ಮಂಗಳೂರು: ದ.ಕ ಜಿಲ್ಲೆಯ ಬೆಳ್ಳಾರೆ ಠಾಣೆ ಪೊಲೀಸರ ವಿರುದ್ಧ ಯುವಕನನ್ನು ನಗ್ನಗೊಳಿಸಿ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ವಿಡಿಯೋ ಮೂಲಕ ತನ್ನ ಅಳಲು ತೋಡಿಕೊಂಡಿರುವ ಸಂತ್ರಸ್ತ, ಬೆಳ್ಳಾರೆ ಠಾಣೆಯ ತನ್ನ ಮೇಲೆ ಸುಳ್ಳು ಕೇಸು ದಾಖಲಿಸಿ, ಠಾಣೆಗೆ ಕರೆದುಕೊಂಡು ಹೋಗಿ ನಗ್ನಗೊಳಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ....
ಮಂಗಳೂರು: ಮರುವಾಯಿ ಮೀನಿನ ಪದಾರ್ಥ ತಿಂದು ಹಲವರು ಅಸ್ವಸ್ಥರಾಗಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಂಗಳೂರಿನ ಗಂಜಿಮಠ, ಕುಪ್ಪೆಪದವು, ಕುಳವೂರು, ಮುತ್ತೂರು ಪರಿಸರದಲ್ಲಿ ಈ ಘಟನೆ ನಡೆದಿದೆ. ಕಳೆದ ಶನಿವಾರ ಈ ಘಟನೆ ನಡೆದಿದೆ. ಸ್ಥಳೀಯ ಮೀನು ಮಾರಾಟಗಾರನಿಂದ ಪಡೆದ ಮರುವಾಯಿ ಮೀನನ್ನು ಮನೆಯಲ್ಲಿ ಪದಾರ್ಥ ಮಾಡಿ ತಿಂದವರು ಅಸ್ವಸ್ಥರಾದ್ದ...
ಬಂಟ್ವಾಳ: ಡೆತ್ ನೋಟು ಬರೆದಿಟ್ಟು ವಿಟ್ಲ ಪಟ್ಟಣ ಪಂಚಾಯತ್ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬಂಟ್ವಾಳ ನೇತ್ರಾವತಿ ಸೇತುವೆಯ ಬಳಿ ನಡೆದಿದೆ. ರಾಜೇಶ್ ಆತ್ಮಹತ್ಯೆಗೆ ಯತ್ನಿಸಿರುವ ವಿಟ್ಲ ಪ.ಪಂ. ಪೌರ ಕಾರ್ಮಿಕರಾಗಿದ್ದಾರೆ. ಇವರು ನೇತ್ರಾವತಿ ಸೇತುವೆಯ ಬಳಿ ಆತ್ಮಹತ್ಯೆ ಯತ್ನಸಿದ್ದು, ಸ್ಥಳೀಯರು ಅವರನ್ನು ರಕ್ಷಿಸಿ ಆಸ್ಪ...
ಮೂಡುಬಿದಿರೆ: ಯಕ್ಷಗಾನ ಮುಗಿಸಿ ಮನೆಗೆ ತೆರಳುತ್ತಿದ್ದ ಕಲಾವಿದರೊಬ್ಬರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಮೂಡುಬಿದಿರೆ-ವೇಣೂರು ರಸ್ತೆಯ ಗಂಟಾಲ್ ಕಟ್ಟೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಕುಂದಾಪುರ ಹಿರಿಯಡ್ಕ ಮೇಳದ ಹಿರಿಯ ಕಲಾವಿದ ವೇಣೂರು ವಾಮನ ಕುಮಾರ್(46 ) ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ ಕುಂದಾಪುರದ...
ಬೆಂಗಳೂರು: ಮಂಗಳೂರಿನ ಪಚ್ಚನಾಡಿ ಭೂಭರ್ತಿ ಘಟಕದಲ್ಲಿ ಬಹಳ ದಿನಗಳಿಂದ ಉಳಿದಿರುವ ತ್ಯಾಜ್ಯ ವಿಲೇವಾರಿ ಮಾಡುವಲ್ಲಿ ವಿಳಂಬ ಮಾಡುತ್ತಿರುವ ಮಂಗಳೂರು ಮಹಾನಗರ ಪಾಲಿಕೆ ವರ್ತನೆಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೆ, ವಿಲೇವಾರಿ ಕಾರ್ಯವನ್ನು ಶೀಘ್ರವಾಗಿ ಆರಂಭಿಸದಿದ್ದರೆ ಪಾಲಿಕೆ ಆಯುಕ್ತರು ಮುಂದಿನ ವಿಚಾರಣೆಗೆ ಖುದ್ದು ಹಾಜರಾಗಬೇಕು...
