4:07 PM Wednesday 5 - November 2025

ಧಾರಾಕಾರ ಮಳೆಗೆ ಚಾರ್ಮಾಡಿ ಘಾಟಿ ರಸ್ತೆಯ ತಡೆಗೋಡೆ ಕುಸಿತ

charmadi

ಬೆಳ್ತಂಗಡಿ: ಮಲೆನಾಡು ಭಾಗದಲ್ಲಿ ಮುಂದುವರೆದ  ಧಾರಾಕಾರ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆಯ ತಡೆ ಗೋಡೆ ಭಾನುವಾರ ಕುಸಿತಗೊಂಡಿದೆ. ಘಾಟಿಯ ಬಿದ್ರುತಳ ಸಮೀಪ ತಡೆಗೋಡೆ ಒಂದು ಭಾಗ ಸಂಪೂರ್ಣವಾಗಿ ಕುಸಿತ ಕಂಡಿದೆ.

ಇನ್ನಷ್ಟು ಕುಸಿತ ಉಂಟಾದರೆ, ರಸ್ತೆಯ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ ಇದೆ. ರಾಷ್ಟ್ರೀಯ ಹೆದ್ದಾರಿ ಇಲಾಖೆಯವರು ರಸ್ತೆಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ. ಮಳೆ ಮುಂದುವರಿದರೆ ತಡೆಗೋಡೆಯ ಇನ್ನಷ್ಟು ಭಾಗಗಳು ಕುಸಿಯುವ ಅಪಾಯವಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka




Exit mobile version