ದಕ್ಷಿಣ ಕನ್ನಡ: ಬಸ್ ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ಹೆಡ್ ಕಾನ್ಸ್ಟೇಬಲ್ ಗಂಭೀರ ಗಾಯಗೊಂಡ ಘಟನೆ ಕೊಡಾಜೆ ಎಂಬಲ್ಲಿ ಮಂಗಳವಾರ ನಡೆದಿದೆ. ಖಾಸಗಿ ಬಸ್ ಚಾಲಕನ ಅಜಾಗರೂಕತೆಯಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಬೈಕ್ ನಲ್ಲಿ ಉಪ್ಪಿನಂಗಡಿ ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಧರ್ಣಪ್ಪ ಗೌಡ ಮತ್ತು ಅವರ ಪು...
ಉಡುಪಿ: ಟಿಪ್ಪು ಹೆಸರಿನಲ್ಲಿ ದೇವರಿಗೆ ಪೂಜೆ ಮಾಡುವುದು ಸರಿಯಲ್ಲ. ಅದು ದೇವರಿಗೆ ಮಾಡುವ ಅಪಮಾನ. ಇದರಿಂದ ದೇವರ ಶಕ್ತಿ ಕಡಿಮೆಯಾಗುತ್ತದೆ ಎಂದು ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ. ಉಡುಪಿಯ ಬೈಂದೂರಿನಲ್ಲಿ ಮಾಧ್ಯಮಗಳೊಂದಿಗೆ ಶೃಂಗೇರಿಯ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದಲ್ಲಿ ನಡೆಯುವ ಸಲಾಂ ಆರತಿ ಪೂಜೆಗೆ ಸಂಬ...
ಮಡಿಕೇರಿ: ಹುಳಿ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಪೋನ್ನಂಪೇಟೆ ತಾಲೂಕಿನ ವಿ ಬಾಡಗ ಸಮೀಪದ ಕಾಫಿತೋಟದಲ್ಲಿ ಘಟನೆ ನಡೆದಿದೆ. ಗಣೇಶ್ (29) ಹುಲಿ ದಾಳಿಗೆ ಮೃತ ಪಟ್ಟ ಯುವಕ. ಈತ ಗ್ರಾಮದ ಅಯ್ಯಪ್ಪ ಎಂಬವರ ಕಾಫಿತೋಟದಲ್ಲಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಹುಲಿಯೊಂದು ಏಕಾಏಕಿ ದಾಳಿ ನಡೆಸಿದೆ. ಈ ವೇಳೆ ಯುವಕ ...
ರಾಮಕುಂಜ: ಬೈಕ್ ಹಾಗೂ ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಬೈಕ್ನಲ್ಲಿ ಸಂಚರಿಸುತ್ತಿದ್ದ ತಾಯಿ ಹಾಗೂ ಮಗ ಗಂಭೀರ ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ಕೊಯಿಲದಲ್ಲಿ ನಡೆದಿದೆ. ಆತೂರಿನಿಂದ ಉಪ್ಪಿನಂಗಡಿ ಕಡೆಗೆ ಸಂಚರಿಸುತ್ತಿದ್ದ ಬೈಕ್ ಹಾಗೂ ಉಪ್ಪಿನಂಗಡಿಯಿಂದ ಆತೂರು ಕಡೆಗೆ ಬರುತ್ತಿದ್ದ ಕಾರು ಉಪ್ಪಿನಂಗಡಿ...
ಮಂಗಳೂರು: ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಮಂಗಳೂರಿನ ಕೆ ಎಂ ಫಯಾಝ್ ರವರು ಅವಿರೋಧವಾಗಿ ಆಯ್ಕೆಯಾದರು. ಅಡ್ವಕೇಟ್ ಎಸ್ ಸುಲೈಮಾನ್ ರವರ ಅಧ್ಯಕ್ಷತೆಯಲ್ಲಿ ಪಕ್ಷದ ಜಿಲ್ಲಾ ಕಛೇರಿಯಲ್ಲಿ ನಡೆದ ದ.ಕ ಜಿಲ್ಲಾ ಕೌಂಸಿಲ್ ಸಭೆಯಲ್ಲಿ ನೂತನ ಜಿಲ್ಲಾ ಸಮಿತಿಯನ್ನು ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಯಿತು. ...
