ಎರಡು ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಮಂಗಳೂರು ನಗರದ ಅಂಬೇಡ್ಕರ್ ಸರ್ಕಲ್ ಬಳಿ ಇಂದು ಬೆಳಗ್ಗೆ ನಡೆದಿದೆ. ಅಪಘಾತದಲ್ಲಿ ಎರಡು ಬಸ್ಸುಗಳಿಗೆ ಹಾನಿ ಉಂಟಾಗಿದ್ದು, ಚಾಲಕ ಸೇರಿದಂತೆ ಬಸ್ ನಲ್ಲಿದ್ದ ಪ್ರಯಾಣಿಕರು ಸಣ್ಣ-ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಈ ಅಪಘಾತದಿಂದಾಗಿ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಯ...
ಉಡುಪಿ: ಕೆಲಸದ ವಿಚಾರಕ್ಕೆ ಸಂಬಂಧಿಸಿದಂತೆ ವಿವಾಹಿತ ಮಹಿಳೆಯೊಬ್ಬರು ತನ್ನ ಒಂದು ವರ್ಷದ ಹೆಣ್ಣು ಮಗುವಿನೊಂದಿಗೆ ಮನೆಯಿಂದ ಹೊರಗೆ ಹೋದವರು ಬಳಿಕ ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಪಡುತೋನ್ಸ್ ಗ್ರಾಮ ಹೊಡೆಯಲ್ಲಿ ನಡೆದಿದೆ. ಹೊಡೆಯ ನಿವಾಸಿ 39ವರ್ಷದ ಉಸ್ತಾದ್ ಜುಬೇರ್ ಎಂಬವರ ಪತ್ನಿ 32 ವರ್ಷದ ಅನ್ಸಿಯಾ ಹಾಗೂ ಒಂದು ವರ್ಷದ ...
ಮಲ್ಪೆ: ಬಂದರಿನ ಒಳಗೆ ಕಾಲು ಜಾರಿ ಮೀನುಗಾರರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರವಿವಾರ ಬೆಳಿಗ್ಗೆ ನಡೆದಿದೆ. ಮೃತರನ್ನು ಕಟಪಾಡಿ ಮಟ್ಟು ನಿವಾಸಿ ಸಂತೋಷ್ ತಿಂಗಳಾಯ(35) ಎಂದು ಗುರುತಿಸಲಾಗಿದೆ. ಇವರು ಜೈಬಲರಾಮ್ ಲೈ ಲ್ಯಾಂಡ್ ಬೋಟ್ ಪಡ್ಡೆಗಳ ಹೋಗುವಾಗ ಬಂದರಿನ ಒಳಗೆ ಕಾಲು ಜಾರಿ ನೀರಿಗೆ ಬಿದ್ದರೆನ್ನಲಾಗಿದೆ ಇದರಿಂದ ನೀರಿ...
ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯ ಹನ್ನೊಂದನೇ ತಿರುವಿನಲ್ಲಿ ಪೊಲೀಸ್ ಡಿಆರ್ ವಾಹನ ಕೆಟ್ಟು ನಿಂತ ಪರಿಣಾಮ ಗಂಟೆ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡಿದ ಘಟನೆ ನಡೆದಿದೆ. ಚಿಕ್ಕಮಗಳೂರಿನ ಪೊಲೀಸ್ ಡಿಆರ್ ವಾಹನ ರಸ್ತೆಗೆ ಕೆಟ್ಟು ನಿಂತಿದ್ದರಿಂದ ಪ್ರವಾಸಿಗರು ಪರದಾಡುವಂತಾಯಿತು. ಎರಡು ಬದಿಯಿಂದ ವಾಹನಗಳು ಏಕಕಾಲದ...
ಬೈಕ್ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾಗಿ ಸ್ಕೂಟರ್ ಸವಾರ ಯುವಕನೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ದರ್ಜೆ ಬೈಪಾಸ್ ನಲ್ಲಿ ಸಂಭವಿಸಿದೆ. ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಸಂಪ್ಯ ನಿವಾಸಿ ಅಬ್ದುಲ್ ಅಝೀಝ್ ಎಂಬವರ ಪುತ್ರ ನೌಶಾದ್ (22) ಮೃತಪಟ್ಟ ಯುವಕ. ...
ವೇಣೂರು: ಒಂಟಿ ಮಹಿಳೆಯ ಮನೆಗೆ ನ. 12ರ ಸಂಜೆ ಎಂಟ್ರಿಕೊಟ್ಟ ನಾಲ್ವರು ಮುಸುಕುಧಾರಿಗಳು ಮಹಿಳೆಯ ಕೈಕಾಲು ಕಟ್ಟಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ನಾರಾವಿ ಸಮೀಪದ ಅರಸಿಕಟ್ಟೆಯ ಪ್ರಭಾವತಿ ನಾಯ್ಕ (67) ಮನೆಯಲ್ಲಿ ಈ ದರೋಡೆ ಪ್ರಕರಣ ನಡೆದಿದೆ. ಪ್ರಭಾವತಿ ನಾಯ್ಕರ ಮನೆಗೆ ಏಕಾಏಕಿ ಎಂಟ್ರಿಕೊಟ್...