ಉಡುಪಿ: ಗಣರಾಜ್ಯೋತ್ಸವ ಪರೇಡ್ನಲ್ಲಿ ನಾರಾಯಣ ಗುರುಗಳ ಹೆಸರನ್ನು ಮುಂದಿಟ್ಟುಕೊಂಡು ಕೇರಳ ರಾಜ್ಯ ಅನವಶ್ಯಕ ವಿವಾದ ಸೃಷ್ಟಿಸುತ್ತಿರುವುದು ಸರಿಯಲ್ಲ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈವರೆಗೂ ನಡೆದುಕೊಂಡ ಬಂದ ಪದ್ಧತಿಯಂತೆ ಗಣರಾಜ್ಯೋತ್ಸವ ಪೆರೇಡ್ ಗೆ ರಾಜ್ಯಗಳು ಮತ್ತು ...
ಬೆಳ್ತಂಗಡಿ: ಬೈಕ್ ಮತ್ತು ಲಾರಿ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಮದ್ದಡ್ಕದಲ್ಲಿ ಸೋಮವಾರ ರಾತ್ರಿ ವೇಳೆ ಸಂಭವಿಸಿದೆ. ಮೃತರನ್ನು ನಾವೂರಿನ ನಿವಾಸಿ ಹಮೀದ್ ಕುದುರು ಅವರ ಪುತ್ರ ಮಿಸ್ಬಾಹುದ್ದೀನ್(19) ಎಂದು ತಿಳಿದುಬಂದಿದೆ. ಮತ್ತೋರ್ವ ಯುವಕ ಕುವೆಟ್ಟು ಗ್ರಾಮದ ಗುರುವಾಯನಕೆರೆ ನಿವಾಸಿ ಅಶ್ರಫ್ ...
ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿ ಅವರ ದೀರ್ಘಾಯಸ್ಸು ಹಾಗೂ ಆರೋಗ್ಯ ವೃದ್ಧಿಗಾಗಿ ಧರ್ಮಸ್ಥಳ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಹೋಮ ಸೋಮವಾರ ಬೆಳಗ್ಗ 7ಗಂಟೆಯಿಂದ ನಡೆಯುತ್ತಿದೆ. ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನ ಸಮಸ್ತ ಜನತೆಯ ಪರವಾಗಿ ವೇದಮೂರ್ತಿ ನಾಗೇಂದ್ರ ಭಾರದ್ವಾಜ್ ಸುರತ್ಕಲ್ ಅವರ ...
ಮಂಗಳೂರು: ಸೂಕ್ತ ಸರ್ಕಾರಿ ಕಚೇರಿ ದೊರಕದ ಹಿನ್ನೆಲೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ಎಸ್.ಅಂಗಾರ ಅವರು ಬಂದರು ಇಲಾಖೆಯ ಸುಪರ್ದಿಯಲ್ಲಿದ್ದ ಸ್ಟೇಟ್ ಬ್ಯಾಂಕ್ - ರೊಸಾರಿಯೊ ಚರ್ಚ್ ರಸ್ತೆಯಲ್ಲಿರುವ ಪಾರಂಪರಿಕ ಬ್ರಿಟಿಷ್ ಕಾಲದ ಬಂಗಲೆಯಲ್ಲಿ ತಮ್ಮ ಕಚೇರಿ ತೆರೆದಿದ್ದಾರೆ. ಈ ಭವ್ಯ ಬಂಗಲೆ ಬ್ರಿಟಿಷರ ಕಾಲದ ಹಳೆಯ ಬಂದರು ...
ಹೆಬ್ರಿ: ಪಾಂಡುರಂಗ ರಮಣ ನಾಯಕ ಅಮೃತ ಭಾರತಿ ವಿದ್ಯಾಲಯ ಹೆಬ್ರಿಯಲ್ಲಿ ಜನವರಿ 12 ರಂದು ಸ್ವಾಮಿ ವಿವೇಕಾನಂದ ಜಯಂತಿ ಆಚರಿಸಲಾಯಿತು. ಅಮೃತ ಭಾರತಿ ವಿದ್ಯಾಲಯದ ಪ್ರಾಥಮಿಕ ಸಭಾಂಗಣದಲ್ಲಿ ಬೆಳಗಿನ ಪ್ರಾರ್ಥನಾ ಅವಧಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಮತ್ತು ಬೋಧಕ ಬೋಧಕೇತರರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಸಲಾಯಿತ...