ಜಿ.ಕೃಷ್ಣ ಬೆಳ್ತಂಗಡಿ ನಿರ್ದೇಶನದ ದ.ಕ.ಜಿಲ್ಲೆಯ ನೈಜ ಘಟನೆ ಪ್ರೇರಿತ ಚಿತ್ರ ಬೆಳ್ತಂಗಡಿ: ಜಿ.ಕೃಷ್ಣ ಬೆಳ್ತಂಗಡಿ ಅವರ ನಿರ್ದೇಶನದ 'ರಿಪ್ಪರ್' ಸಿನಿಮಾದ ಮೊದಲ ಪೋಸ್ಟರ್ ಅನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಜಿ. ಕೃಷ್ಣ ಬೆಳ್ತಂಗಡಿ ನಿರ್ದೇಶನದ ಎರಡನೇ ಚಿತ್ರ '...
ಉಡುಪಿಯಲ್ಲಿ ಅಷ್ಟಮಿಯ ಪ್ರಯುಕ್ತ ನಡೆಯುವ ವಿಟ್ಲಪಿಂಡಿ ಮಹೋತ್ಸವ ಅತ್ಯಂತ ವೈಭವದಿಂದ ಸಂಪನ್ನಗೊಂಡಿತು. ಎರಡು ದಿನಗಳ ಕಾಲ ನಡೆಯುವ ಉತ್ಸವದಲ್ಲಿ ಕೃಷ್ಣದೇವರ ಮೆರವಣಿಗೆ ನಡೆಸಲಾಗುವ ವಿಟ್ಲಪಿಂಡಿ ಮಹೋತ್ಸವವೆಂದರೆ ವೈಭವದ ಹಬ್ಬ. ಇಂದು ಚಿನ್ನದ ರಥದಲ್ಲಿ ಕೃಷ್ಣದೇವರ ಮೆರವಣಿಗೆ ನಡೆಯಿತು. ಚಾತುರ್ಮಾಸ್ಯ ಕಾಲವಾದ ಕಾರಣ ಉತ್ಸವ ಮೂರ್ತಿಯನ್...
ಮಂಗಳೂರು: ಸಮುದ್ರದಲ್ಲಿ ಸ್ನಾನಕ್ಕೆ ಇಳಿದಿದ್ದ ಯುವಕ ನೀರುಪಾಲಾಗಿರುವ ಘಟನೆ ಮಂಗಳೂರು ನಗರದ ಹೊರವಲಯದ ತಣ್ಣೀರುಬಾವಿ ಬೀಚ್ ನಲ್ಲಿ ನಡೆದಿದೆ. ಮೃತ ಯುವಕನನ್ನು ತಣ್ಣೀರುಬಾವಿ ನಿವಾಸಿ ಮುಹಮ್ಮದ್ ಕೈಫ್(19) ಎಂದು ತಿಳಿದು ಬಂದಿದೆ. ಮುಹಮ್ಮದ್ ಕೈಫ್ ಮನೆಯ ಸಮೀಪದ ತಣ್ಣೀರುಬಾವಿ ಕಡಲಿನಲ್ಲಿ ಸ್ನಾನಕ್ಕೆಂದು ಹೋಗಿದ್ದು, ಸಮುದ್ರದ ಬೃಹತ್...
ಮಂಗಳೂರು: ಯುವಕನಿಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಮಂಗಳೂರಿನ ಹೊರವಲಯದ ವಳಚ್ಚಿಲ್ ಎಂಬಲ್ಲಿ ನಡೆದಿದೆ. ಯುವಕನ ಸ್ಥಿತಿ ಚಿಂತಾಜನಕವಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಮನೆಗೆ ಸಾಮಾನು ತರಲು ಅಂಗಡಿಗೆ ತೆರಳಿದ್ದ ಮಿಫ್ತಾಹ್ ಎಂಬ ಬಾಲಕನನ್ನು ತಡೆದಿದ್ದ ಗ್ಯಾಂಗ್ ವೊಂದು ಮಾರಕಾಸ್ರ್ತಗಳಿಂದ ಹಲ್ಲೆ ನಡೆಸಲು ಯತ್ನಿಸುತ್ತಿದ್ದ ...
ಬೈಂದೂರು: ವಿಪರೀತ ಕೆಮ್ಮು ಹಾಗೂ ವಾಂತಿಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆ ಅಸುನೀಗಿದ ಘಟನೆ ಬೈಂದೂರು ತಾಲೂಕಿನ ಬಿಜೂರು ಗ್ರಾಮದ ಚಾರಕೊಡ್ಲು ಎಂಬಲ್ಲಿ ಆ.19ರಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಚಾರಕೊಡ್ಲು ನಿವಾಸಿ ರಾಘವೇಂದ್ರ ಗಾಣಿಗ ಎಂದು ಗುರುತಿಸಲಾಗಿದೆ. ಇವರು ಬಸ್ ಕಂಡಕ್ಟರ್ ಆಗಿ ಕೆಲ...
