ಮೂಡಬಿದ್ರಿ: ತುಳುನಾಡಿನ ಅವಳಿ ವೀರರಾದ ಕಾನದ ಕಟದರು ಸುಮಾರು 450 ವರುಷಗಳ ಹಿಂದೆ ಹುಟ್ಟಿ ಪಂಚ ಶೀಲ ತತ್ವಗಳನ್ನು ಮೈಗೂಡಿಸಿಕೊಂಡು, ಸಮಾಜದಲ್ಲಿ ಬೇರೂರಿದ್ದ ಅಸ್ಪೃಶ್ಯತೆ, ಅಸಮಾನತೆ, ದಬ್ಬಾಳಿಕೆ, ಊಳಿಗಮಾನ್ಯ ವ್ಯವಸ್ಥೆಯ ವಿರುದ್ಧ ಹೋರಾಡಿ, ಸ್ವಾಭಿಮಾನದ, ಸ್ವಾವಲಂಬನೆಯ ಬದುಕನ್ನು ಕಟ್ಟಿಕೊಂಡು ಮುಂದಿನ ಪೀಳಿಗೆಗೆ ಮಾದರಿಯಾಗಿ ಅಜರಾಮರರಾಗಿ...
ಚಿತ್ರದುರ್ಗ: ನಾಯಕನಹಟ್ಟಿ ಪಟ್ಟಣ ಪಂಚಾಯಿತಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆದು ಅಧಿಕಾರದ ಗದ್ದುಗೆ ಹಿಡಿದಿದ್ದು, ಬಿಜೆಪು ಪಕ್ಷ ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ. ಕೇವಲ 2 ಕ್ಷೇತ್ರಗಳಲ್ಲಿ ಮಾತ್ರವೇ ಬಿಜೆಪಿ ಗೆಲುವು ಸಾಧಿಸಲು ಸಾಧ್ಯವಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಪ್ರತಿನಿಧಿಸುವ ಮೊ...
ಇಳಕಲ್: ಬಾಗಲಕೋಟೆ ಜಿಲ್ಲೆಯ ಇಳಕಲ್ ನ ಪಟ್ಟಣದ ಸೈಂಟ್ ಪಾಲ್ ಕಾನ್ವೆಂಟ್ ಶಾಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪಾಲಕರನ್ನು ಆಮಿಷ ಒಡ್ಡಿ ಮತಾಂತರ ಮಾಡಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಹಾಗೂ ಆರೆಸ್ಸೆಸ್ ಪ್ರಮುಖರು ಬುಧವಾರ ಪ್ರತಿಭಟನೆ ನಡೆಸಿದರು. ಡಿಸೆಂಬರ್ 25ರಂದು ಸೈಂಟ್ ಪಾಲ್ ಕಾನ್ವೆಂಟ್ ಶಾಲೆಯಲ್ಲಿ ಕ್ರಿಸ್ ಆಚರಣೆ...
ದಾವಣಗೆರೆ: ಲಂಚ ಸ್ವೀಕರಿಸುತ್ತಿದ್ದ ವೇಳೆ ಲೈನ್ ಮ್ಯಾನ್ ವೊಬ್ಬರು ಎಸಿಬಿ ಬಲೆಗೆ ಬಿದ್ದ ಘಟನೆ ದಾವಣಗೆರೆಯಲ್ಲಿ ನಡೆದಿದ್ದು, ಸದ್ಯ ಲೈನ್ ಮ್ಯಾನ್ ನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ದಾವಣಗೆರೆಯ ಬೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಕಚೇರಿಯ ಎಂಟಿ ಉಪವಿಭಾಗದ ಲೈನ್ ಮ್ಯಾನ್ ರವಿಕುಮಾರ್ ಎಸಿಬಿ ಬಲೆಗೆ ಬಿದ್ದವರು ಎ...
ಬೆಳಗಾವಿ: ಪಟಾಕಿ ಸಿಡಿದ ಪರಿಣಾಮ ದೇವರ ರಥಕ್ಕೆ ಬೆಂಕಿ ಹತ್ತಿಕೊಂಡ ಘಟನೆ ಜಿಲ್ಲೆಯ ರಾಮದುರ್ಗ ತಾಲೂಕಿನ ಶಿವಪೇಟೆ ಗ್ರಾಮದಲ್ಲಿ ನಡೆದಿದ್ದು, ಕೆಲ ಕಾಲ ಭಕ್ತರು ಆತಂಕಕ್ಕೀಡಾದ ಘಟನೆ ನಡೆಯಿತು. ಶಿವಪೇಟೆಯಲ್ಲಿ ನಿನ್ನೆ ಶ್ರೀ ಜಡಿ ಶಂಕರಲಿಂಗ ದೇವರ 38ನೇ ವರ್ಷದ ಮಹಾರಥೋತ್ಸವ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸ್ಥಳದಲ್ಲಿ ಕೆಲ ಭಕ್ತರು ಪಟಾಕ...
