ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ (ರಿ.) ವಿಟ್ಲ ಇದರ ಬಂಟ್ವಾಳ ತಾಲೂಕಿನ ಶಂಭೂರು ಮತ್ತು ನರಿಕೊಂಬು ಗ್ರಾಮ ಶಾಖೆಯನ್ನು ಗುರುವಾರ ಸಂಜೆ ರಚಿಸಲಾಯಿತು. ಅಧ್ಯಕ್ಷರಾಗಿ ಚಂದ್ರಹಾಸ ಕೆರೆಕೋಡಿ, ಉಪಾಧ್ಯಕ್ಷರಾಗಿ ಶ್ರೀಧರ ಕುಂದಾಯಗೋಳಿ, ಪ್ರಧಾನ ಕಾರ್ಯದರ್ಶಿಯಾಗಿ ಮೋನಪ್ಪ ನಿನ್ನಿಪಡ್ಪು, ಗೌರವಧ್ಯಕ್ಷರಾಗಿ ಎಂ. ಶಿವಪ್ಪ ...
ಶಿರೂರು: ನಮ್ಮ ನಾಡ ಒಕ್ಕೂಟ ಬೈಂದೂರು ತಾಲೂಕು ಘಟಕದ ಅಧ್ಯಕ್ಷರಾದ ಅಬ್ದುಲ್ ಸಮೀ ಹಳಗೇರಿರವರಿಗೆ ಬೀಳ್ಕೊಡುವ ಸಮಾರಂಭ ಶಿರೂರಿನ ಎ-ಒನ್ ಸೂಪರ್ ಮಾರ್ಕೆಟ್ ನ ಸಭಾಂಗಣದಲ್ಲಿ ಅಕ್ಟೋಬರ್ 31ರಂದು ನಡೆಯಿತು. ನಮ್ಮ ನಾಡ ಒಕ್ಕೂಟ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಹುಸೇನ್ ಹೈಕಾಡಿಯವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವು, ಉಡುಪಿ ಜಿ...
ಶಿರೂರು: ನಮ್ಮ ನಾಡ ಒಕ್ಕೂಟ ಉಡುಪಿ ಜಿಲ್ಲಾ ಘಟಕದ ಕೋಶಾಧಿಕಾರಿ ಜನಾಬ್ ಸಯ್ಯದ್ ಅಜ್ಮಲ್ ರವರು ಹಿರಿಯ ನಾಗರಿಕರ ವೇದಿಕೆ ಶಿರೂರಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ನಮ್ಮ ನಾಡ ಒಕ್ಕೂಟ ಬೈಂದೂರು ವತಿಯಿಂದ ಸನ್ಮಾನಿಸಲಾಯಿತು. ದಿನಾಂಕ 31 ಅಕ್ಟೋಬರ್ ಸೋಮವಾರದಂದು ಸನ್ಮಾನ ಕಾರ್ಯಕ್ರಮವು ಶಿರೂರಿನ ಎ-ವನ...
ಸರ್ಕಾರಿ ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಪ್ಪಿನಂಗಡಿಯ ಹಳೇ ಅರಣ್ಯ ತಪಾಸಣಾ ಕೇಂದ್ರದ ಬಳಿ ನಡೆದಿದೆ. ಗಾಯಗೊಂಡ ಸವಾರ ಭರತ್ ಕುಮಾರ್ ಬಜತ್ತೂರು ಗ್ರಾಮದ ಬೆದ್ರೋಡಿ ನಿವಾಸಿಯಾಗಿದ್ದು, ಕಾರ್ಯನಿಮಿತ್ತ ಉಪ್ಪಿನಂಗಡಿಗೆ ಬೈಕ್ನಲ್ಲಿ ಸಂಚರಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಅಪಘಾ...
ಬೆಳ್ತಂಗಡಿ: ಕಲ್ಮಂಜ ಗ್ರಾಮದ ಕರಿಯ ನೆಲದಲ್ಲಿ ತಂತಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ವ್ಯಕ್ತಿಯ ಸಾವಿಗೆ ಕಾರಣರಾದ ಮೂವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಬೆನ್ನಲ್ಲಿಯೇ ಇದೀಗ ಆರೋಪಿಗಳ ಬಂಧನವಾಗಿದೆ. ಬಂಧಿತ ಆರೋಪಿಗಳು ಕಲ್ಮಂಜ ನಿವ...