ಚಿಕ್ಕಮಗಳೂರು: ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಅಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರಿನ ಕೆಳಗೂರು ಗ್ರಾಮದಲ್ಲಿ ನಡೆದಿದೆ. ಮೂಲತಃ ಹಾವೇರಿ ಜಿಲ್ಲೆ ರಾಣಿಬೆನ್ನೂರು ತಾಲೂಕಿನ ಬ್ಯಾಡಗಿ ಮೂಲದ ಸರೋಜಬಾಯಿ (45) ಮೃತ ಮಹಿಳೆ. ಈ ಘಟನೆಯಲ್ಲಿ ಮತ್ತೊರ್ವ ಕಾರ...
ಕೊಲ್ಲೂರು: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಟಿಪ್ಪುವಿನ ಹೆಸರಿನಲ್ಲಿ ಪ್ರತೀ ದಿನ ನಡೆಯುತ್ತಿರುವ ಸಲಾಂ ಮಹಾಮಂಗಳಾರತಿಯ ಹೆಸರನ್ನು ತೆಗೆಸಬೇಕೆಂದು ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ನೇತೃತ್ವದಲ್ಲಿ ದೇವಾಲಯದ ಅಧಿಕಾರಿಗಳ ಬಳಿ ಮನವಿ ಮಾಡಿದ್ದಾರೆ. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನವು ಐತಿಹಾಸಿಕ ಹಿನ್ನ...
ಉಡುಪಿ: ನಗರದಲ್ಲಿ ಬೆಳ್ಳಂಬೆಳಗ್ಗೆ ಅಕ್ರಮವಾಗಿ ನಿರ್ಮಿಸಿದ ಕಟ್ಟಡಗಳ ತೆರವು ಕಾರ್ಯಾಚರಣೆ ಆರಂಭವಾಗಿದ್ದು, ಈ ವೇಳೆ ಎಸ್ಡಿಪಿಐ ಜಿಲ್ಲಾಧ್ಯಕ್ಷ ನಜೀರ್ ಅಹಮ್ಮದ್ ಝರಾ ನಿರ್ಮಿಸಿದ್ದ ಹೋಟೆಲ್ನ್ನು ತೆರವು ಮಾಡಲಾಗುತ್ತಿದೆ. ನಗರಸಭೆ ಅಧಿಕಾರಿಗಳು ಜಾಮಿಯಾ ಮಸೀದಿ ಕಾಂಪ್ಲೆಕ್ಸ್ನಲ್ಲಿ ಜೆಸಿಬಿಗಳ ಮೂಲಕವಾಗಿ ಅಕ್ರಮ ಅಂಗಡಿಗಳ ತೆರವು ಕಾರ್ಯ...
ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಆರೋಪವು ಮಂಗಳೂರಿನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಹಾಗೂ 2ನೇ ತ್ವರಿತಗತಿ ವಿಶೇಷ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಅಪರಾಧಿಗೆ ಪೋಕ್ಸೋ ಕಾಯ್ದೆಯ ಕಲಂ 6ರನ್ವಯ 10 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 25,000 ರೂ. ದಂಡ ವಿಧಿಸಲಾಗಿದೆ. ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಬೊಳ್...
ಉಳ್ಳಾಲ: ಉಳ್ಳಾಲದ ಕೋಣಾಜೆ ವ್ಯಾಪ್ತಿಯಲ್ಲಿ ಕಳವು ಪ್ರಕರಣದ ಸಂಬಂಧ ಆರೋಪಿಯನ್ಬು ಬಂಧಿಸಲು ತೆರಳಿದ್ದ ವೇಳೆ ಆರೋಪಿಯು ಎಸ್ಐಗೆ ಚೂರಿ ಇರಿದು ಪರಾರಿಯಾದ ಘಟನೆ ನಡೆದಿದೆ. ಸಾದಿಕ್ ಚೂರಿ ಇರಿದು ಪರಾರಿಯಾಗಿರುವ ಆರೋಪಿಯಾಗಿದ್ದಾನೆ. ಕೊಣಾಜೆ ಠಾಣಾ ಎಸ್.ಐ ಶರಣಪ್ಪ ಅವರು ಚೂರಿ ಇರಿತಕ್ಕೊಳಗಾದವರಾಗಿದ್ದರೆ. ಪೊಲೀಸರು ಆರೋಪಿಯ ಸಹೋದರನನ್ನು ವಶ...