ಮಂಗಳೂರು ನಗರದ ಪಂಪ್ ವೆಲ್ ಸಮೀಪದ ನಾಗುರಿಯಲ್ಲಿ ಆಟೋ ರಿಕ್ಷಾದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಮುಹಮ್ಮದ್ ಶಾರಿಕ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ. ನವೆಂಬರ್ 19ರಂದು ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಆರೋಪಿ ಶಾರಿಕ್ ತೀವ್ರವಾಗಿ ಗಾಯಗೊಂಡಿದ್ದು, ಆತನನ್ನು ಮಂಗಳೂರು ನಗ...
ಖಾಸಗಿ ಬಸ್ ಗಳು ಮುಖಾಮುಖಿ ಡಿಕ್ಕಿಯಾಗಿ ಚಾಲಕರ ಸಹಿತ ಪ್ರಯಾಣಿಕರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಿ.ಸಿ.ರೋಡಿನ ನೇತ್ರಾವತಿ ಸೇತುವೆ ಬಳಿ ನಡೆದಿದೆ. ಬಿ.ಸಿ.ರೋಡಿನ ನೇತ್ರಾವತಿ ಸೇತುವೆ ಬಳಿ ಸೆಲಿನಾ ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಹಾಗೂ ಸಜೀಪ ರೂಟ್ ನ ಶಾರದ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಘ...
ಕೊಟ್ಟಿಗೆಹಾರ: ಕ್ರೀಡೆಯಿಂದ ದೇಹಕ್ಕೆ ವ್ಯಾಯಾಮ ಸಿಕ್ಕದಂತಾಗುತ್ತದೆ ಎಂದು ಬಣಕಲ್ ಬಾಲಿಕಾ ಮರಿಯ ಚರ್ಚ್ ಧರ್ಮಗುರುಗಳಾದ ಫಾ. ಪ್ರೇಮ್ ಲಾರೆನ್ಸ್ ಡಿಸೋಜ ಹೇಳಿದರು. ಅವರು ಕ್ರೈಸ್ತರ ಅಭಿವೃದ್ಧಿ ಸಂಘದಿಂದ ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ನಜರೆತ್ ಶಾಲೆಯ ಮೈದಾನದಲ್ಲಿ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ಭಾಗವಹಿಸಿ ಮಾತನಾಡಿದರು.ಕ್ರೀಡೆಯು ಮನೋ...
ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ನಿಶ್ಚಿತವಾಗಿ ಹೀನಾಯ ಸೋಲನ್ನನುಭವಿಸಲಿರುವ ಸ್ಪಷ್ಟ ಚಿತ್ರಣವನ್ನರಿತು ಕಂಗೆಟ್ಟಿರುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಉಗ್ರನನ್ನು ಸಮರ್ಥಿಸಿಕೊಳ್ಳುವ ಕೀಳು ಮಟ್ಟಕ್ಕೆ ಇಳಿದಿರುವುದು ಕಾಂಗ್ರೆಸ್ಸಿನ ಅಧ:ಪತನಕ್ಕೆ ಹಿಡಿದ ಕೈಗನ್ನಡಿಯಂತಿದೆ ಎಂದು ಬಿಜೆಪ...
ಮಣಿಪಾಲ: ಬೈಕೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಮಣಿಪಾಲ ಟೈಗರ್ ಸರ್ಕಲ್ ಸಮೀಪ ಡಿ.16ರಂದು ನಸುಕಿನ ವೇಳೆ ನಡೆದಿದೆ. ಮೃತರನ್ನು ಮಣಿಪಾಲ ಎಂಟೆಕ್ ವಿದ್ಯಾರ್ಥಿ, ಶಿವಮೊಗ್ಗದ ನಿಖಿಲ್(23) ಎಂದು ಗುರುತಿಸಲಾಗಿದೆ. ಬೈಕ್ ಸವಾರ ನಿಹಾಲ್ ಹಾಗೂ ಇನ್ನೊರ್ವ ಸಹಸವಾರ ಮಹೇಂದ್ರ ಜಿ. ...
