ಸುರತ್ಕಲ್: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಚುನಾವಣಾ ಪೂರ್ವ ಕಾರ್ಯಕರ್ತರ ಸಭೆಯು ಚೊಕ್ಕಬೆಟ್ಟು ಎಂ ಜೆ ಎಂ ಹಾಲ್ ನಲ್ಲಿ ನಡೆಯಿತು. ಸಭಾಧ್ಯಕ್ಷತೆಯನ್ನು ಕ್ಷೇತ್ರ ಸಮಿತಿಯ ಅಧ್ಯಕ್ಷ ಯಾಸೀನ್ ಅರ್ಕುಲ ವಹಿಸಿ ಪ್ರಾಸ್ತಾವಿಕವಾಗಿ ಮಾತಾಡಿದರು. ಮುಖ್ಯ ಅತಿಥಿಗಳಾಗ...
ಅಂಗನವಾಡಿ ಕಾರ್ಯಕರ್ತೆಯ ಕುತ್ತಿಗೆಯಿಂದ ಚಿನ್ನ ಕಸಿದು ಪರಾರಿಯಾದ ಘಟನೆ ಕಾರ್ಕಳ ತಾಲೂಕಿನ ಇನ್ನಾದಲ್ಲಿ ಇಂದು 9:15ಕ್ಕೆ ನಡೆದಿದೆ. ಇನ್ನಾ ನಿವಾಸಿ ರೇಖಾ ಚಿನ್ನದ ಕರಿಮಣಿ ಸರ ಕಳೆದುಕೊಂಡ ಮಹಿಳೆ. ಇವರು ಕುರ್ಕಿಲಬೆಟ್ಟುವಿನ ಅಂಗನವಾಡಿಯಲ್ಲಿ ಕಾರ್ಯಕರ್ತೆಯಾಗಿ ಕೆಲಸ ಮಾಡಿಕೊಂಡಿದ್ದು, ಸ್ಕೂಟಿಯಲ್ಲಿ ಮನೆಯಿಂದ ಅಂಗನವಾಡಿಗೆ ಇನ್ನಾ ಹೊಸಕಾ...
ಬೆಳ್ತಂಗಡಿ: ನಗರದಲ್ಲಿ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಬ್ಯಾನರ್ ಅಳವಡಿಸುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಒರ್ವ ಮೃತಪಟ್ಟು ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ರಾತ್ರಿಯ ವೇಳೆ ಸಂಭವಿಸಿದೆ. ಭಾರತೀಯ ಮಜ್ದೂರ್ ಸಂಘದ ಮಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದ ಬ್ಯಾನರ್ ಅನ್ನು ಅಳವಡಿಸುತ್ತಿದ್ದ ವೇಳೆ ಅನಾಹುತ ಸಂಭವಿಸಿದೆ...
ಬೆಳ್ತಂಗಡಿ: ಬಳೆಂಜ ಗ್ರಾ.ಪಂ ವ್ಯಾಪ್ತಿಯ ಪೆರಾಲ್ದರಕಟ್ಟೆ ಎಂಬಲ್ಲಿ ಹುಚ್ಚು ನಾಯಿಯೊಂದು ಆಡಿನ ಮರಿಯೊಂದನ್ನು ಕಚ್ಚಿ ಸಾಯಿಸಿದ್ದೂ ಮಾತ್ರವಲ್ಲದೆ ಜನ ಜಾನುವಾರುಗಳನ್ನು ಕಚ್ಚಿ ಗಾಯಗೊಳಿಸಿದ ಘಟನೆ ಮಂಗಳವಾರ ನಡೆದಿದೆ. ಪೆರಾಲ್ದರಕಟ್ಟೆಯ ಪಿ.ಕೆ ಇಂಡಸ್ಟ್ರೀಸ್ ನಲ್ಲಿ ಇಬ್ಬರು ಮಹಿಳೆಯರು ಮತ್ತು ಮಸೀದಿಯ ಬಳಿಯ ಮಹಿಳೆಯೊಬ್ಬರಿಗೆ ನಾಯಿ ಕಚ...
ಮಂಗಳೂರು: ಬಿಜೆಪಿಯ ಸರಕಾರದ ಇಂಜಿನ್ ಕೆಟ್ಟು ಹೋಗಿದೆ. ಸೈಲೆನ್ಸರ್ ಮಾತ್ರ ಸದ್ದು ಮಾಡುತ್ತಿದೆ ಎಂದು ಶಾಸಕ ಯು.ಟಿ.ಖಾದರ್ ವ್ಯಂಗ್ಯ ಮಾಡಿದ್ದಾರೆ. ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿರೋ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಬಿಜೆಪಿ ಸರಕಾರ 2019ರಿಂದ ಈವರೆಗಿನ ಬಜೆಟ್ ನ ಭರವಸೆ,...