ಮಲ್ಪೆ: ಜೇನು ನೊಣ ದಾಳಿ ನಡೆಸಿ ಕಚ್ಚಿದ ಪರಿಣಾಮ ತೀವ್ರವಾಗಿ ಅಸ್ವಸ್ಥಗೊಂಡ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ. ಕೆಮ್ಮಣ್ಣು ನಿವಾಸಿ ಸಂಪಾ(53) ಮೃತ ಮಹಿಳೆ. ಇವರು ನ.11ರಂದು ಹಸುಗಳಿಗೆ ಹುಲ್ಲು ತರಲು ತೋಟಕ್ಕೆ ಹೋಗಿದ್ದು, ಅಲ್ಲಿ ಹುಲ್ಲು ಕೊಯ್ಯುತ್ತಿದ್ದಾಗ ಜೇನು ದಾಳಿ ನಡೆಸಿ ಕಚ್ಚಿತ್ತೆನ್ನಲಾಗಿ...
ಮಂಗಳೂರು: ಬಿಜೆಪಿ ಸರ್ಕಾರ ಬಂದಾಗಿನಿಂದ ದಲಿತರ ಮೇಲೆ ಒಂದಲ್ಲ ಒಂದು ರೀತಿಯ ದೌರ್ಜನ್ಯ ಹಾಗೂ ತಾರತಮ್ಯ ನಡೆಯುತ್ತಿದೆ ಎಂದು ದಸಂಸ ಅಂಬೇಡ್ಕರ್ ವಾದ ಜಿಲ್ಲಾ ಸಂಘಟನಾ ಸಂಚಾಲಕರಾದ ಕೇಸಪ್ಪ ನೆಕ್ಕಿಲು ಹೇಳಿದ್ದಾರೆ. ಗುರುವಾರ ಮಂಗಳೂರು ತಾಲೂಕು ತಹಶೀಲ್ದಾರ್ ಕಚೇರಿ ಮಿನಿ ವಿಧಾನಸೌಧ ಎದುರು ಭೂಮಿ ವಸತಿ ಶಿಕ್ಷಣ ಹಾಗೂ ದಲಿತರ ಮೇಲೆ ನಿರಂತರ ದ...
ಬೆಂಗಳೂರು: ಎಲ್.ಲೋಕೇಶ್ ಜನಸೇವಾ ಕೇಂದ್ರ ಮತ್ತು ಭಾರತೀಯ ಪರಿವರ್ತನ ಸಂಘ(BPS)ವತಿಯಿಂದ ಇಂದು ಮೊದಲನೇ ವರ್ಷದ ಶಾಟ್ ಪಿಚ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ‘ನಾಲ್ವಡಿ ಕೃಷ್ಣರಾಜ ಒಡೆಯರ್ ಕಪ್—2022’ ನಡೆಯಿತು. ಕಾರ್ಯಕ್ರಮದಲ್ಲಿ ಚಲನಚಿತ್ರ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ, ಅಕ್ಕ IAS ಅಕಾಡೆಮಿಯ ಮುಖ್ಯಸ್ಥರಾದ...
ಹೆಬ್ರಿ: ಹೆಬ್ರಿಯ ಜಿಲ್ಲಾ ಪರಿಶಿಷ್ಟ ಪಂಗಡ ವರ್ಗದ ಕಿರಿಯ ಪ್ರಾಥಮಿಕ ಆಶ್ರಮ ಶಾಲೆಯ ಹಾಸ್ಟೆಲ್ ನಲ್ಲಿ ಅಗ್ನಿ ಅವಘಡದಿಂದ ನಾಲ್ವರು ವಿದ್ಯಾರ್ಥಿಗಳು ತೀವ್ರ ಗಾಯಗೊಂಡಿರುವ ಘಟನೆ ಬುಧವಾರ ಸಂಜೆ ವೇಳೆ ಸಂಭವಿಸಿದೆ. ಗಾಯಗೊಂಡವರನ್ನು ರಾಯಚೂರು ಮೂಲದ ವಿದ್ಯಾರ್ಥಿಗಳಾದ ಶ್ರಿನಿವಾಸ್, ಅಮರೀಶ್, ವಿನೋದ್, ಮನೋಜ್ ಎಂದು ಗುರುತಿಸಲಾಗಿದೆ. ಈ ಮಕ್...