ಸಾಮಾಜಿಕ ಜಾಲತಾಣದಲ್ಲಿ ಎಡಿಟ್ ಮಾಡಿದ ಫೋಟೋ ಹಾಕಿ ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಅವರಿಗೆ ಅವಮಾನ ಮಾಡಿರುವ ಆರೋಪದಲ್ಲಿ ಆರೋಪಿ ಸತೀಶ್ ಶೆಟ್ಟಿ ಹಡಾಳಿ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸತೀಶ್ ಶೆಟ್ಟಿ ಬಿಜೆಪಿ ಕಾರ್ಯಕರ್ತರಾಗಿದ್ದು, ಅಂಪಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿದ್ದಾರೆ. ಬಿಜೆಪಿ ಪಕ್ಷದಲ್ಲಿ ಶಾಸಕ...
ಬೆಳ್ತಂಗಡಿ: ವೇಣೂರು ಗೋಳಿಯಂಗಡಿಯ ಮಜ್ಮಉ ಸ್ಸಆದ ಸಂಸ್ಥೆಯ ಹೆಸರಿಗೆ ಧಕ್ಕೆ ತಂದು ಮುಚ್ಚಿಸುವ ಹುನ್ನಾರದಿಂದ ಅಥವಾ ನಮ್ಮ ಏಳಿಗೆ ಸಹಿಸದೆ ಅಸೂಯೆಯಿಂದ ನಮ್ಮ ಫೋಟೋ ಬಳಸಿ ಇಲ್ಲಸಲ್ಲದ ಆಪಾದನೆ ಮಾಡಿ ಪಾಕ್ಷಿಕ ಪತ್ರಿಕೆಯಲ್ಲಿ ಮತ್ತು ಸಾಮಾಜಿಕ ಜಾಲತಾಣದಲ್ಲಿ ವರದಿ ಬಿತ್ತರಿಸಿದ್ದು, ಅದರ ವಿರುದ್ಧ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿ...
ಮೂಡಬಿದ್ರೆ: ಕಾರು ಡಿಕ್ಕಿಯಾಗಿ ಮಹಿಳೆ ಹಾಗೂ ಕಾರಿನಲ್ಲಿದ್ದ ನಾಲ್ವರು ಗಾಯಗೊಂಡ ಘಟನೆ ಕಿನ್ನಿಗೋಳಿ ಮೂಡಬಿದ್ರೆ ರಾಜ್ಯ ಹೆದ್ದಾರಿಯ ಎಂಸಿಸಿ ಬ್ಯಾಂಕ್ ಬಳಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಜಯಂತಿ ಶೆಟ್ಟಿ (50) ಎಂದು ಗುರುತಿಸಲಾಗಿದೆ. ಉಳಿದಂತೆ ಕಾರಿನಲ್ಲಿದ್ದ ಚಾಲಕ ಕೆ.ಹೆಚ್.ಅಬ್ದುಲ್ ಖಾದರ್ (65), ರಿದಾ (16), ರಶ್ಮಿ...
ಬೆಳ್ತಂಗಡಿ: ಕಾಂತಾರ ಚಲನಚಿತ್ರದ ನಟ ರಿಷಬ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ಬುಧವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಹೆಗ್ಗಡೆಯವರ ಬೀಡಿನಲ್ಲಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಹಾಗೂ ಹೇಮಾವತಿ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು. ಡಿ. ವೀರೇಂದ್ರ ಹೆಗ್ಗಡೆಯ...
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪೊಲೀಸರು ಕೊಲೆ ಪ್ರಕರಣಗಳನ್ನು ಮುಚ್ಚಿಹಾಕುತ್ತಿದ್ದಾರೆ ಶಾಸಕರ ಅಣತಿಯಂತೆ ಪೊಲೀಸರು ಕಾರ್ಯನಿರ್ವಹಿಸುತ್ತಿದ್ದಾರೆ. ಇದರಿಂದಾಗಿ ಸಾಮಾನ್ಯ ಜನರಿಗೆ ನ್ಯಾಯವೇ ಸಿಗುತ್ತಿಲ್ಲ. ಕಲ್ಮಂಜ ಕೊಲೆ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಮಾಜಿ ಶಾಸಕ ಕೆ. ವಸ...