ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಗುಂಡಿಗಳನ್ನು ತಕ್ಷಣ ಮುಚ್ಚಲು ಆಗ್ರಹಿಸಿ ಶನಿವಾರ ಗುರುವಾಯನಕೆರೆಯಲ್ಲಿ ಪಕ್ಷಬೇಧ ಮರೆತು ರಸ್ತೆತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ಬೆಳ್ತಂಗಡಿ ಉದ್ಯಮಿ ಯಶವಂತ ಆರ್ ಬಾಳಿಗ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಬೆಳ್ತಂಗಡಿಯ ಹಿರಿಯ ನ್ಯಾಯವಾದಿ ಮನೋಹರ್...
ಮಲ್ಪೆ: ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ ಆಳಸಮುದ್ರ ಬೋಟು ಸಮುದ್ರದಲ್ಲಿ ಮುಳುಗಡೆಗೊಂಡಿದ್ದು, ಅದರಲ್ಲಿದ್ದ 7 ಮಂದಿ ಮೀನುಗಾರರನ್ನು ರಕ್ಷಿಸಿದ್ದಾರೆ. ಲತೀಶ್ ಮೆಂಡನ್ ಅವರಿಗೆ ಸೇರಿದ ಶ್ರೀ ದುರ್ಗಾ ವೈಷ್ಣವಿ ಆಳಸಮುದ್ರ ಬೋಟು ಅ. 29ರಂದು ರಾತ್ರಿ ಮಲ್ಪೆ ಬಂದರಿನಿಂದ ಹೊರಟಿತ್ತು. ಮೀನುಗಾರಿಕೆ ಮುಗಿಸಿ ವಾಪಾಸು ಬರುವಾಗ ಸೆ. 8...
100 ವರ್ಷ ಕಳೆದಿದ್ದರೂ ಮಂಗಳೂರಿನಲ್ಲಿ ಅತ್ಯಂತ ನಾಜೂಕಾಗಿ ಡ್ರೈವ್ ಮಾಡುತ್ತಿದ್ದ, ಮಂಗಳೂರಿನ ನಿವೃತ್ತ ಸೈನಿಕ, ಶತಾಯುಷಿ ಮೈಕಲ್ ಡಿಸೋಜಾ (108) ಅವರು ನಿಧನರಾಗಿದ್ದಾರೆ. ಮದ್ರಾಸ್ ಸರ್ಕಾರದಲ್ಲಿ ಮೆಕ್ಯಾನಿಕಲ್ ಕಮ್ ಡ್ರೈವರ್ ಆಗಿ ಸೇನೆಯಲ್ಲಿ ಹತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿದರು. ಸೈನ್ಯದಲ್ಲಿ 10 ವರ್ಷ ಸೇವೆಯ ನಂತರ ಲೋಕೋಪಯೋಗ...
ಪ್ರವೀಣ್ ನೆಟ್ಟಾರು ಹತ್ಯೆಯಿಂದ ಆಕ್ರೋಶಗೊಂಡಿದ್ದ ಹಿಂದೂ ಕಾರ್ಯಕರ್ತರನ್ನು ಸಮಾಧಾನ ಪಡಿಸಲು ಬಿಜೆಪಿ ಸರ್ಕಾರ ರಾಷ್ಟ್ರೀಯ ತನಿಖಾ ದಳವನ್ನು ಪಿಎಫ್ ಐನವರ ಮನೆಗೆ ಕಳಿಸಿದ್ದಾರೆ ಎಂದು ಪಿಎಫ್ ಐ ರಾಜ್ಯ ಕಾರ್ಯದರ್ಶಿ ಎ.ಕೆ. ಅಶ್ರಫ್ ಹೇಳಿದ್ದಾರೆ. ದಕ್ಷಿಣ ಕನ್ನಡದ ಹಲವೆಡೆ ನಡೆದ ಎನ್ ಐಎ ದಾಳಿ ವಿರೋಧಿಸಿ ಯುಎಪಿಎ ಕಾಯ್ದೆ ವಿರೋಧಿ ಹೋರಾಟ ಸ...
ಮದ್ರಸಾದಿಂದ ತರಗತಿ ಮುಗಿಸಿಕೊಂಡು ಮನೆಗೆ ಹೋಗಲು ರಸ್ತೆ ದಾಟುತ್ತಿದ್ದಾಗ ಬೈಕ್ ಢಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕು ಅರಂಬೂರು ಸಮೀಪದ ಪಾಲಡ್ಕ ಎಂಬಲ್ಲಿ ನಡೆದಿದೆ. ಪಾಲಡ್ಕ ನಿವಾಸಿ ರಶೀದ್ ಎಂಬವರ ಪುತ್ರಿ ಆಯಿಷಾ ರಿಫಾ (6 )ಮೃತಪಟ್ಟ ಬಾಲಕಿ. ಇಂದುಬೆಳಗ್ಗೆ ಮದರಸದ...