ಉಡುಪಿ ನಗರದ ಬ್ರಹ್ಮಗಿರಿ ಸರ್ಕಲ್ ನಲ್ಲಿ ಹಾಕಲಾಗಿದ್ದ ಸಾವರ್ಕರ್ ಭಾವಚಿತ್ರವಿರುವ ಕಟೌಟ್ ಅನ್ನು ತೆರವುಗೊಳಿಸಲಾಗಿದೆ. ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದ ಈ ಕಟೌಟನ್ನು ಆಗಸ್ಟ್ ಹದಿನೈದರಂದು ಸ್ವಾತಂತ್ರ್ಯೋತ್ಸವಕ್ಕೆ ಶುಭ ಕೋರಲು ಹಾಕಲಾಗಿತ್ತು . ಇದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಎಸ್ ಡಿಪಿಐ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ...
ಉಡುಪಿ: ಕೊಡಗಿನಲ್ಲಿ ಮಳೆ ಹಾನಿ ನಿರ್ವಹಿಸಲು ರಾಜ್ಯ ಸರ್ಕಾರ ವಿಫಲವಾಗಿದ್ದು, ಹೀಗಾಗಿ ಸಿದ್ದರಾಮಯ್ಯನವರು ಪರಿಶೀಲನೆಗೆ ತೆರಳಿದಾಗ ಮೊಟ್ಟೆ ಎಸೆದು, ಕಪ್ಪು ಬಾವುಟ ತೋರಿಸಿ ಬಿಜೆಪಿ ಕಾರ್ಯಕರ್ತರು ತಡೆಯೊಡ್ಡಿದ್ದಾರೆ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅಭಿಪ್ರಾಯಪಟ್ಟಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ವಿರೋ...
ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ 73ರ ಚಾರ್ಮಾಡಿ ರಸ್ತೆಯ ಬದಿ,ಉಜಿರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಲ್ಲೆ ಎಂಬಲ್ಲಿ ಕಿಡಿಗೇಡಿಗಳು ಕೊಳೆತ ಮೊಟ್ಟೆಗಳನ್ನು ಎಸೆದಿರುವ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. ಕೊಳೆತ ಮೊಟ್ಟೆಗಳ ವಾಸನೆಯಿಂದಾಗಿ ಈ ಪರಿಸರದಲ್ಲಿ ಜನ ನಡೆದಾಡಲೂ ಕಷ್ಟವಾಗಿತ್ತು. ಬಳಿಕ ಉಜಿರೆ ಪಂಚಾಯಿತಿ ವ್ಯಾಪ್ತಿಯಿಂದ ಇವ...
ಉಡುಪಿ: ಸರ್ಕಾರಿ ಶಾಲೆಗಳಲ್ಲಿ ಗಣೇಶೋತ್ಸವಕ್ಕೆ ಆಕ್ಷೇಪ ವ್ಯಕ್ತವಾದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಸುನೀಲ್ ಕುಮಾರ್, ದೇಶದ ಸಂಪ್ರದಾಯ ಪರಂಪರೆಯನ್ನು ನಾವು ಉಳಿಸಿಕೊಳ್ಳುತ್ತೇವೆ. ಅನಗತ್ಯವಾಗಿ ವಿವಾದ ಮಾಡಬೇಡಿ ಎಂದಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಸಹಜವಾಗಿಯೇ ಸಾರ್ವಜನಿಕ ಗಣೇಶ ಉತ್ಸವಗಳು ನಡೆಯುತ್ತೆ. ಶಾಲೆಯ ...
ಮಂಗಳೂರು: ಇದು ಕೇವಲ ದೈಹಿಕ ದಾಳಿ ಅಲ್ಲ ತತ್ವ ಸಿದ್ದಾಂತದ ಮೇಲೆ ನಡೆದ ದಾಳಿ, ಈ ರೀತಿಯ ದಾಳಿಗೆ ಕಾಂಗ್ರೆಸ್ ಭಯ ಪಡುವುದಿಲ್ಲ. ಈ ಮೂಲಕ ಬಿಜೆಪಿಯವರು ನಮ್ಮನ್ನು ಹೆದರಿಸಲು ಸಾಧ್ಯವಿಲ್ಲ ಎಂದು ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಅವರು, ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊಡಗಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯನವರ ಕಾರಿನ...