೀರಿನ ಕೊಡ, ಬಕೇಟ್ ಗಳ ಜೊತೆಗೆ ಬಂದು ಪ್ರತಿಭಟನೆ ನಡೆಸಿದ ಘಟನೆ ಶುಕ್ರವಾರ ನಡೆದಿದೆ. ಕಳೆದ ನಾಲ್ಕೈದು ದಿವಸಗಳಿಂದ ಸರಿಯಾದ ರೀತಿಯಲ್ಲಿ ನೀರಿಲ್ಲದ ಕಾರಣ ಇಂದು ಸ್ಥಳೀಯರು ಗ್ರಾಮ ಪಂಚಾಯತಿಗೆ ತೆ...