ಮಂಗಳೂರು -- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪ ಆಟೋ ರಿಕ್ಷಾವೊಂದು ಪಲ್ಟಿ ಹೊಡೆದ ಬಳಿಕ ಟೆಂಪೋ ಟ್ರಾವೆಲ್ಲರ್ ಗೆ ಡಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ಮಧ್ಯರಾತ್ರಿ ನಡೆದಿದೆ. ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ರಿಕ್ಷಾ ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟೆಂಪೋ ಟ್ರಾವೆಲರ್ ಮಧ್ಯೆ ಅಪಘಾತ ಸಂಭವಿಸಿದೆ. ...
ಬೆಳ್ತಂಗಡಿ: ಕಂದಾಯ ಇಲಾಖೆಯ ದಾಖಲೆಗಳನ್ನು ದುರುಪಯೋಗ ಮಾಡಿದ ಪ್ರಕರಣ ಸಂಬಂಧಪಟ್ಟಂತೆ ಗ್ರಾಮಲೆಕ್ಕಿಗ ಹಾಗೂ ಬ್ರೋಕರ್ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ದೂರು ನೀಡಿದ್ದು, ಅದರಂತೆ ಬೆಳ್ತಂಗಡಿ ಪೊಲೀಸರು ಸೆಪ್ಟೆಂಬರ್ 7 ರಂದು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಶೆಟ್ಟಿಹಳ್ಳಿಯ ಸಿ.ಎ ಕೆರೆ ಮನ...
ಮಂಗಳೂರು: ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್ ಆಗಿ ಬಿಜೆಪಿಯ ಹಿರಿಯ ಕಾರ್ಪೊರೇಟರ್ ಜಯಾನಂದ ಅಂಚನ್ ಆಯ್ಕೆಯಾಗಿದ್ದಾರೆ. ಉಪ ಮೇಯರ್ ಆಗಿ ಬಿಜೆಪಿಯ ಕಾರ್ಪೊರೇಟರ್ ಪೂರ್ಣಿಮಾ ಆಯ್ಕೆಯಾದರು. ಇಂದು ಮಧ್ಯಾಹ್ನ ನಡೆದ ಚುನಾವಣೆಯಲ್ಲಿ ಇಬ್ಬರು ಶಾಸಕರು ಸೇರಿದಂತೆ ಉಪಸ್ಥಿತರಿದ್ದ ಒಟ್ಟು ಮತದಾರರಲ್ಲಿ 46 ಮಂದಿ ಜಯಾನಂದ ಪರ ಮತ ಚಲಾಯಿಸಿದರು. ...
ಕಾರ್ಕಳ: ತಾಲೂಕಿನ ಮುಂಡ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚಿರತೆಯೊಂದು ದಾಳಿ ನಡೆಸಿ ಪರಿಣಾಮ ವೃದ್ಧರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಮುಲ್ಲಡ್ಕದ ರಾಜಶ್ರೀ ರೈಸ್ ಮಿಲ್ ಬಳಿಯ ಕೃಷ್ಣ ಶೆಟ್ಟಿ ಎಂಬವರ ಮೇಲೆ ಚಿರತೆ ದಾಳಿ ನಡೆಸಿದೆ ಎನ್ನಲಾಗಿದೆ. ಚಿರತೆ ದಾಳಿಯಿಂದ ಕೃಷ್ಣ ಶೆಟ್ಟಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನ...
ತುಮಕೂರು: ಲಾರಿ ಹಾಗೂ ಬೊಲೆರೋ ವಾಹನದ ನಡುವೆ ನಡೆದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕುಣಿಗಲ್ ತಾಲೂಕಿನ ಪಿ.ಹೊನಮಾಚನಹಳ್ಳಿ ಬಳಿ ನಡೆದಿದೆ. 30 ವರ್ಷದ ವಯಸ್ಸಿನ ಸಲೀಂ ಪಾಷಾ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕುಣಿಗಲ್ ಮಾರ್ಗವಾಗಿ ಮದ್ದೂರಿಗೆ ಹೋಗುತ್ತಿದ್ದ ಲಾರಿ ಹುಲಿಯೂರುದುರ್ಗದಿಂದ...