ಬೆಳ್ತಂಗಡಿ: ಸರಕಾರಿ ಪ್ರೌಢಶಾಲೆ ಬಂಗಾಡಿ ಪರಿಸರದಲ್ಲಿ ಮಕ್ಕಳನ್ನು ಹಿಡಿಯುವವರು ಪ್ರತ್ಯಕ್ಷರಾಗಿದ್ದಾರೆ, ಪೋಷಕರೇ ಜಾಗೃತೆ ವಹಿಸಿ ಎಂಬ ವಿಷಯವನ್ನು ಯಾರೋ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು, ಇದು ಮಕ್ಕಳ ಅಪಹರಣ ಎಂಬ ವದಂತಿಗೆ ಕಾರಣವಾಗಿ ಪೋಷಕರಲ್ಲಿ ಆತಂಕ ಸೃಷ್ಟಿಸಿದೆ. ಸೋಮವಾರ ಬಂಗಾಡಿ ಪ್ರೌಢ ಶಾಲಾ ಬಳಿ ಯಾರೋ ಅಪರಿಚಿತ ವ್ಯಕ್ತಿಗಳು ...
ಸೊರಬ: ತಾಲ್ಲೂಕಿನ ಚಂದ್ರಗುತ್ತಿ ಹೋಬಳಿ ಬೆನ್ನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕಮರೂರು ಗ್ರಾಮದ ಅಲೆಮಾರಿಗಳಿಗೆ ಸ್ಮಶಾನ ಭೂಮಿ ಮಂಜೂರಾತಿ ಮಾಡುವಂತೆ ಒತ್ತಾಯಿಸಿ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಯಿತು. ಸೊರಬ ತಾಲ್ಲೂಕಿನ ಸಂಚಾಲಕರಾದ ಮಹೇಶ ಶಕುನವಳ್ಳಿ, ರಾಜ್ಯವಿಭಾಗೀಯ ಸಂಚಾಲಕರಾದ ಗುರುರಾಜ್ ಸೊರಬ, ಜಿ...
ಚಿಕ್ಕಮಗಳೂರು: ಜಿಲ್ಲೆಯ ಕಳಸ ಪಟ್ಟಣದ ಮುಖ್ಯ ರಸ್ತೆಯಿಂದ ಹೊರನಾಡಿಗೆ ತೆರಳುವ ರಸ್ತೆಯ ದುಸ್ಥಿತಿಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರೀತಿಯ ವ್ಯಂಗ್ಯ ಚಿತ್ರಗಳು ಹರಿದಾಡುತ್ತಿದ್ದು, ರಸ್ತೆ ಅವ್ಯವಸ್ಥೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಾಹನಗಳು ಚಲಿಸದಷ್ಟು ಹೊಂಡ-ಗುಂಡುಗಳಿಂದ ಹದಗಟ್ಟಿರುವ ರಸ್ತೆಗಳೇ ಸಿ...
ಚಿಕ್ಕಮಗಳೂರು: ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ನಿಗೂಢ ಸಾವಿನ ಕುರಿತು ತನಿಖೆ ಚುರುಕುಗೊಂಡಿದ್ದು, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿರುವ ವಿನಯ್ ಗುರೂಜಿ ಆಶ್ರಮಕ್ಕೆ ಪೊಲೀಸರ ತಂಡ ಭೇಟಿ ನೀಡಿ ವಿಚಾರಣೆ ನಡೆಸಿದೆ ಎಂದು ತಿಳಿದು ಬಂದಿದೆ. ಚನ್ನಗಿರಿ ಪಿಎಸ್ ಐ ನೇತೃತ್ವದ ನಾಲ್ವರ ತಂಡ ...
ಕುಂದಾಪುರ: ಕಳೆದ ತಿಂಗಳ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಪ್ಪಿಸಿ ಕೊಂಡು ಪರಾರಿಯಾಗಿದ್ದ ಮೊಬೈಲ್ ಅಂಗಡಿ ಕಳವು ಆರೋಪಿಯನ್ನು ಕುಂದಾಪುರ ಪೊಲೀಸರು ಮುಂಬೈಯಲ್ಲಿ ಬಂಧಿಸಿದ್ದಾರೆ. ಬಂಧಿತನನ್ನು ಮುಹಮ್ಮದ್ ರಾಹೀಕ್(22) ಎಂದು ಗುರುತಿಸಲಾಗಿದೆ. ಈತ ಕುಂದಾಪುರ ನಗರ ಠಾಣೆ ವ್ಯಾಪ್ತಿಯ ಬೀಜಾಡಿ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಬಳಿಯ ಮೊಬೈ...