ಮೂಡುಬಿದಿರೆ: ತುಲುನಾಡ್ ಮನ್ಸ ಸಮಾಜ ಸೇವಾ ಸಂಘ (ರಿ) ಕೇಂದ್ರ ಸಮಿತಿ, ತುಲುನಾಡ್ ಮೂಡುಬಿದಿರೆ ಇದರ ವಾರ್ಷಿಕ ಮಹಾ ಸಭೆಯು ಇತ್ತೀಚಿಗೆ ನಡೆದು, ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಶನಿವಾರ ಮೂಡುಬಿದಿರೆಯ ಸ್ಕೌಟ್ ಮತ್ತು ಕನ್ನಡ ಭವನದಲ್ಲಿ ಯಶಸ್ವಿಯಾಗಿ ನಡೆಯಿತು. ನೂತನ ಪದಾಧಿಕಾರಿಗಳು: ಗೌರವಾಧ್ಯಕ್ಷರಾಗಿ ಪಿ.ಡೀಕಯ್ಯ, ಅಧ್ಯ...
ಮಂಗಳೂರು: ಸಾಲದ ಬಾಧೆಯಿಂದ ಬೇಸತ್ತು ಇಂಜಿನಿಯರಿಂಗ್ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರು ಹೊರವಲಯದಲ್ಲಿ ವರದಿಯಾಗಿದೆ. ಬಿಹಾರದ ಪಾಟ್ನಾ ಮೂಲದ ಸೌರವ್ ಕುಮಾರ್ ಯಾದವ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮಂಗಳೂರು ಹೊರವಲಯದ ಸುರತ್ಕಲ್ ಎನ್ಐ ಟಿಕೆ ಕಾಲೇಜಿನಲ್ಲಿ ಇಲೆಕ್ಟ್ರಾನಿಕ್ ಇಂಜಿನಿಯರಿಂಗ್...
ಮಂಗಳೂರು: ಬಹುಜನ ಸಮಾಜ ಪಾರ್ಟಿ – (BSP) ಇದರ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪದಾಧಿಕಾರಿಗಳ ತರಬೇತಿ ಸಭೆಯು ಭಾನುವಾರ ಮಂಗಳೂರು ಪೇಜಾವರದ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಬಹುಜನ ಸಮಾಜ ಪಕ್ಷದ ಕರ್ನಾಟಕ ರಾಜ್ಯ ಸಂಯೋಜಕರಾದ ಮಾನ್ಯ ದಿನೇಶ್ ಗೌತಮ್, ರಾಜ್ಯ ಕಾರ್ಯದರ್ಶಿ ವೇಲಾಯುಧನ್, ರಾಜ್ಯ ಕಾರ್ಯದರ್ಶಿ ಕಾಂತಪ್ಪ ಆ...
ಮಂಗಳೂರು: ರಾಜ್ಯದಲ್ಲಿ ಹಲವಾರು ವರ್ಷಗಳಿಂದ ಅತಿಥಿ ಉಪನ್ಯಾಸಕರು ಬಹಳಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದರೂ ಸರಕಾರ ಅವರ ಬೇಡಿಕೆಗಳನ್ನು ಈಡೇರಿಸದೇ ಚೆಲ್ಲಾಟವಾಡುತ್ತಿರುವುದು ಖಂಡನೀಯ. ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ತಕ್ಷಣವೇ ಈಡೇರಿಸಲು ಸರ್ಕಾರ ಮುಂದಾಗಬೇಕು ಎಂಬ ನಿಟ್ಟಿನಲ್ಲಿ ಅತಿಥಿ ಶಿಕ್ಷಕರೊಂದಿಗೆ ವಿದ್ಯಾರ್ಥಿಗಳು ಎಂಬ ಘೋಷ ...
ಮಂಗಳೂರು: ಮೂಡುಬಿದಿರೆ ಸಮೀಪದ ಬನ್ನಡ್ಕ ಎಂಬಲ್ಲಿನ ಎಸ್ ಕೆಎಫ್ ಕಾರ್ಖಾನೆಯಿಂದ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ಪಡುಮಾರ್ನಾಡು ಗ್ರಾಮ ಪಂಚಾಯತ್ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಎಸ್ ಕೆಎಫ್ ಕಾರ್ಖಾನೆಯಿಂದ ಕಳೆದ ಮೂರು ವರ್ಷದಿಂದ ತೀವ್ರ ತೊಂದರೆಯಾಗುತ್ತಿದೆ. ಈ ಬಗ್ಗೆ ಗ್ರಾಮ ಪಂಚಾಯತ್ ಅಧಿಕಾರಿಗಳು ತಕ್ಷಣವೇ ...