ಉಜಿರೆ: ಇಲ್ಲಿಯ ಪೆರ್ಲದಲ್ಲಿ ಗ್ರಾಮಸ್ಥರಿಂದ ಪುರಾತನ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ನವೀಕರಣಕ್ಕಾಗಿ ದೈವಜ್ಞರಿಂದ ಅಷ್ಟಮಂಗಲ ಪ್ರಶ್ನೆ ಇಟ್ಟ ಸಂದರ್ಭದಲ್ಲಿ ದೇವಸ್ಥಾನದ ಕುರುಹು ಇದ್ದ ಪಕ್ಕದ ಮಣ್ಣಿನಡಿಯಲ್ಲಿ ಪುರಾತನ ಶಿವಲಿಂಗವೊಂದು ಡಿ.16 ರಂದು ಪತ್ತೆಯಾಗಿದೆ. ಪೆರ್ಲದಲ್ಲಿ ಕಳೆದ ಡಿ.8 ಮತ್ತು 9 ಹಾಗೂ 15 ಮತ್ತು 16ರಂದು ...
ಚಾಮರಾಜನಗರ: ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹನೂರು ತಾಲೂಕಿನ ಎಲ್ಲೆಮಾಳ ಗ್ರಾಮದ ದೊಡ್ಡಮ್ಮ(60) ಮೃತ ದುರ್ದೈವಿ. ಚರಂಡಿ ಸಮೀಪ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗುರುವಾರ ರಾತ್ರಿ ಇವರು ಕೊಳಕ್ಕೆ ಹಾರಿದ್ದ ವೇಳೆ ...
ಕೊಟ್ಟಿಗೆಹಾರ: ತೋಟದಲ್ಲಿ ಗಾಂಜಾ ಗಿಡ ಬೆಳೆದ ಆರೋಪಿಯನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ. ಹಂಡುಗುಳಿ ಗ್ರಾಮದ ತೋಟದಲ್ಲಿ ಗಾಂಜಾ ಗಿಡ ಬೆಳೆದ ಮತ್ತು ಮಾರಾಟದ ಉದ್ದೇಶದಿಂದ ಸೌದೆ ಕೊಟ್ಟಿಗೆಯಲ್ಲಿ ಗಾಂಜಾ ದಾಸ್ತಾನು ಮಾಡಿದ್ದ ಆರೋಪಿ ಹೆಚ್.ಎ.ಸುರೇಶ್ ಎಂಬುವವರನ್ನು ಅಬಕಾರಿ ಪೊಲೀಸರು ಬಂಧಿಸಿ ಗಾಂಜಾವನ್ನು ವಶಪಡಿಸಿಕೊಂಡು ಪ್ರಕರಣ...
ಹೈಕೋರ್ಟ್ ವಕೀಲ ಹಾಗೂ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ನಿವಾಸಿ ಅಬ್ದುಲ್ ಫಾರೂಕ್ (49) ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಸುಪ್ರೀಂ ಕೋರ್ಟ್ ನ್ಯಾಯಾಧೀಶ ಅಬ್ದುಲ್ ನಝೀರ್ ಅವರ ಕಿರಿಯ ಸಹೋದರ ಆಗಿರುವ ಅಬ್ದುಲ್ ಫಾರೂಕ್ ಅವರ ಮೃತದೇಹ ಬೆಳುವಾಯಿಗೆ ತರಲಾಗುತ್ತದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಸ್...
ಅನ್ಯಕೋಮಿನ ಯುವಕನ ಜೊತೆಯಲ್ಲಿ ಯುವತಿಯೋರ್ವಳು ಬೆಂಗಳೂರಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಳೆ ಎಂದು ಆರೋಪಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರು ಎನ್ನಲಾದ ತಂಡವೊಂದು ಖಾಸಗಿ ಬಸನ್ನು ತಡೆದು ನಿಲ್ಲಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬಸ್ ನಲ್ಲಿ ಅನ್ಯಕೋ...